Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ಬರಲು ಅವನು ಎಲೀಯಾಬನನ್ನು ನೋಡಿ, ನಿಶ್ಚಯವಾಗಿ ಯೆಹೋವನು ಅಭಿಷೇಕಕ್ಕೆ ಆರಿಸಿಕೊಂಡವನು ಆತನ ಮುಂದೆ ಇದ್ದಾನೆ ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸಮುವೇಲನು ಎಲೀಯಾಬನನ್ನು ನೋಡಿ ತನ್ನಷ್ಟಕ್ಕೆ, “ನಿಶ್ಚಯವಾಗಿ ಸರ್ವೇಶ್ವರ ಅಭಿಷೇಕಕ್ಕೆ ಆರಿಸಿಕೊಂಡವನು ನನ್ನ ಮುಂದೆಯೇ ಇದ್ದಾನೆ,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರು ಬರಲು ಅವನು ಎಲೀಯಾಬನನ್ನು ನೋಡಿ - ನಿಶ್ಚಯವಾಗಿ ಯೆಹೋವನು ಅಭಿಷೇಕಕ್ಕೆ ಆರಿಸಿಕೊಂಡವನು ಆತನ ಮುಂದೆ ಇದ್ದಾನೆ ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇಷಯನು ಮತ್ತು ಅವನ ಮಕ್ಕಳು ಬಂದಾಗ, ಸಮುವೇಲನು ಎಲೀಯಾಬನನ್ನು ನೋಡಿದನು. ಸಮುವೇಲನು ತನ್ನಲ್ಲೇ ಯೋಚಿಸುತ್ತಾ, “ಯೆಹೋವನು ಆಯ್ಕೆ ಮಾಡಿರುವವನು ನಿಜವಾಗಿಯೂ ಅವನೇ ಇರಬೇಕು” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ಬಂದಾಗ, ಅವನು ಎಲೀಯಾಬನನ್ನು ಕಂಡು, “ನಿಶ್ಚಯವಾಗಿ ಯೆಹೋವ ದೇವರ ಅಭಿಷಿಕ್ತನು ಅವರ ಮುಂದೆ ಇದ್ದಾನೆ,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:6
10 ತಿಳಿವುಗಳ ಹೋಲಿಕೆ  

ಇವನ ಮೂರು ಹಿರಿಯ ಮಕ್ಕಳು ಸೌಲನ ಜೊತೆಯಲ್ಲಿ ಯುದ್ಧಕ್ಕೆ ಹೋಗಿದ್ದರು. ಅವರಲ್ಲಿ ಚೊಚ್ಚಲ ಮಗನ ಹೆಸರು ಎಲೀಯಾಬ, ಎರಡನೆಯ ಮಗನ ಹೆಸರು ಅಬೀನಾದಾಬ, ಮೂರನೆಯವನ ಹೆಸರು ಶಮ್ಮ,


ಇಷಯನ ಚೊಚ್ಚಲ ಮಗನು ಎಲೀಯಾಬ್, ಎರಡನೆಯ ಮಗ ಅಬೀನಾದಾಬ್,


ದಾವೀದನು ತಾನು ತಂದವುಗಳನ್ನು ಸಾಮಾನು ಕಾಯುವವನ ಬಳಿಯಲ್ಲಿಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸುತ್ತಾ ಅವರೊಡನೆ ಮಾತನಾಡುತ್ತಿದ್ದನು.


ಅವನು ಜೆಬಹ, ಚಲ್ಮುನ್ನರನ್ನು, “ನೀವು ತಾಬೋರದಲ್ಲಿ ಕೊಂದುಹಾಕಿದ ಮನುಷ್ಯರು ಹೇಗಿದ್ದರು?” ಎಂದು ಕೇಳಲಾಗಿ ಅವರು ಅವನಿಗೆ, “ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು” ಎಂದು ಉತ್ತರಕೊಟ್ಟರು.


ಯೆಹೂದ್ಯರಲ್ಲಿ ದಾವೀದನ ಅಣ್ಣನಾದ ಎಲೀಹು; ಇಸ್ಸಾಕಾರ್ಯರಲ್ಲಿ ಮೀಕಾಯೇಲನ ಮಗನಾದ ಒಮ್ರಿ;


ಅವನು ತನ್ನ ಮನಸ್ಸಿನಲ್ಲಿ, “ರಾಜ್ಯವು ಪುನಃ ದಾವೀದನ ಕುಟುಂಬದವರಿಗೆ ಆಗುವುದೋ ಏನೋ,


ಇಸ್ರಾಯೇಲರ ದೇವರಾದ ಯೆಹೋವನು ತನ್ನ ತಂದೆಯ ಮನೆಯವರೆಲ್ಲರಲ್ಲಿ ನನ್ನನ್ನೇ ಸದಾ ಇಸ್ರಾಯೇಲರ ಅರಸನಾಗುವುದಕ್ಕೆ ಆರಿಸಿಕೊಂಡನು. ಆತನು ಯೆಹೂದ ಕುಲವು ರಾಜಕುಲವಾಗಬೇಕೆಂದು ನೇಮಿಸಿ, ಆ ಕುಲದಲ್ಲಿ ನನ್ನ ತಂದೆಯ ಕುಟುಂಬವನ್ನು ಆರಿಸಿಕೊಂಡನು. ನನ್ನ ತಂದೆಯ ಎಲ್ಲಾ ಮಕ್ಕಳಲ್ಲಿ ನನ್ನನ್ನೇ ಮೆಚ್ಚಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದನು.


ರೆಹಬ್ಬಾಮನು ದಾವೀದನ ಮಗನಾದ ಯೆರೀಮೋತನ ಮಗಳಾದ ಮಹ್ಲತ್ತಳನ್ನು, ಇಷಯನ ಮೊಮ್ಮಗಳೂ ಎಲೀಯಾಬನ ಮಗಳೂ ಆದ ಅಬೀಹೈಲಳನ್ನೂ ಹೆಂಡತಿಯನ್ನಾಗಿ ಮಾಡಿಕೊಂಡನು.


ದೇವರೇ, ನಮಗೆ ಗುರಾಣಿಯಾಗಿರುವವನನ್ನು ನೋಡು; ನಿನ್ನ ಅಭಿಷಿಕ್ತನ ಮುಖವನ್ನು ಕಟಾಕ್ಷಿಸು.


ದೋರ್ ಗುಡ್ಡದ ಪ್ರದೇಶದಲ್ಲಿದ್ದ ಅಬೀನಾದಾಬನ ಮಗ, ಸೊಲೊಮೋನನ ಮಗಳಾದ ಟಾಫತಳು ಅವನ ಹೆಂಡತಿಯಾಗಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು