Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಯೆಹೋವನು ಸಮುವೇಲನಿಗೆ, “ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೆ ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ಯೆಹೋವನು ಸಮುವೇಲನಿಗೆ - ನೀನು ಅವನ ಚೆಲುವಿಕೆಯನ್ನೂ ನೀಳವನ್ನೂ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಯೆಹೋವನು ಸಮುವೇಲನಿಗೆ, “ಎಲೀಯಾಬನ ಎತ್ತರವನ್ನಾಗಲಿ ರೂಪವನ್ನಾಗಲಿ ಪರಿಗಣಿಸಬೇಡ. ಯಾಕೆಂದರೆ ನಾನು ಅವನನ್ನು ತಿರಸ್ಕರಿಸಿದ್ದೇನೆ. ಮನುಷ್ಯರಾದರೋ ಹೊರತೋರಿಕೆಯನ್ನು ಪರಿಗಣಿಸುತ್ತಾರೆ; ಯೆಹೋವನಾದರೋ ಹೊರತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ಯೆಹೋವ ದೇವರು ಸಮುಯೇಲನಿಗೆ, “ನೀನು ಅವನ ರೂಪವನ್ನೂ, ಅವನ ದೇಹದ ಎತ್ತರವನ್ನೂ ದೃಷ್ಟಿಸಬೇಡ. ಏಕೆಂದರೆ ಅವನನ್ನು ನಾನು ತಿರಸ್ಕರಿಸಿದೆನು; ಏಕೆಂದರೆ ಯೆಹೋವ ದೇವರು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ, ಹೃದಯವನ್ನೇ ನೋಡುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:7
34 ತಿಳಿವುಗಳ ಹೋಲಿಕೆ  

ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ನ್ಯಾಯಬದ್ಧವಾಗಿ ತೀರ್ಪುನ್ನು ಮಾಡಿರಿ” ಎಂದನು.


ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.


ಆಗ ಆತನು ಅವರಿಗೆ ಹೇಳಿದ್ದೇನಂದರೆ, “ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.


ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ.


ಮನುಷ್ಯನ ನಡತೆಯೆಲ್ಲಾ ಸ್ವಂತ ದೃಷ್ಟಿಗೆ ಶುದ್ಧವಾಗಿದೆ, ಯೆಹೋವನು ಅಂತರಂಗವನ್ನೇ ಪರೀಕ್ಷಿಸುವನು.


ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ, ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಲಾಲಿಸಿ, ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸು. ನೀನೊಬ್ಬನೇ ಎಲ್ಲಾ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡು.


“ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು” ಎಂದು ಪ್ರಾರ್ಥಿಸಿದರು.


ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ” ಎಂದು ಹೇಳಿದನು.


ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.


ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರೀಕ್ಷಿಸಿ ಶಿಷ್ಟರನ್ನು ಶೋಧಿಸುವ ಸೇನಾಧೀಶ್ವರನಾದ ಯೆಹೋವನೇ, ನೀನು ನನ್ನ ಹಿಂಸಕರಿಗೆ ಕೊಡುವ ಪ್ರತಿಫಲವನ್ನು ನನ್ನ ಕಣ್ಣು ನೋಡಲಿ; ನಿನಗೇ ನನ್ನ ವ್ಯಾಜ್ಯವನ್ನು ಅರಿಕೆಮಾಡಿದ್ದೇನಷ್ಟೆ.


ನಾನು ಕುಳಿತುಕೊಳ್ಳುವುದು, ಏಳುವುದು ನಿನಗೆ ಗೊತ್ತಿದೆ, ದೂರದಿಂದಲೇ ನನ್ನ ಆಲೋಚನೆಗಳನ್ನು ಬಲ್ಲವನಾಗಿರುತ್ತಿ.


ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


“ಅವನಿಂದ ಬಂದ ಪತ್ರಿಕೆಗಳು ಕಠೋರವಾದವುಗಳೂ, ಪ್ರಬಲವಾದವುಗಳೂ ಆಗಿವೆ. ಆದರೆ ದೈಹಿಕವಾಗಿ ಅವನು ದುರ್ಬಲನು ಅವನ ಮಾತುಗಳು ನಿಂದಾತ್ಮಕವಾದವುಗಳೆಂದು ಕೆಲವರು ಹೇಳುತ್ತಾರಲ್ಲಾ.”


ನೀವು ಜೀವವುಳ್ಳ ಕಲ್ಲಾಗಿರುವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲನ್ನು ಜನರು ನಿರಾಕರಿಸಿದರು ಆದರೆ ಅದು ದೇವರಿಂದ ಆರಿಸಿಕೊಳ್ಳಲ್ಪಟ್ಟದು ಮತ್ತು ಆತನಿಗೆ ಅಮೂಲ್ಯವಾದದ್ದು ಆಗಿದೆ.


ನೀನು ಮಾಂಸದ ಕಣ್ಣುಳ್ಳವನೋ? ಮನುಷ್ಯರು ನೋಡುವಂತೆ ನೋಡುತ್ತೀಯಾ?


ಸೌಂದರ್ಯದಲ್ಲಿ ಅಬ್ಷಾಲೋಮನಂತೆ ಹೆಸರುಗೊಂಡ ಪುರುಷನು ಇಸ್ರಾಯೇಲರಲ್ಲಿ ಒಬ್ಬನೂ ಇರಲಿಲ್ಲ. ಅವನಲ್ಲಿ ಅಂಗಾಲಿನಿಂದ ನಡುನೆತ್ತಿಯ ವರೆಗೂ ಒಂದು ದೋಷವಾದರೂ ಇರಲಿಲ್ಲ.


ಕೀಷನಿಗೆ ಸೌಲನೆಂಬ ಹೆಸರುಳ್ಳ ಒಬ್ಬ ಮಗನಿದ್ದನು. ಈ ಸೌಲನು ಯೌವನಸ್ಥನೂ, ಎಲ್ಲಾ ಇಸ್ರಾಯೇಲ್ಯರಲ್ಲಿ ಅತಿಸುಂದರನೂ ಆಗಿದ್ದನು. ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾಗಿದ್ದನು.


ಹೃದಯವನ್ನೂ, ಅಂತರಿಂದ್ರಿಯವನ್ನೂ ಪರೀಕ್ಷಿಸಿ, ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ, ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆಮಾಡಿದ್ದೇನಷ್ಟೆ ಎಂದು ಹೇಳಿದೆನು.


ಪಾತಾಳವೂ, ನಾಶಲೋಕವೂ ಯೆಹೋವನಿಗೆ ಗೋಚರವಾಗಿರುವಲ್ಲಿ ನರವಂಶದವರ ಹೃದಯಗಳು ಆತನಿಗೆ ಮತ್ತೂ ಸ್ಪಷ್ಟ.


ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.


ನೀವು ಬಾಹ್ಯವಾದುದ್ದುನ್ನು ಮಾತ್ರ ನೋಡುತ್ತೀರಿ. ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ಒಪ್ಪಿಕೊಂಡರೆ ಅವನು ಆಲೋಚನೆಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ತಿಳಿದುಕೊಳ್ಳಲಿ.


ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ, ನಾನು ಯಾರಿಗೂ ತೀರ್ಪು ಮಾಡುವುದಿಲ್ಲ.


ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು, ಅವನ ಮುಖವು ಸಿಟ್ಟಿನಿಂದ ಕಳೆಗುಂದಿತು.


“ಇನ್ನು ಮುಂದೆ ಗರ್ವದಿಂದ ಮಾತನಾಡಬೇಡಿರಿ; ಸೊಕ್ಕಿನ ಮಾತು ನಿಮ್ಮ ಬಾಯಿಂದ ಹೊರಡದಿರಲಿ. ದೇವರಾದ ಯೆಹೋವನು ಸರ್ವಜ್ಞನು; ಆತನು ಮನುಷ್ಯರ ಕ್ರಿಯೆಗಳನ್ನು ತೂಗಿನೋಡುವನು.


ಕರ್ತನೇ ಯೆಹೋವನೇ, ನೀನು ನಿನ್ನ ಸೇವಕನಾದ ದಾವೀದನನ್ನು ಬಲ್ಲೆ. ನಾನು ಇನ್ನೇನು ಹೇಳಲಿ?


ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅಲಿಸಿ ಅವರಿಗೆ ಪಾಪ ಕ್ಷಮೆಯನ್ನು ಅನುಗ್ರಹಿಸು. ನೀನೊಬ್ಬನೇ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡು.


“ಇದು ನನಗೆ ಗೊತ್ತಿರಲಿಲ್ಲ” ಎಂದು ನೀನು ನೆವ ಹೇಳಿದರೆ, ಹೃದಯಶೋಧಕನು ಗ್ರಹಿಸುವುದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ತಿಳಿಯುವುದಿಲ್ಲವೋ? ಪ್ರತಿಯೊಬ್ಬನ ಕರ್ಮಕ್ಕೆ ಪ್ರತಿಫಲವನ್ನು ಕೊಡದೆ ಬಿಟ್ಟಾನೇ?


ನೀನು ನಿನ್ನ ಸೇವಕನಾದ ದಾವೀದನನ್ನು ಬಲ್ಲೆ. ಅವನು ತನಗುಂಟಾದ ಘನತೆಯನ್ನು ಕುರಿತು ಇನ್ನೇನು ಹೇಳಾನು.


ಕಣ್ಣೆತ್ತಿ ಗಗನಮಂಡಲವನ್ನು ನೋಡು, ಮೇಘಮಾರ್ಗವನ್ನು ದೃಷ್ಟಿಸು, ಅವು ನಿನಗಿಂತ ಎಷ್ಟೋ ಎತ್ತರವಾಗಿವೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು