Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇಸ್ರಾಯೇಲರು ಅವನನ್ನು ನೋಡಿ ಬಹಳವಾಗಿ ಭಯಪಟ್ಟು ಅಲ್ಲಿಂದ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಇಸ್ರಯೇಲರು ಅವನನ್ನು ನೋಡಿ ಭಯಭೀತಿಯಿಂದ ಓಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇಸ್ರಾಯೇಲ್ಯರು ಅವನನ್ನು ನೋಡಿ ಬಹಳವಾಗಿ ಭಯಪಟ್ಟು ಅಲ್ಲಿಂದ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಇಸ್ರೇಲ್ ಸೈನಿಕರು ಗೊಲ್ಯಾತನನ್ನು ಕಂಡು ಬಹಳವಾಗಿ ಭಯಪಟ್ಟು ಅಲ್ಲಿಂದ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇಸ್ರಾಯೇಲರೆಲ್ಲರೂ ಅವನನ್ನು ಕಂಡಾಗ, ಅವನ ಬಳಿಯಿಂದ ಓಡಿಹೋದರು; ಬಹು ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:24
9 ತಿಳಿವುಗಳ ಹೋಲಿಕೆ  

ಒಬ್ಬನ ಬೆದರಿಕೆಗೆ ಒಂದು ಸಾವಿರ ಜನರು ಓಡುವರು; ಐವರು ಬೆದರಿಸುವುದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಿನ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.”


ಅರಾಮ್ಯರು ಎಫ್ರಾಯೀಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂಬ ಸುದ್ದಿಯು ದಾವೀದನ ಮನೆಗೆ ಮುಟ್ಟಿದಾಗ ಆಹಾಜನ ಮತ್ತು ಅವನ ಪ್ರಜೆಯ ಹೃದಯವು ಅರಣ್ಯದ ಗಾಳಿಯಿಂದ ವನವೃಕ್ಷಗಳು ಅಲ್ಲಾಡುವಂತೆ ನಡುಗಿದವು.


ಸೌಲನೂ ಎಲ್ಲಾ ಇಸ್ರಾಯೇಲರೂ ಆ ಫಿಲಿಷ್ಟಿಯನ ಮಾತುಗಳನ್ನು ಕೇಳಿ ಎದೆಗುಂದಿದವರಾಗಿ ಬಹಳ ಭಯಪಟ್ಟರು.


ಅವರ ಆಶ್ರಯದುರ್ಗವಾದ ಯೆಹೋವನು ಅವರನ್ನು ಶತ್ರಗಳಿಗೆ ಒಪ್ಪಿಸಿಕೊಡದಿದ್ದರೆ ಒಬ್ಬನಿಂದ ಸಾವಿರ ಜನರು ಹೇಗೆ ಸೋತುಹೋಗುತ್ತಿದ್ದರು? ಯೆಹೋವನು ಅವರನ್ನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತು ಸಾವಿರ ಜನರು ಹೇಗೆ ಓಡಿಹೋಗುತ್ತಿದ್ದರು?


ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಉನ್ನತ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳಂತೆ ಇದ್ದೇವೆ ಎಂದು ತಿಳಿದುಕೊಂಡೆವು. ಅವರಿಗೂ ನಾವು ಹಾಗೆಯೇ ಕಾಣಿಸಿದೆವು” ಎಂದು ಹೇಳಿದರು.


“ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು.


ಅಷ್ಟರಲ್ಲಿ ಗತ್ ಊರಿನ ಯುದ್ಧವೀರನಾದ ಗೊಲ್ಯಾತನೆಂಬ ಆ ಫಿಲಿಷ್ಟಿಯನು ತನ್ನ ಸೈನ್ಯದಿಂದ ಹೊರಗೆ ಬಂದು ಮುಂಚಿನಂತೆಯೇ ಕೂಗಿದನು. ದಾವೀದನು ಅವನ ಮಾತುಗಳನ್ನು ಕೇಳಿದನು.


ಅವರು, “ಇಸ್ರಾಯೇಲ್ಯರಾದ ನಮ್ಮನ್ನು ಹೀಯಾಳಿಸುವುದಕ್ಕೋಸ್ಕರ ಬಂದಿರುವ ಈ ಮನುಷ್ಯನನ್ನು ಕಂಡಿರಾ? ಯಾವನು ಇವನನ್ನು ಕೊಲ್ಲುವನೋ ಅಂಥವನಿಗೆ ಅರಸನು ಅಪಾರದ್ರವ್ಯದೊಡನೆ ತನ್ನ ಮಗಳನ್ನು ಕೊಟ್ಟು ಮದುವೆ ಮಾಡುವನು. ಇದಲ್ಲದೆ ಅವನ ತಂದೆಯ ಕುಟುಂಬವನ್ನು ಎಲ್ಲಾ ತೆರಿಗೆಯಿಂದ ವಿಮೋಚಿಸುವನು” ಎಂದು ಮಾತನಾಡಿಕೊಳ್ಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು