1 ಸಮುಯೇಲ 17:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವರು, “ಇಸ್ರಾಯೇಲ್ಯರಾದ ನಮ್ಮನ್ನು ಹೀಯಾಳಿಸುವುದಕ್ಕೋಸ್ಕರ ಬಂದಿರುವ ಈ ಮನುಷ್ಯನನ್ನು ಕಂಡಿರಾ? ಯಾವನು ಇವನನ್ನು ಕೊಲ್ಲುವನೋ ಅಂಥವನಿಗೆ ಅರಸನು ಅಪಾರದ್ರವ್ಯದೊಡನೆ ತನ್ನ ಮಗಳನ್ನು ಕೊಟ್ಟು ಮದುವೆ ಮಾಡುವನು. ಇದಲ್ಲದೆ ಅವನ ತಂದೆಯ ಕುಟುಂಬವನ್ನು ಎಲ್ಲಾ ತೆರಿಗೆಯಿಂದ ವಿಮೋಚಿಸುವನು” ಎಂದು ಮಾತನಾಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 “ನೋಡಿದಿರೋ, ಇಸ್ರಯೇಲರಾದ ನಮ್ಮನ್ನು ತೃಣೀಕರಿಸಲು ಬಂದಿರುವ ಈ ವ್ಯಕ್ತಿಯನ್ನು? ಇವನನ್ನು ಕೊಲ್ಲುವವನಿಗೆ ಅರಸ ಅಪಾರ ದ್ರವ್ಯಕೊಡುವರು; ತಮ್ಮ ಮಗಳನ್ನೇ ಕೊಟ್ಟು ಮದುವೆಮಾಡುವರು; ಅಲ್ಲದೆ ಅಂಥವನ ಕುಟುಂಬಕ್ಕೆ ಎಲ್ಲಾ ತೆರಿಗೆ ಕಂದಾಯದಿಂದ ವಿನಾಯಿತಿ ದೊರಕುವುದು,” ಎಂದು ಮಾತಾಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವರು - ಇಸ್ರಾಯೇಲ್ಯರಾದ ನಮ್ಮನ್ನು ಹೀಯಾಳಿಸುವದಕ್ಕೋಸ್ಕರ ಬಂದಿರುವ ಈ ಮನುಷ್ಯನನ್ನು ಕಂಡಿರಾ! ಯಾವನು ಇವನನ್ನು ಕೊಲ್ಲುವನೋ ಅಂಥವನಿಗೆ ಅರಸನು ಅಪಾರದ್ರವ್ಯದೊಡನೆ ತನ್ನ ಮಗಳನ್ನು ಕೊಟ್ಟು ಮದುವೆ ಮಾಡುವನು; ಇದಲ್ಲದೆ ಅವನ ಕುಟುಂಬಕ್ಕೆ ಸರ್ವಮಾನ್ಯವನ್ನು ಕೊಡುವನು ಎಂದು ಮಾತಾಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಇಸ್ರೇಲರಲ್ಲಿನ ಒಬ್ಬನು, “ನೀವು ಅವನನ್ನು ನೋಡಿದಿರಾ! ಅವನನ್ನು ನೋಡಿ! ಆ ಗೊಲ್ಯಾತನು ಪ್ರತಿನಿತ್ಯ ಹೊರಗೆ ಬಂದು ಇಸ್ರೇಲರನ್ನು ಮತ್ತೆಮತ್ತೆ ಹಾಸ್ಯಮಾಡುತ್ತಿದ್ದಾನೆ. ಅವನನ್ನು ಕೊಂದವನಿಗೆ ಸೌಲನು ಅಪಾರ ಐಶ್ವರ್ಯವನ್ನು ಕೊಡುವುದಲ್ಲದೆ ತನ್ನ ಮಗಳನ್ನೂ ಅವನಿಗೆ ಕೊಟ್ಟು ಮದುವೆ ಮಾಡುತ್ತಾನೆ; ಅಲ್ಲದೆ ಅವನ ವಂಶವನ್ನು ಇಸ್ರೇಲಿನಲ್ಲಿ ಸ್ವತಂತ್ರಗೊಳಿಸುತ್ತಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಇಸ್ರಾಯೇಲರು, “ಏರಿ ಬಂದ ಈ ಮನುಷ್ಯನನ್ನು ಕಂಡಿರೋ? ಇಸ್ರಾಯೇಲನ್ನು ಪ್ರತಿಭಟಿಸಿ ಏರಿ ಬಂದಿದ್ದಾನಲ್ಲ. ಯಾವನು ಇವನನ್ನು ಕೊಂದು ಬಿಡುವನೋ, ಅವನನ್ನು ಅರಸನು ಬಹಳ ಐಶ್ವರ್ಯವಂತನನ್ನಾಗಿ ಮಾಡಿ, ಅವನಿಗೆ ತನ್ನ ಮಗಳನ್ನು ಕೊಟ್ಟು ಮದುವೆ ಮಾಡಿಸುವನು ಮತ್ತು ಅವನ ತಂದೆಯ ಮನೆಯನ್ನು ಇಸ್ರಾಯೇಲರಲ್ಲಿ ತೆರಿಗೆಯಿಂದ ವಿಮೋಚಿಸುವನು,” ಎಂದರು. ಅಧ್ಯಾಯವನ್ನು ನೋಡಿ |