1 ಸಮುಯೇಲ 17:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ತನ್ನ ಕೋಲನ್ನು ತೆಗೆದುಕೊಂಡು ಹೊರಟು, ಹಳ್ಳದಲ್ಲಿನ ಐದು ನುಣುಪುಕಲ್ಲುಗಳನ್ನು ಆರಿಸಿಕೊಂಡು, ಅವುಗಳನ್ನು ಕುರುಬರ ಪದ್ಧತಿಯಂತೆ ತನಗಿರುವ ಸೊಂಟದ ಚೀಲದಲ್ಲಿ ಹಾಕಿ ಕೈಯಲ್ಲಿ ಕವಣೆಯನ್ನು ಹಿಡಿದು ಫಿಲಿಷ್ಟಿಯನ ಬಳಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಕುರಿಕಾಯುವ ತನ್ನ ಕೋಲನ್ನೇ ತೆಗೆದುಕೊಂಡು ಹೊರಟನು. ಒಂದು ಹಳ್ಳಕ್ಕೆ ಹೋಗಿ ಐದು ನುಣುಪು ಕಲ್ಲುಗಳನ್ನು ಆರಿಸಿಕೊಂಡನು. ಕುರುಬರ ಪದ್ಧತಿಯಂತೆ ಅವುಗಳನ್ನು ತನ್ನ ಸೊಂಟಚೀಲದಲ್ಲಿ ಹಾಕಿಕೊಂಡನು. ಕೈಯಲ್ಲಿ ಕವಣೆಯನ್ನು ಹಿಡಿದು, ಆ ಫಿಲಿಷ್ಟಿಯನನ್ನು ಎದುರಿಸಲು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ತನ್ನ ಕೋಲನ್ನು ತೆಗೆದುಕೊಂಡು ಹೊರಟು ಹಳ್ಳದಲ್ಲಿ ಐದು ನುಣುಪುಕಲ್ಲುಗಳನ್ನು ಆರಿಸಿಕೊಂಡು ಅವುಗಳನ್ನು ಕುರುಬರ ಪದ್ಧತಿಯಂತೆ ತನಗಿರುವ ಸೊಂಟಚೀಲದಲ್ಲಿ ಹಾಕಿ ಕೈಯಲ್ಲಿ ಕವಣೆಯನ್ನು ಹಿಡಿದು ಫಿಲಿಷ್ಟಿಯನ ಬಳಿಗೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ದಾವೀದನು ತನ್ನ ಕೋಲನ್ನು ಕೈಯಲ್ಲಿ ಹಿಡಿದುಕೊಂಡು, ಕಣಿವೆಯಲ್ಲಿ ಐದು ನುಣುಪುಕಲ್ಲುಗಳನ್ನು ಆರಿಸಿಕೊಂಡು ಅವುಗಳನ್ನು ಕುರಿಕಾಯಲು ಬಳಸುವ ಚೀಲದಲ್ಲಿ ಹಾಕಿಕೊಂಡು ಕವಣೆಯನ್ನು ಕೈಯಲ್ಲಿ ಹಿಡಿದುಕೊಂಡನು. ನಂತರ ಗೊಲ್ಯಾತನನ್ನು ಎದುರಿಸಲು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ತನ್ನ ಕೋಲನ್ನು ಕೈಯಲ್ಲಿ ಹಿಡಿದು, ಹಳ್ಳದಲ್ಲಿರುವ ಐದು ನುಣುಪಾದ ಕಲ್ಲುಗಳನ್ನು ಆಯ್ದುಕೊಂಡು, ಅವುಗಳನ್ನು ಕುರಿಕಾಯಲು ಬಳಸುವ ತನ್ನ ಚೀಲದಲ್ಲಿ ಹಾಕಿಕೊಂಡು ಕವಣೆಯನ್ನು ತನ್ನ ಕೈಯಲ್ಲಿ ಹಿಡಿದುಕೊಂಡು, ಆ ಫಿಲಿಷ್ಟಿಯನ ಬಳಿಗೆ ಹೋದನು. ಅಧ್ಯಾಯವನ್ನು ನೋಡಿ |