Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:58 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

58 ಸೌಲನು ಅವನನ್ನು, “ಹುಡುಗನೇ ನೀನು ಯಾರ ಮಗನು?” ಎಂದು ಕೇಳಿದ್ದಕ್ಕೆ ಅವನು, “ನಾನು ಬೇತ್ಲೆಹೇಮಿನವನೂ ನಿನ್ನ ಸೇವಕನೂ ಆದ ಇಷಯನ ಮಗನು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

58 ಸೌಲನು ಅವನನ್ನು, “ತರುಣನೇ, ನೀನು ಯಾರ ಮಗ?” ಎಂದು ಕೇಳಿದನು. ಅದಕ್ಕೆ ಅವನು, “ನಾನು ಬೆತ್ಲೆಹೇಮಿನವನೂ ನಿಮ್ಮ ಸೇವಕನೂ ಆದ ಜೆಸ್ಸೆಯನ ಮಗ,” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

58 ಸೌಲನು ಅವನನ್ನು - ಹುಡುಗನೇ, ನೀನು ಯಾರ ಮಗನೆಂದು ಕೇಳಿದ್ದಕ್ಕೆ ಅವನು - ನಾನು ಬೇತ್ಲೆಹೇವಿುನವನೂ ನಿನ್ನ ಸೇವಕನೂ ಆದ ಇಷಯನ ಮಗನು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

58 ಸೌಲನು, “ಯುವಕನೇ, ನಿನ್ನ ತಂದೆ ಯಾರು?” ಎಂದು ಪ್ರಶ್ನಿಸಿದನು. ದಾವೀದನು, “ನಾನು ನಿಮ್ಮ ಸೇವಕನಾದ ಬೆತ್ಲೆಹೇಮಿನ ಇಷಯನ ಮಗ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

58 ಆಗ ಸೌಲನು, “ಯೌವನಸ್ಥನೇ, ನೀನು ಯಾರ ಮಗನು?” ಎಂದು ಅವನನ್ನು ಕೇಳಿದನು. ಅದಕ್ಕೆ ದಾವೀದನು, “ನಾನು ನಿನ್ನ ಸೇವಕನಾಗಿರುವ ಬೇತ್ಲೆಹೇಮಿನವನಾದ ಇಷಯನ ಮಗನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:58
5 ತಿಳಿವುಗಳ ಹೋಲಿಕೆ  

ಸೌಲನ ಕಾಲದಲ್ಲಿ ಯೆಹೂದ ಬೇತ್ಲೆಹೇಮ್ ಎಂಬ ಊರಿನ ಎಫ್ರಾತ್ಯನಾದ ಇಷಯನೆಂಬ ಒಬ್ಬ ವೃದ್ಧನಿದ್ದನು. ಇವನ ಎಂಟು ಮಂದಿ ಮಕ್ಕಳಲ್ಲಿ ದಾವೀದನು ಒಬ್ಬನು.


ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.


ನಿನ್ನ ತಂದೆಯು ನನ್ನನ್ನು ಕುರಿತು ವಿಚಾರ ಮಾಡಿದರೆ, ನೀನು, ‘ದಾವೀದನು ತನ್ನ ಊರಾದ ಬೇತ್ಲೆಹೇಮಿಗೆ ಹೋಗಿ ಬರುವುದಕ್ಕೆ ಅಪ್ಪಣೆಯಾಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು. ಅವನ ಗೋತ್ರದವರು ಅಲ್ಲಿ ವಾರ್ಷಿಕ ಯಜ್ಞಮಾಡುತ್ತಾರೆ’ ಎಂದು ಹೇಳು.


ಅವರು ಅಸಾಹೇಲನ ಶವವನ್ನು ತಂದು ಅದನ್ನು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅನಂತರ ಯೋವಾಬನೂ, ಅವನ ಜನರೂ ರಾತ್ರಿಯೆಲ್ಲಾ ಪ್ರಯಾಣಮಾಡಿ ಹೆಬ್ರೋನಿಗೆ ಬಂದರು. ಆಗ ಸೂರ್ಯೋದಯವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು