Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನು ನನ್ನೊಡನೆ ಯುದ್ಧಮಾಡಿ ನನ್ನನ್ನು ಕೊಂದರೆ ನಾವು ನಿಮಗೇ ದಾಸರಾಗಿರುವೆವು. ಆದರೆ ನಾನು ಅವನನ್ನು ಸೋಲಿಸಿ ಕೊಂದರೆ ಆಗ ನೀವು ನಮ್ಮ ಗುಲಾಮರಾಗಿ ನಮ್ಮನ್ನು ಸೇವೆಮಾಡುವವರಾಗುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವನು ನನ್ನೊಡನೆ ಯುದ್ಧಮಾಡಿ ನನ್ನನ್ನು ಕೊಲ್ಲಲಿ; ಆಗ ನಮ್ಮವರು ನಿಮ್ಮ ಗುಲಾಮರಾಗುವರು. ನಾನು ಅವನನ್ನು ಸೋಲಿಸಿ ಕೊಂದರೆ ನೀವು ನಮಗೆ ಗುಲಾಮರಾಗಿ ನಮಗೆ ಸೇವೆಮಾಡಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನು ನನ್ನೊಡನೆ ಯುದ್ಧಮಾಡಿ ನನ್ನನ್ನು ಸೋಲಿಸಿ ಕೊಂದರೆ ನಮ್ಮವರು ನಿಮ್ಮ ಸೇವಕರಾಗುವರು; ನಾನು ಅವನನ್ನು ಸೋಲಿಸಿ ಕೊಂದರೆ ನೀವು ನಮ್ಮ ದಾಸರಾಗಿ ನಮ್ಮನ್ನು ಸೇವಿಸಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವನು ನನ್ನನ್ನು ಕೊಂದುಬಿಟ್ಟರೆ, ನಾವು ಅಂದರೆ ಫಿಲಿಷ್ಟಿಯರೆಲ್ಲ ನಿಮ್ಮ ಗುಲಾಮರಾಗುತ್ತೇವೆ. ಆದರೆ ನಾನು ಅವನನ್ನು ಸೋಲಿಸಿ ಕೊಂದುಬಿಟ್ಟರೆ, ನೀವೆಲ್ಲ ನಮಗೆ ಗುಲಾಮರಾಗಿದ್ದು ನಮ್ಮ ಸೇವೆಯನ್ನು ಮಾಡಬೇಕು” ಎಂದು ಆರ್ಭಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವನು ನನ್ನ ಸಂಗಡ ಯುದ್ಧಮಾಡಿ ನನ್ನನ್ನು ಕೊಂದರೆ, ನಾವು ನಿಮಗೆ ಸೇವಕರಾಗುವೆವು. ಆದರೆ ನಾನು ಅವನನ್ನು ಸೋಲಿಸಿ ಕೊಂದರೆ ನೀವು ನಮಗೆ ಸೇವಕರಾಗಿದ್ದು ನಮ್ಮನ್ನು ಸೇವಿಸಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:9
3 ತಿಳಿವುಗಳ ಹೋಲಿಕೆ  

ಅಮ್ಮೋನಿಯನಾದ ನಾಹಾಷನು ಹೊರಟು ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಲು, ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನನ್ನು ಸೇವಿಸುವೆವು” ಎಂದು ಬೇಡಿಕೊಂಡರು.


ಒಂದು ದಿನ ನೇರನ ಮಗನಾದ ಅಬ್ನೇರನೂ, ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಿನಿಂದ ಹೊರಟು ಗಿಬ್ಯೋನಿಗೆ ಬಂದರು.


ಮತ್ತು ಅವನು, “ಈಹೊತ್ತು ಇಸ್ರಾಯೇಲ ಸೈನ್ಯದವರನ್ನು ಕುರಿತು. ನನ್ನೊಡನೆ ಕಾಳಗಕ್ಕೆ ನಿಮ್ಮಲ್ಲಿಂದ ಒಬ್ಬ ಮನುಷ್ಯನನ್ನು ಕಳುಹಿಸಿರಿ ನೋಡೋಣ” ಎಂದು ಸವಾಲು ಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು