1 ಸಮುಯೇಲ 18:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಮರುದಿನ ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದದ್ದರಿಂದ ಅವನು ಬುದ್ಧಿಗೆಟ್ಟು ಮನೆಯೊಳಗೆ ಕೂಗುತ್ತಿದ್ದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ದಾವೀದನು ವಾಡಿಕೆಯ ಪ್ರಕಾರ ಕಿನ್ನರಿಯನ್ನು ನುಡಿಸುತ್ತಾ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಮಾರನೆಯ ದಿನ ದೇವರಿಂದ ಬಂದ ದುರಾತ್ಮವೊಂದು ಸೌಲನನ್ನು ಆವರಿಸಿತು. ಅವನು ಬುದ್ಧಿಗೆಟ್ಟು ಮನೆಯೊಳಗೇ ಕೂಗಾಡತೊಡಗಿದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ವಾಡಿಕೆಯ ಪ್ರಕಾರ ದಾವೀದನು ಕಿನ್ನರಿ ಬಾರಿಸುತ್ತಾ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಮರುದಿನ ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದದರಿಂದ ಅವನು ಬುದ್ಧಿಗೆಟ್ಟು ಮನೆಯೊಳಗೆ ಕೂಗುತ್ತಿದ್ದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ದಾವೀದನು ಕ್ರಮದ ಪ್ರಕಾರ ಕಿನ್ನರಿಯನ್ನು ಬಾರಿಸುತ್ತಾ ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಮಾರನೆಯ ದಿನ, ದೇವರಿಂದ ಬಂದ ದುರಾತ್ಮವು ಸೌಲನನ್ನು ಸಂಪೂರ್ಣವಾಗಿ ವಶಪಡಿಸಿಕೊಂಡಿತು. ಸೌಲನು ತನ್ನ ಮನೆಯಲ್ಲಿ ಹುಚ್ಚನಂತೆ ಕೂಗಿಕೊಳ್ಳುತ್ತಿದ್ದನು. ಆಗ ದಾವೀದನು ಎಂದಿನಂತೆ ಕಿನ್ನರಿಯನ್ನು ಬಾರಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಮಾರನೆಯ ದಿವಸದಲ್ಲಿ ದೇವರಿಂದ ಅನುಮತಿಸಿದ ದುರಾತ್ಮವು ಸೌಲನ ಮೇಲೆ ಇಳಿಯಿತು. ಅವನು ಬುದ್ಧಿಗೆಟ್ಟು ಮನೆಯಲ್ಲಿ ಕೂಗಾಡತೊಡಗಿದನು. ಆಗ ದಾವೀದನು ಪ್ರತಿದಿನ ಮಾಡುತ್ತಿದ್ದ ಹಾಗೆಯೇ ತನ್ನ ಕೈಯಿಂದ ಕಿನ್ನರಿಯನ್ನು ಬಾರಿಸುತ್ತಿದ್ದನು. ಆದರೆ ಸೌಲನ ಕೈಯಲ್ಲಿ ಈಟಿಯು ಇತ್ತು. ಅಧ್ಯಾಯವನ್ನು ನೋಡಿ |
ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ಯದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು.