Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನನ್ನು ತನ್ನ ಸಾನ್ನಿಧ್ಯಸೇವೆಯಿಂದ ತಪ್ಪಿಸಿ, ಸೈನ್ಯದಲ್ಲಿ ಸಹಸ್ರಾಧಿಪತಿಯನ್ನಾಗಿ ನೇಮಿಸಿದನು. ಹೀಗೆ ದಾವೀದನು ಜನರ ಸಂಗಡ ಹೋಗುತ್ತಾ ಬರುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವನನ್ನು ತನ್ನ ಸಾನ್ನಿಧ್ಯ ಸೇವೆಯಿಂದ ತೆಗೆದು ಸೈನ್ಯದ ಒಬ್ಬ ಸಹಸ್ರಾಧಿಪತಿಯನ್ನಾಗಿ ನೇಮಿಸಿದನು. ದಾವೀದನು ದಳಪತಿಯಾಗಿ ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವನನ್ನು ತನ್ನ ಸಾನ್ನಿಧ್ಯಸೇವೆಯಿಂದ ತಪ್ಪಿಸಿ ಸೈನ್ಯದಲ್ಲಿ ಸಹಸ್ರಾಧಿಪತಿಯನ್ನಾಗಿ ನೇವಿುಸಿದನು; ಇವನು ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸೌಲನು ದಾವೀದನನ್ನು ತನ್ನಿಂದ ದೂರಕಳುಹಿಸಿದನು. ಸೌಲನು ದಾವೀದನನ್ನು ಒಂದು ಸಾವಿರ ಸೈನಿಕರಿಗೆ ಸೇನಾಪತಿಯನ್ನಾಗಿ ಮಾಡಿದನು. ದಾವೀದನು ಯುದ್ಧದಲ್ಲಿ ಸೈನಿಕರನ್ನು ಮುನ್ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ ಸೌಲನು ಅವನನ್ನು ತನ್ನ ಬಳಿಯಿಂದ ಹೊರಡಿಸಿಬಿಟ್ಟು, ಸಾವಿರ ಜನರಿಗೆ ಪ್ರಧಾನನ್ನಾಗಿ ಮಾಡಿದನು. ಹಾಗೆಯೇ ಅವನು ದಳಪತಿಯಾಗಿ ಸೈನಿಕರನ್ನು ಕರೆದುಕೊಂಡು ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:13
7 ತಿಳಿವುಗಳ ಹೋಲಿಕೆ  

ಹಿಂದಿನ ದಿನಗಳಲ್ಲಿ ಅಂದರೆ, ಸೌಲನ ಆಡಳಿತದಲ್ಲಿ, ಇಸ್ರಾಯೇಲರ ದಳಾಧಿಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನೆ’” ಅಂದರು.


ನೀನು ಹೋಗುವಾಗಲೂ, ಬರುವಾಗಲೂ, ಈಗಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು.


ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ, “ಬೆನ್ಯಾಮೀನನ ಮಕ್ಕಳೇ ಕೇಳಿರಿ. ನೀವೆಲ್ಲರೂ ನನಗೆ ಒಳಸಂಚು ಮಾಡುವುದೇಕೆ? ಇಷಯನ ಮಗನು ನಿಮ್ಮೆಲ್ಲರಿಗೂ ಹೊಲಗಳನ್ನು, ದ್ರಾಕ್ಷಿತೋಟಗಳನ್ನು ಕೊಡುವನೋ? ಎಲ್ಲರನ್ನು ಸಹಸ್ರಾಧಿಪತಿಗಳನ್ನಾಗಲಿ, ಶತಾಧಿಪತಿಗಳನ್ನಾಗಲಿ ಮಾಡುವನೋ?


ಆಗ ಅವನು ಅವರಿಗೆ, “ನೀವು ಹೋಗಿ ದಾವೀದನಿಗೆ, ‘ಅರಸನು ತೆರವನ್ನು ಅಪೇಕ್ಷಿಸುವುದಿಲ್ಲ. ತನ್ನ ಶತ್ರುಗಳಾದ ಫಿಲಿಷ್ಟಿಯರಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರು ಮಂದಿಯ ಮುಂದೊಗಲನ್ನು ತಂದುಕೊಡಬೇಕು ಅನ್ನುತ್ತಾನೆ’ ಎಂದು ಹೇಳಿರಿ” ಎಂದು ಆಜ್ಞಾಪಿಸಿದನು. ದಾವೀದನನ್ನು ಫಿಲಿಷ್ಟಿಯರಿಂದ ಕೊಲ್ಲಿಸಬೇಕೆಂಬುದೇ ಅವನ ಉದ್ದೇಶವಾಗಿತ್ತು.


ಕೆಲವರನ್ನು ಸಹಸ್ರಾಧಿಪತಿಗಳನ್ನಾಗಿಯೂ, ಕೆಲವರನ್ನು ಪಂಚಶತಾಧಿಪತಿಗಳನ್ನಾಗಿಯೂ ನೇಮಿಸುವನು. ಇನ್ನು ಕೆಲವರು ಅವನ ಭೂಮಿಯನ್ನು ಉಳುವವರೂ, ಪೈರನ್ನು ಕೊಯ್ಯುವವರೂ, ಯುದ್ಧಕ್ಕೆ ಬೇಕಾದ ಆಯುಧ, ರಥಸಾಮಾಗ್ರಿಗಳನ್ನು ಮಾಡುವವರೂ ಆಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು