Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನು ಅವನ ಸಂಗಡ ಇದ್ದದರಿಂದ ದಾವೀದನು ಎಲ್ಲಾ ಕಾರ್ಯಗಳನ್ನು ವಿವೇಕದಿಂದ ನಡೆಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರ ಅವನೊಂದಿಗೆ ಇದ್ದುದರಿಂದ ಅವನು ಎಲ್ಲ ಕಾರ್ಯಗಳಲ್ಲಿ ವಿವೇಕದಿಂದ ವರ್ತಿಸಿ ಜಯಶಾಲಿಯಾಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನು ಇವನ ಸಂಗಡ ಇದ್ದದರಿಂದ ಎಲ್ಲಾ ಕಾರ್ಯಗಳಲ್ಲಿ ಇವನು ವಿವೇಕದಿಂದ ನಡೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ದಾವೀದನ ಜೊತೆಗಿದ್ದನು. ಆದ್ದರಿಂದ ದಾವೀದನು ಎಲ್ಲದರಲ್ಲೂ ಯಶ್ವಸಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರು ದಾವೀದನ ಸಂಗಡ ಇದ್ದುದರಿಂದ ಅವನು ತನ್ನ ಸಕಲ ಮಾರ್ಗಗಳಲ್ಲಿ ವಿವೇಕದಿಂದ ವರ್ತಿಸಿ ಜಯಶಾಲಿಯಾಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:14
18 ತಿಳಿವುಗಳ ಹೋಲಿಕೆ  

ಯೆಹೋವನು ಅವನ ಸಂಗಡ ಇದ್ದು ಅವನು ನಡಿಸಿದ್ದೆಲ್ಲವನ್ನು ಸಫಲಗೊಳಿಸಿದ್ದರಿಂದ ಅವನ ವಶಕ್ಕೆ ಒಪ್ಪಿಸಿದ್ದ ಯಾವ ವಿಷಯದ ಕುರಿತಾಗಿಯೂ ಸೆರೆಮನೆಯ ಯಜಮಾನನು ಯೋಚಿಸದೆ ನಿಶ್ಚಿಂತನಾಗಿದ್ದನು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.


ಸೇವಕರಲ್ಲೊಬ್ಬನು ಅವನಿಗೆ, “ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಕಿನ್ನರಿ ನುಡಿಸಬಲ್ಲವನೂ, ಪರಾಕ್ರಮಶಾಲಿಯೂ, ಯುದ್ಧ ನಿಪುಣನೂ, ವಾಕ್ಚತುರನೂ, ಸುಂದರನೂ, ಯೆಹೋವನ ಅನುಗ್ರಹವನ್ನು ಹೊಂದಿದವನೂ ಆಗಿದ್ದಾನೆ” ಎಂದು ತಿಳಿಸಿದನು.


ಯೆಹೋವನು ಯೆಹೋಶುವನ ಸಂಗಡ ಇದ್ದುದರಿಂದ ಅವನ ಕೀರ್ತಿ ದೇಶದಲ್ಲೆಲ್ಲಾ ಹಬ್ಬಿತು.


ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನಗೆ ಕೇಡು ಮಾಡುವುದಿಲ್ಲ; ಈ ಪಟ್ಟಣದಲ್ಲಿ ನನಗೆ ಬಹಳ ಮಂದಿ ಇದ್ದಾರೆ” ಎಂದು ಹೇಳಿದನು.


“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”


ಈ ಗುರುತುಗಳೆಲ್ಲಾ ಸಂಭವಿಸಿದಾಗ ನಿನಗೆ ಅನುಕೂಲವಿದ್ದ ಹಾಗೆ ಮಾಡು; ದೇವರು ನಿನ್ನ ಸಂಗಡ ಇದ್ದಾನೆ.


ಇದನ್ನು ನೋಡಿ ಸೌಲನು ದಾವೀದನಿಗೆ ಬಹಳವಾಗಿ ಹೆದರಿಕೊಂಡನು.


ಯೆಹೋವನು ಹಿಜ್ಕೀಯನ ಸಂಗಡ ಇದ್ದುದರಿಂದ ಅವನು ಹೋದ ಎಲ್ಲ ಕಡೆ ಅಭಿವೃದ್ಧಿ ಹೊಂದಿದನು. ಇವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ದಂಗೆ ಎದ್ದು ಸ್ವತಂತ್ರನಾದನು.


ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು; ನನಗೆ ಯಾವಾಗ ದರ್ಶನಕೊಡುವಿ? ಮನೆಯೊಳಗೂ ಯಥಾರ್ಥ ಹೃದಯದಿಂದಲೇ ನಡೆದುಕೊಳ್ಳುವೆನು.


ಯೆಹೋವನು ಯೆಹೂದ್ಯರ ಸಂಗಡ ಇದ್ದುದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದುದರಿಂದ ಅವರನ್ನು ಹೊರಡಿಸುವುದಕ್ಕೆ ಆಗಲಿಲ್ಲ.


ಸಮುವೇಲನು ದೊಡ್ಡವನಾಗುತ್ತಾ ಬಂದನು. ಯೆಹೋವನು ಅವನೊಡನೆ ಇದ್ದುದ್ದರಿಂದ ಅವನ ಪ್ರವಾದನೆಗಳಲ್ಲಿ ಒಂದೂ ಬಿದ್ದುಹೋಗಲಿಲ್ಲ.


ಫಿಲಿಷ್ಟಿಯರು ತಿರುಗಿ ಯುದ್ಧಕ್ಕೆ ಬಂದಾಗ ದಾವೀದನು ಹೋಗಿ ಅವರೊಡನೆ ಯುದ್ಧಮಾಡಿ ಅವರನ್ನು ಸಂಪೂರ್ಣವಾಗಿ ಸೋಲಿಸಿ, ಓಡಿಸಿಬಿಟ್ಟನು.


ಸೇನಾಧೀಶ್ವರನಾದ ಯೆಹೋವ ದೇವರು ಅವನ ಸಂಗಡ ಇದ್ದುದರಿಂದ ಅವನು ಆಧಿಕ ಪ್ರಬಲಗೊಳ್ಳುತ್ತಾ ಬಂದನು.


ಇದಲ್ಲದೆ ಅವನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನು ಇರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪ ಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ವಿಜಯ ದೊರಕಿತು.


ದಾವೀದನು ಎದೋಮಿನಲ್ಲಿ ಕಾವಲುದಂಡುಗಳನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.


ಇವನು ಬಾಳ್ ದೇವರುಗಳನ್ನು ಅವಲಂಬಿಸದೆ, ತನ್ನ ಪೂರ್ವಿಕನಾದ ದಾವೀದನ ಮೊದಲಿನ ನಡತೆಯ ಪ್ರಕಾರ ನಡೆಯುತ್ತಿದ್ದದರಿಂದ ಯೆಹೋವನು ಯೆಹೋಷಾಫಾಟನ ಸಂಗಡ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು