Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ಇಸ್ರಾಯೇಲರೂ, ಯೆಹೂದ್ಯರೂ ತಮ್ಮ ಸಂಗಡ ಹೋಗುತ್ತಾ ಬರುತ್ತಾ ಇದ್ದ ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದರೆ ಇಸ್ರಯೇಲರಿಗೆ ಹಾಗು ಯೆಹೂದ್ಯರಿಗೆ ದಾವೀದನ ಮೇಲೆ ಮಿಗಿಲಾದ ಪ್ರೀತಿ. ಏಕೆಂದರೆ ಅವನು ತಮ್ಮ ಸಂಗಡವೇ ಬಂದು ಮುಂದಾಳತ್ವ ವಹಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇಸ್ರಾಯೇಲ್ಯರೂ ಯೆಹೂದ್ಯರೂ ತಮ್ಮ ಸಂಗಡ ಹೋಗುತ್ತಾ ಬರುತ್ತಾ ಇದ್ದ ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ಇಸ್ರೇಲಿನ ಮತ್ತು ಯೆಹೂದದ ಜನರೆಲ್ಲ ದಾವೀದನನ್ನು ಪ್ರೀತಿಸಿದರು. ಅವನು ಯುದ್ಧದಲ್ಲಿ ಅವರನ್ನು ಮುನ್ನಡೆಸಿದ್ದರಿಂದ ಮತ್ತು ಅವರಿಗೋಸ್ಕರ ಹೋರಾಡಿದ್ದರಿಂದ ಅವರು ಅವನನ್ನು ಬಹಳವಾಗಿ ಪ್ರೀತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಇಸ್ರಾಯೇಲ್ ಜನರೂ ಯೆಹೂದ ಜನರೂ ದಾವೀದನು ತಮ್ಮ ಮುಂದೆ ಹೊರಟು ಹೋಗುತ್ತಾ ಬರುತ್ತಾ ಇರುವುದರಿಂದ ಅವನನ್ನು ಪ್ರೀತಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:16
9 ತಿಳಿವುಗಳ ಹೋಲಿಕೆ  

ದಾವೀದನಾದರೋ ಸೌಲನು ಎಲ್ಲಿಗೆ ಕಳುಹಿಸಿದರೂ ಹೋಗಿ ಎಲ್ಲವನ್ನು ವಿವೇಕದಿಂದ ನಡೆಸುತ್ತಿದ್ದನು. ಸೌಲನು ಇವನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು. ಇದು ಅವನ ಸೇವಕರಿಗೂ, ಎಲ್ಲಾ ಜನರಿಗೂ ಮೆಚ್ಚಿಗೆಯಾಯಿತು.


ಶಾಸ್ತ್ರಿಗಳೂ ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡಿದರು. ಆದರೆ ಜನರಿಗೆ ಭಯಪಟ್ಟರು.


ಆದರೆ ಜನರೆಲ್ಲರು ಆತನ ಹತ್ತಿರದಲ್ಲಿದ್ದುಕೊಂಡು ಬೋಧನೆಯನ್ನು ಗಮನಿಸಿ ಕೇಳುತ್ತಿದ್ದುದರಿಂದ ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ.


ನನ್ನ ದೇವರಾದ ಯೆಹೋವನೇ, ನನ್ನ ತಂದೆಗೆ ಬದಲಾಗಿ ನಿನ್ನಿಂದ ಅರಸನಾಗಿ ನೇಮಿಸಲ್ಪಟ್ಟ ನಿನ್ನ ಸೇವಕನಾದ ನಾನು ಇನ್ನೂ ಚಿಕ್ಕವನು. ವ್ಯವಹಾರ ಜ್ಞಾನವಿಲ್ಲದವನು.


ಹಿಂದಿನ ದಿನಗಳಲ್ಲಿ ಅಂದರೆ, ಸೌಲನ ಆಡಳಿತದಲ್ಲಿ, ಇಸ್ರಾಯೇಲರ ದಳಾಧಿಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನೆ’” ಅಂದರು.


ಯೆಹೋವನು ಅವರ ಮುಂದಾಗಿ ಹೋಗಲಿ ಅಥವಾ ಅವರನ್ನು ಮುನ್ನಡೆಸಲು, ಮುಂದಾಗಿ ಬರಲಿ ಅವರನ್ನು ಹಿಂದಕ್ಕೆ ಕರೆದುಕೊಂಡು ಬರಲು, ಒಬ್ಬ ನಾಯಕನನ್ನು ನೇಮಿಸು ನಿನ್ನವರಾದ ಈ ಜನ ಸಮೂಹವು ಕುರುಬನಿಲ್ಲದ ಕುರಿಗಳಂತೆ ಆಗಬಾರದು” ಎಂದು ಬೇಡಿದನು.


ಅವನನ್ನು ತನ್ನ ಸಾನ್ನಿಧ್ಯಸೇವೆಯಿಂದ ತಪ್ಪಿಸಿ, ಸೈನ್ಯದಲ್ಲಿ ಸಹಸ್ರಾಧಿಪತಿಯನ್ನಾಗಿ ನೇಮಿಸಿದನು. ಹೀಗೆ ದಾವೀದನು ಜನರ ಸಂಗಡ ಹೋಗುತ್ತಾ ಬರುತ್ತಾ ಇದ್ದನು.


ಇದನ್ನು ನೋಡಿ ಸೌಲನು ದಾವೀದನಿಗೆ ಬಹಳವಾಗಿ ಹೆದರಿಕೊಂಡನು.


ಯೆಹೂದ್ಯನಾದ ಮೊರ್ದೆಕೈಯಾದರೋ ರಾಜ್ಯದಲ್ಲಿ ಅರಸನಾದ ಅಹಷ್ವೇರೋಷನ ದ್ವಿತೀಯ ಸ್ಥಾನದವನೂ, ಯೆಹೂದ್ಯರಲ್ಲಿ ಸನ್ಮಾನಿತನೂ, ತನ್ನ ಬಂಧುಬಳಗಕ್ಕೆ ಪ್ರೀತಿಪಾತ್ರನೂ, ಸ್ವಜನರ ಹಿತಚಿಂತಕನೂ ಮತ್ತು ಸ್ವಕುಲದವರೆಲ್ಲರಿಗೂ ಶಾಂತಿದೂತನೂ, ಪ್ರಾರ್ಥನಾಪರನೂ ಆಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು