1 ಸಮುಯೇಲ 18:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆಗ ಅವನು ಅವರಿಗೆ, “ನೀವು ಹೋಗಿ ದಾವೀದನಿಗೆ, ‘ಅರಸನು ತೆರವನ್ನು ಅಪೇಕ್ಷಿಸುವುದಿಲ್ಲ. ತನ್ನ ಶತ್ರುಗಳಾದ ಫಿಲಿಷ್ಟಿಯರಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರು ಮಂದಿಯ ಮುಂದೊಗಲನ್ನು ತಂದುಕೊಡಬೇಕು ಅನ್ನುತ್ತಾನೆ’ ಎಂದು ಹೇಳಿರಿ” ಎಂದು ಆಜ್ಞಾಪಿಸಿದನು. ದಾವೀದನನ್ನು ಫಿಲಿಷ್ಟಿಯರಿಂದ ಕೊಲ್ಲಿಸಬೇಕೆಂಬುದೇ ಅವನ ಉದ್ದೇಶವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆಗ ಅವನು, “ನೀವು ಹೋಗಿ ದಾವೀದನಿಗೆ, ‘ಅರಸರು ಯಾವ ದಕ್ಷಿಣೆಯನ್ನೂ ಬಯಸುವುದಿಲ್ಲ; ಆದರೆ ಅವರ ಶತ್ರುಗಳಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರುಮಂದಿಯ ಮುಂದೊಗಲನ್ನು ತಂದುಕೊಟ್ಟರೆ ಸಾಕೆನ್ನುತ್ತಾರೆ’ ಎಂದು ತಿಳಿಸಿರಿ,” ಎಂದು ಆಜ್ಞಾಪಿಸಿದನು. (ದಾವೀದನನ್ನು ಫಿಲಿಷ್ಟಿಯರ ಕೈಯಿಂದಲೇ ಕೊಲ್ಲಿಸಬೇಕೆಂಬುದು ಅವನ ಉದ್ದೇಶವಾಗಿತ್ತು.) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆಗ ಅವನು ಅವರಿಗೆ - ನೀವು ಹೋಗಿ ದಾವೀದನಿಗೆ - ಅರಸನು ತೆರವನ್ನು ಅಪೇಕ್ಷಿಸುವದಿಲ್ಲ; ತನ್ನ ಶತ್ರುಗಳಾದ ಫಿಲಿಷ್ಟಿಯರಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರು ಮಂದಿಯ ಮುಂದೊಗಲನ್ನು ತಂದುಕೊಡಬೇಕು ಅನ್ನುತ್ತಾನೆಂದು ಹೇಳಿರಿ ಎಂದು ಆಜ್ಞಾಪಿಸಿದನು. ದಾವೀದನನ್ನು ಫಿಲಿಷ್ಟಿಯರಿಂದ ಕೊಲ್ಲಿಸಬೇಕೆಂಬದೇ ಇದಕ್ಕೆ ಕಾರಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಸೌಲನು ಅವರಿಗೆ, “ನೀವು ದಾವೀದನ ಬಳಿಗೆ ಹೋಗಿ ಹೇಳಿ: ‘ನೀನು ರಾಜನ ಮಗಳಿಗಾಗಿ ಹಣ ಕೊಡಬೇಕಿಲ್ಲ. ಸೌಲನು ತನ್ನ ಶತ್ರುಗಳ ಮೇಲೆ ಸೇಡನ್ನು ತೀರಿಸಿಕೊಳ್ಳುತ್ತಾನೆ. ಆದ್ದರಿಂದ ಅವನ ಮಗಳನ್ನು ಮದುವೆಯಾಗಲು ಕೊಡಬೇಕಾದ ದಕ್ಷಿಣೆ ಏನೆಂದರೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲುಗಳು’ ಎಂದು ಹೇಳಿರಿ” ಎಂಬುದಾಗಿ ತಿಳಿಸಿದನು. ಸೌಲನ ರಹಸ್ಯವಾದ ಉಪಾಯ ಇದಾಗಿದ್ದಿತು. ಫಿಲಿಷ್ಟಿಯರು ದಾವೀದನನ್ನು ಕೊಂದು ಬಿಡಬಹುದೆಂದು ಸೌಲನು ಭಾವಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆದರೆ ಸೌಲನು ದಾವೀದನನ್ನು ಫಿಲಿಷ್ಟಿಯರ ಕೈಯಿಂದ ಬೀಳಮಾಡಬೇಕೆಂದು ನೆನಸಿ ತನ್ನ ಸೇವಕರಿಗೆ, “ನೀವು ದಾವೀದನಿಗೆ ಅರಸನು ಯಾವ ತೆರವನ್ನು ಅಪೇಕ್ಷಿಸದೆ, ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಹಾಗೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ಅಪೇಕ್ಷಿಸುತ್ತಾನೆಂದು ಹೇಳಿರಿ,” ಎಂದನು. ಅಧ್ಯಾಯವನ್ನು ನೋಡಿ |