Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸಿದ್ದರಿಂದ ಅವನೊಡನೆ ಸ್ನೇಹದ ಒಪ್ಪಂದ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯೋನಾತಾನನು ದಾವೀದನನ್ನು ತನ್ನ ಪ್ರಾಣಸ್ನೇಹಿತನನ್ನಾಗಿ ಪ್ರೀತಿಸುತ್ತಿದ್ದುದರಿಂದ ಅವನೊಂದಿಗೆ ಒಂದು ಒಪ್ಪಂದಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸಿದ್ದರಿಂದ ಅವನೊಡನೆ ಒಡಂಬಡಿಕೆಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು. ಅವನು ದಾವೀದನೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದನನ್ನು ಪ್ರೀತಿಮಾಡಿದ್ದರಿಂದ, ಒಬ್ಬರಿಗೊಬ್ಬರು ಒಡಂಬಡಿಕೆ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:3
9 ತಿಳಿವುಗಳ ಹೋಲಿಕೆ  

ಅನಂತರ ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು. ನಾವು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇವಲ್ಲಾ. ಆತನೇ ನನಗೂ ನಿನಗೂ, ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಾಕ್ಷಿಯಾಗಿರಲಿ” ಎಂದು ಹೇಳಿದನು. ತರುವಾಯ ದಾವೀದನು ಹೊರಟುಹೋದನು. ಯೋನಾತಾನನು ಊರೊಳಕ್ಕೆ ಹೋದನು.


ದಾವೀದನು ತಾನು ಸೌಲನ ಮಗನಾದ ಯೋನಾತಾನನಿಗೆ ಯೆಹೋವನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನಪುಮಾಡಿಕೊಂಡು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.


ಅವರಿಬ್ಬರೂ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡರು. ತರುವಾಯ ಯೋನಾತಾನನು ತನ್ನ ಮನೆಗೆ ಹೋದನು. ದಾವೀದನು ಹೋರೆಷದಲ್ಲಿಯೇ ಇದ್ದನು.


ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದ ಎದ್ದುಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು.


ನನ್ನ ಮಗನು ಇಷಯನ ಮಗನೊಡನೆ ಒಡಂಬಡಿಕೆ ಮಾಡಿಕೊಂಡದ್ದನ್ನು ನಿಮ್ಮಲ್ಲಿ ಒಬ್ಬನಾದರೂ ನನಗೆ ತಿಳಿಸಲಿಲ್ಲವಲ್ಲಾ. ನನ್ನ ಸೇವಕನು ನನಗೆ ವಿರೋಧವಾಗಿ ಒಳಸಂಚುಮಾಡುವ ಹಾಗೆ ನನ್ನ ಮಗನೇ, ಅವನನ್ನು ಎಬ್ಬಿಸಿದ್ದಾನೆಂಬುದನ್ನು ಒಬ್ಬನಾದರೂ ನನಗೆ ಯಾಕೆ ತಿಳಿಸಲಿಲ್ಲ? ನೀವು ನನ್ನ ಚಿಂತೆಯನ್ನೇ ಬಿಟ್ಟಿದ್ದೀರಿ” ಅಂದನು


ಸೌಲನು ದಾವೀದನನ್ನು ಕೊಲ್ಲಬೇಕೆಂದು ತನ್ನ ಮಗನಾದ ಯೋನಾತಾನನಿಗೂ, ಎಲ್ಲಾ ಪರಿವಾರದವರಿಗೂ ಆಜ್ಞಾಪಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು.


ಬಹಳ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ, ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ಮಿತ್ರನುಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು