1 ಸಮುಯೇಲ 19:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವನು ಒಡನೆ ಕಿನ್ನರಿಯನ್ನು ನುಡಿಸುತ್ತಿದ್ದ ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವಂತೆ ತಿವಿಯಬೇಕೆಂದು ತನ್ನ ಈಟಿಯನ್ನು ಎಸೆದನು. ಆದರೆ ದಾವೀದನು ಪಕ್ಕನೆ ಸೌಲನೆದುರಿನಿಂದ ಸರಿದುಕೊಂಡ ಕಾರಣ, ಅದು ಗೋಡೆಯೊಳಗೆ ನಾಟಿತು. ದಾವೀದನು ಆ ರಾತ್ರಿಯಲ್ಲೇ ತಪ್ಪಿಸಿಕೊಂಡು ಓಡಿಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಒಡನೆ ಕಿನ್ನರಿಯನ್ನು ಬಾರಿಸುತ್ತಿದ್ದ ದಾವೀದನನ್ನು ಗೋಡೆಗೆ ಕಚ್ಚಿಕೊಳ್ಳುವಂತೆ ತಿವಿಯಬೇಕೆಂದು ಅವನು ತನ್ನ ಈಟಿಯನ್ನು ಎಸೆದನು. ಆದರೆ ದಾವೀದನು ಫಕ್ಕನೆ ಸೌಲನೆದುರಿನಿಂದ ಸರಿದುಕೊಂಡ ಕಾರಣ ಅದು ಗೋಡೆಯೊಳಗೆ ನಾಟಿತು. ದಾವೀದನು ಆ ರಾತ್ರಿಯಲ್ಲೇ ತಪ್ಪಿಸಿಕೊಂಡು ಓಡಿಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವನು ಒಡನೆ ಕಿನ್ನರಿಯನ್ನು ಬಾರಿಸುತ್ತಿದ್ದ ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವಂತೆ ತಿವಿಯಬೇಕೆಂದು ತನ್ನ ಈಟಿಯನ್ನು ಎಸೆದನು. ಆದರೆ ದಾವೀದನು ಫಕ್ಕನೆ ಸೌಲನೆದುರಿನಿಂದ ಸರಿದುಕೊಂಡ ಕಾರಣ ಅದು ಗೋಡೆಯೊಳಗೆ ನಾಟಿತು. ದಾವೀದನು ಆ ರಾತ್ರಿಯಲ್ಲೇ ತಪ್ಪಿಸಿಕೊಂಡು ಓಡಿಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ದಾವೀದನು ಕಿನ್ನರಿಯನ್ನು ಬಾರಿಸುತ್ತಿದ್ದನು. ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವಂತೆ ತಿವಿಯಬೇಕೆಂದು ಸೌಲನು ತನ್ನ ಈಟಿಯನ್ನು ಎಸೆದನು. ಆದರೆ ದಾವೀದನು ಸರಿದುಕೊಂಡಿದ್ದರಿಂದ ಈಟಿಯು ಗೋಡೆಗೆ ನಾಟಿಕೊಂಡಿತು. ದಾವೀದನು ಆ ದಿನ ರಾತ್ರಿಯಲ್ಲೇ ತಪ್ಪಿಸಿಕೊಂಡು ಓಡಿಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಸೌಲನು ದಾವೀದನನ್ನು ಈಟಿಯಿಂದ ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯಬೇಕೆಂದು ಹುಡುಕಿದನು. ಆದರೆ ದಾವೀದನು ಸೌಲನ ಎದುರಿನಿಂದ ತಪ್ಪಿಸಿಕೊಂಡನು. ಅವನ ಈಟಿಯು ಗೋಡೆಯಲ್ಲಿ ಹತ್ತಿಕೊಳ್ಳುವಂತೆ ಹೊಡೆದನು. ದಾವೀದನು ಓಡಿಹೋಗಿ ಆ ರಾತ್ರಿಯಲ್ಲಿ ತಪ್ಪಿಸಿಕೊಂಡನು. ಅಧ್ಯಾಯವನ್ನು ನೋಡಿ |