Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 19:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಸೌಲನು ಮೀಕಲಳಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ? ನನ್ನ ಶತ್ರುವನ್ನು ಕಳುಹಿಸಿ ಅವನು ತಪ್ಪಿಸಿಕೊಳ್ಳುವಂತೆ ಮಾಡಿದಿಯಲ್ಲಾ” ಎನ್ನಲು ಆಕೆಯು ಅವನಿಗೆ, “ನನ್ನನ್ನು ಕಳುಹಿಸದಿದ್ದರೆ ನಿನ್ನನ್ನು ಕೊಂದುಬಿಡುತ್ತೇನೆ ಎಂದು ಅವನು ನನಗೆ ಹೇಳಿದನು” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸೌಲನು ಮೀಕಳಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ? ನನ್ನ ಶತ್ರುವನ್ನು ಕಳುಹಿಸಿ ಅವನು ತಪ್ಪಿಸಿಕೊಳ್ಳುವಂತೆ ಮಾಡಿದಿಯಲ್ಲವೆ?” ಎನ್ನಲು, ಆಕೆ ಅವನಿಗೆ, “’ನನ್ನನ್ನು ಕಳುಹಿಸದಿದ್ದರೆ ನಿನ್ನನ್ನು ಕೊಂದುಬಿಡುತ್ತೇನೆ’ ಎಂದು ಹೇಳಿದ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಸೌಲನು ಮೀಕಲಳಿಗೆ - ನೀನು ನನ್ನನ್ನು ವಂಚಿಸಿದ್ದೇಕೆ? ನನ್ನ ಶತ್ರುವನ್ನು ಕಳುಹಿಸಿ ಅವನು ತಪ್ಪಿಸಿಕೊಳ್ಳುವಂತೆ ಮಾಡಿದಿಯಲ್ಲಾ ಎನ್ನಲು ಆಕೆಯು ಅವನಿಗೆ - ನನ್ನನ್ನು ಕಳುಹಿಸದಿದ್ದರೆ ನಿನ್ನನ್ನು ಕೊಂದುಬಿಡುತ್ತೇನೆಂದು ಅವನು ನನಗೆ ಹೇಳಿದನು ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸೌಲನು ಮೀಕಲಳಿಗೆ, “ನೀನು ಈ ರೀತಿ ನನಗೆ ಮೋಸ ಮಾಡಿದ್ದೇಕೆ? ನನ್ನ ಶತ್ರುವು ತಪ್ಪಿಸಿಕೊಳ್ಳಲು ನೀನು ಅವಕಾಶ ಮಾಡಿಕೊಟ್ಟೆ! ದಾವೀದನು ಓಡಿಹೋದನಲ್ಲಾ!” ಎಂದು ಹೇಳಿದನು. ಮೀಕಲಳು ಸೌಲನಿಗೆ, “ತಪ್ಪಿಸಿಕೊಳ್ಳಲು ತನಗೆ ಸಹಾಯ ಮಾಡದಿದ್ದರೆ ನನ್ನನ್ನು ಕೊಲ್ಲುವುದಾಗಿ ದಾವೀದನು ತಿಳಿಸಿದ!” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಸೌಲನು ಮೀಕಲಳಿಗೆ, “ನೀನು ಈ ಪ್ರಕಾರ ನನಗೆ ಮೋಸಮಾಡಿ, ನನ್ನ ಶತ್ರುವನ್ನು ಕಳುಹಿಸಿದ್ದೇನು? ಅವನು ತಪ್ಪಿಸಿಕೊಂಡನಲ್ಲಾ,” ಎಂದನು. ಆಗ ಮೀಕಲಳು ಸೌಲನಿಗೆ ಉತ್ತರವಾಗಿ, “ಅವನು ನನಗೆ, ‘ನಾನು ನಿನ್ನನ್ನು ಕೊಂದು ಹಾಕುವುದು ಏಕೆ? ನನ್ನನ್ನು ಹೋಗಗೊಡಿಸು,’ ಎಂದು ಹೇಳಿದನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 19:17
10 ತಿಳಿವುಗಳ ಹೋಲಿಕೆ  

ಅಬ್ನೇರನು ತಿರುಗಿ ಅಸಾಹೇಲನಿಗೆ, “ನನ್ನನ್ನು ಬಿಟ್ಟು ಹೋಗು, ನಾನೇಕೆ ನಿನ್ನನ್ನು ನೆಲಕ್ಕುರುಳಿಸಬೇಕು? ಹಾಗೆ ಮಾಡಿದರೆ ನಿನ್ನ ಅಣ್ಣನಾದ ಯೋವಾಬನಿಗೆ ಹೇಗೆ ಮುಖ ತೋರಿಸಲಿ” ಅಂದನು.


ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳುವುದರಿಂದ ನಿಮಗೆ ಶತ್ರುವಾಗಿದ್ದೇನೋ?


ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು.


ಅಹಾಬನು ಎಲೀಯನನ್ನು ಕಂಡು ಅವನನ್ನು, “ನನ್ನ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ” ಎಂದು ಕೇಳಲು ಅವನು, “ಹೌದು ಕಂಡುಹಿಡಿದ್ದೆನು. ನೀನು ನಿನ್ನನ್ನು ಪಾಪಕ್ಕೆ ಮಾರಿಕೊಂಡು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.


ಅಬ್ಷಾಲೋಮನ ಸೇವಕರು ಆ ಸ್ತ್ರೀಯ ಮನೆಗೆ ಹೋಗಿ, “ಅಹೀಮಾಚ ಮತ್ತು ಯೋನಾತಾನರು ಎಲ್ಲಿದ್ದಾರೆ?” ಎಂದು ಆಕೆಯನ್ನು ಕೇಳಿದ್ದಕ್ಕೆ ಆಕೆಯು, “ಅವರು ಹಳ್ಳ ದಾಟಿ ಹೋಗಿಬಿಟ್ಟರು” ಎಂದು ಉತ್ತರ ಕೊಟ್ಟಳು. ಅವರು ಅಹೀಮಾಚ ಮತ್ತು ಯೋನಾತಾನರನ್ನು ಹುಡುಕುವುದಕ್ಕೆ ಹೋಗಿ, ಕಾಣದೆ ಯೆರೂಸಲೇಮಿಗೆ ಹಿಂತಿರುಗಿದರು.


ಆ ಸ್ತ್ರೀಯು ಸಮುವೇಲನನ್ನು ಕಂಡಕೂಡಲೇ ಗಟ್ಟಿಯಾಗಿ ಕೂಗಿ ಸೌಲನಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ, ನೀನು ಸೌಲನಲ್ಲವೋ?” ಅಂದಳು.


ಸಿಪಾಯಿಗಳಿಗೆ, “ನೀವು ಯೆಹೋವನ ಈ ಯಾಜಕರನ್ನು ಕೊಲ್ಲಿರಿ. ದಾವೀದನು ಓಡಿಹೋದದ್ದು ಗೊತ್ತಿದ್ದರೂ ನನಗೆ ತಿಳಿಸದೇ ಅವನಿಗೆ ಸಹಾಯ ಮಾಡಿದ್ದಾರೆ” ಎಂದು ಹೇಳಿ ಅವರನ್ನು ಕೊಲ್ಲಲು ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಯಾಜಕರ ಮೇಲೆ ಕೈಹಾಕುವುದಕ್ಕೆ ಮನಸ್ಸು ಮಾಡಲಿಲ್ಲ.


ಸೌಲನ ದೂತರು ದಾವೀದನನ್ನು ಹಿಡಿಯುವುದಕ್ಕೆ ಬಂದಾಗ ಅವಳು ಅವನಿಗೆ ಸ್ವಸ್ಥವಿಲ್ಲವೆಂದು ಹೇಳಿಕಳುಹಿಸಿದಳು.


ಅವರು ಹೋಗಿ ನೋಡಲು ಹಾಸಿಗೆಯ ಮೇಲಿರುವುದು ಮೇಕೆಕೂದಲಿನಿಂದ ಹೆಣೆದ ಜಾಲರಿಯ ಒಂದು ವಿಗ್ರಹ ಎಂದು ತಿಳಿದುಬಂತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು