Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 19:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದಾವೀದನು ತಪ್ಪಿಸಿಕೊಂಡು ರಾಮದಲ್ಲಿದ್ದ ಸಮುವೇಲನ ಬಳಿಗೆ ಬಂದು ಸೌಲನು ತನಗೆ ಮಾಡಿದ್ದೆಲ್ಲವನ್ನು ತಿಳಿಸಿದನು. ಅವರಿಬ್ಬರೂ ಹೋಗಿ ಅಲ್ಲಿನ ನಯೋತ್ ಎಂಬ ಸ್ಥಳದಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಹೀಗೆ ದಾವೀದನು ತಪ್ಪಿಸಿಕೊಂಡು ರಾಮಾದಲ್ಲಿದ್ದ ಸಮುವೇಲನ ಬಳಿಗೆ ಬಂದನು. ಸೌಲನು ತನಗೆ ಮಾಡಿದ್ದೆಲ್ಲವನ್ನೂ ತಿಳಿಸಿದನು. ಅವರಿಬ್ಬರೂ ಹೋಗಿ ಅಲ್ಲಿನ ಒಂದು ಮಠದಲ್ಲಿ ವಾಸವಾಗಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ದಾವೀದನು ತಪ್ಪಿಸಿಕೊಂಡು ರಾಮದಲ್ಲಿದ್ದ ಸಮುವೇಲನ ಬಳಿಗೆ ಬಂದು ಸೌಲನು ತನಗೆ ಮಾಡಿದ್ದೆಲ್ಲವನ್ನೂ ತಿಳಿಸಿದನು. ಅವರಿಬ್ಬರೂ ಹೋಗಿ ಅಲ್ಲಿನ ಮಠದಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದಾವೀದನು ತಪ್ಪಿಸಿಕೊಂಡು ರಾಮದಲ್ಲಿದ್ದ ಸಮುವೇಲನ ಹತ್ತಿರಕ್ಕೆ ಓಡಿಹೋದನು. ಸೌಲನು ತನಗೆ ಮಾಡಿದ್ದನ್ನೆಲ್ಲ ದಾವೀದನು ಸಮುವೇಲನಿಗೆ ಹೇಳಿದನು. ನಂತರ ದಾವೀದನು ಮತ್ತು ಸಮುವೇಲನು ಪ್ರವಾದಿಗಳಿದ್ದ ಪಾಳೆಯಕ್ಕೆ ಹೋದರು. ದಾವೀದನು ಅಲ್ಲಿ ನೆಲೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹೀಗೆಯೇ ದಾವೀದನು ಓಡಿಹೋಗಿ ತಪ್ಪಿಸಿಕೊಂಡು ರಾಮದಲ್ಲಿರುವ ಸಮುಯೇಲನ ಬಳಿಗೆ ಬಂದು, ಸೌಲನು ತನಗೆ ಮಾಡಿದ್ದನ್ನೆಲ್ಲಾ ಅವನಿಗೆ ತಿಳಿಸಿದನು. ಅವನೂ ಸಮುಯೇಲನೂ ಹೋಗಿ ನಯೋತಿನಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 19:18
11 ತಿಳಿವುಗಳ ಹೋಲಿಕೆ  

ಅಲ್ಲಿ ಅವನ ಸ್ವಂತ ಮನೆಯಿದ್ದುದರಿಂದ ಅಲ್ಲಿಯೇ ಯೆಹೋವನಿಗೆ ಒಂದು ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ವಿವಾದಗಳನ್ನು ತೀರಿಸುತ್ತಿದ್ದನು.


ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.


“ಮನುಷ್ಯರೆಲ್ಲಾ ಸುಳ್ಳುಗಾರರು” ಎಂದು ಭ್ರಾಂತಿಯಿಂದ ಹೇಳಿದಾಗಲೂ, ಭರವಸವುಳ್ಳವನಾಗಿಯೇ ಇದ್ದೆನು.


ಸಮುವೇಲನು ಮರಣ ಹೊಂದಿದನು. ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ, ಅವನ ಶವವನ್ನು ಅವನ ಸ್ವಂತ ಊರಾದ ರಾಮದಲ್ಲಿ ಸಮಾಧಿಮಾಡಿದ್ದರು. ಸೌಲನು ಸತ್ತವರಲ್ಲಿ ವಿಚಾರಿಸುವವರನ್ನೂ, ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನು.


ಅನಂತರ ಸಮುವೇಲನು ರಾಮಕ್ಕೆ ಹೋದನು; ಸೌಲನು ತನ್ನ ಊರಾದ ಗಿಬೆಯದಲ್ಲಿರುವ ಮನೆಗೆ ಹೋದನು.


ದಾವೀದನು ರಾಮದ ನಯೋತಿನಲ್ಲಿರುವುದು ಸೌಲನಿಗೆ ಗೊತ್ತಾಗಲು,


ಆಗ ಸೌಲನು ತಾನೇ ರಾಮಕ್ಕೆ ಹೋಗಬೇಕೆಂದು ಹೊರಟು, ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದು, “ಸಮುವೇಲ ದಾವೀದರು ಎಲ್ಲಿರುತ್ತಾರೆ?” ಎಂದು ವಿಚಾರಿಸಿದನು. ಆಗ ಜನರು, “ರಾಮದ ನಯೋತಿನಲ್ಲಿ ಇರುತ್ತಾರೆ” ಎಂದು ಉತ್ತರಕೊಟ್ಟರು.


ಅವನು ಅಲ್ಲಿಂದ ರಾಮದ ನಯೋತಿಗೆ ಹೋಗುವಾಗ ದೇವರ ಆತ್ಮವು ಅವನ ಮೇಲೆಯೂ ಬಂದಿತು. ಅವನು ಆ ಊರನ್ನು ಮುಟ್ಟುವ ತನಕ ಪ್ರವಾದಿಸುತ್ತಾ ಹೋದನು.


ಅವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ ರಾಮದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳೊಂದಿಗೆ ಸಂಗಮಿಸಲು, ಯೆಹೋವನು ಆಕೆಯ ಪ್ರಾರ್ಥನೆಯನ್ನು ಪರಿಗಣಿಸಿದ್ದರಿಂದ ಆಕೆಯು ಗರ್ಭಿಣಿಯಾದಳು.


ದಾವೀದನು ರಾಮದ ನಯೋತಿನಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದು ಅವನಿಗೆ, “ನಿನ್ನ ತಂದೆಯು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲ, ನಾನೇನು ಮಾಡಿದೆನು? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹವು ಯಾವುದು?” ಎನ್ನಲು,


ಆಕೀಷನ ಸೇವಕರು, “ಸೌಲನು ಸಾವಿರಾರು ಶತ್ರುಗಳನ್ನು ಕೊಂದನು, ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನು ಎಂಬುದಾಗಿ ಸ್ತ್ರೀಯರು ಕುಣಿಯುತ್ತಾ ಹಾಡಿದ್ದು ಇವನ ಕುರಿತಲ್ಲವೋ?” ಎಂದು ಮಾತನಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು