Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 19:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆದ್ದರಿಂದ ಅವನು ದಾವೀದನಿಗೆ, “ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದಿರುತ್ತಾನೆ. ನೀನು ಜಾಗರೂಕತೆಯಿಂದಿರು. ನಾಳೆ ಬೆಳಿಗ್ಗೆ ಒಂದು ಗುಪ್ತವಾದ ಸ್ಥಳದಲ್ಲಿ ಅಡಗಿಕೊಂಡಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆದುದರಿಂದ ಅವನು ದಾವೀದನಿಗೆ, “ನನ್ನ ತಂದೆ ಸೌಲನು ನಿನ್ನನ್ನು ಕೊಲ್ಲಬೇಕೆಂದಿರುತ್ತಾರೆ. ನೀನು ಜಾಗರೂಕತೆಯಿಂದಿರು; ನಾಳೆ ಬೆಳಿಗ್ಗೆ ಒಂದು ಗುಟ್ಟಾದ ಸ್ಥಳದಲ್ಲಿ ಅಡಗಿಕೊಂಡಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆದದರಿಂದ ಅವನು ದಾವೀದನಿಗೆ - ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದಿರುತ್ತಾನೆ. ನೀನು ಜಾಗರೂಕತೆಯಿಂದಿರು; ನಾಳೆ ಬೆಳಿಗ್ಗೆ ಒಂದು ಗುಪ್ತಸ್ಥಳದಲ್ಲಿ ಅಡಗಿಕೊಂಡಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೋನಾತಾನನು ದಾವೀದನಿಗೆ, “ಎಚ್ಚರಿಕೆಯಿಂದಿರು! ಸೌಲನು ನಿನ್ನನ್ನು ಕೊಲ್ಲಲು ಅವಕಾಶವನ್ನು ಕಾಯುತ್ತಿದ್ದಾನೆ. ಬೆಳಿಗ್ಗೆ, ಹೊಲದೊಳಗೆ ಹೋಗಿ ಅಡಗಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೋನಾತಾನನು ದಾವೀದನನ್ನು, “ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದು ಹುಡುಕುತ್ತಾನೆ. ನೀನು ನಾಳೆ ಬೆಳಗಿನವರೆಗೆ ಎಚ್ಚರಿಕೆಯಾಗಿದ್ದು, ಮರೆಯಾದ ಸ್ಥಳಗಳಲ್ಲಿ ಅಡಗಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 19:2
11 ತಿಳಿವುಗಳ ಹೋಲಿಕೆ  

ಮಿತ್ರನ ಪ್ರೀತಿಯು ನಿರಂತರ, ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ.


ಆದರೆ ಅವರ ಗೂಢಾಲೋಚನೆಯು ಸೌಲನಿಗೆ ತಿಳಿದುಬಂದಿತು. ಅವನನ್ನು ಕೊಲ್ಲುವುದಕ್ಕಾಗಿ ಅವರು ಹಗಲಿರುಳೂ ಪಟ್ಟಣದ ಬಾಗಿಲುಗಳನ್ನು ಕಾಯುತ್ತಿದ್ದರು.


ಅವರು ಹೊಂಚು ಹಾಕಿಕೊಂಡಿರುವುದನ್ನು, ಪೌಲನ ಸೋದರಳಿಯನು ಕೇಳಿ ಕೋಟೆಯೊಳಗೆ ಬಂದು ಪೌಲನಿಗೆ ಆ ವಾರ್ತೆಯನ್ನು ತಿಳಿಸಿದನು.


ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ, “ಇವರೇ ಶ್ರೇಷ್ಠರು, ಇವರೇ ನನಗೆ ಇಷ್ಟರಾದವರು” ಎಂದು ಹೇಳುವೆನು.


ಯೋನಾತಾನನು ಅವನಿಗೆ, “ಇದು ಆಗಲೇಬಾರದು, ನಿನಗೆ ಮರಣವಾಗಕೂಡದು. ನನ್ನ ತಂದೆಯು ಅಲ್ಪಕಾರ್ಯವನ್ನಾಗಲಿ, ಮಹಾಕಾರ್ಯವನ್ನಾಗಲಿ ನನಗೆ ತಿಳಿಸದೇ ಮಾಡುವುದಿಲ್ಲ. ಈ ಕಾರ್ಯವನ್ನು ನನಗೆ ಹೇಗೆ ಮರೆಮಾಡಲು ಸಾಧ್ಯ?” ಎಂದು ಹೇಳಿದನು.


ಸೌಲನು ದಾವೀದನನ್ನು ಕೊಲ್ಲಬೇಕೆಂದು ತನ್ನ ಮಗನಾದ ಯೋನಾತಾನನಿಗೂ, ಎಲ್ಲಾ ಪರಿವಾರದವರಿಗೂ ಆಜ್ಞಾಪಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು.


ನೀನು ಅಡಗಿಕೊಂಡಿರುವ ಹೊಲಕ್ಕೆ ನಾನು ಬಂದು, ನನ್ನ ತಂದೆಯ ಬಳಿಯಲ್ಲಿ ನಿಂತು, ನಿನ್ನ ವಿಷಯವನ್ನು ಮಾತನಾಡಿ, ಅವನಿಂದ ತಿಳಿದು ಬರುವ ವಿಚಾರವನ್ನು ನಿನಗೆ ತಿಳಿಸುವೆನು” ಎಂದು ಹೇಳಿದನು.


ಅದಕ್ಕೆ ದಾವೀದನು, “ನಾಳೆ ಅಮಾವಾಸ್ಯೆ. ನಾನು ಅರಸನ ಪಂಕ್ತಿಯಲ್ಲಿ ಊಟಮಾಡಬೇಕಾಗಿರುವುದು. ನೀನು ಅಪ್ಪಣೆಕೊಟ್ಟರೆ ನಾನು ಈಗಲೇ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು