1 ಸಮುಯೇಲ 19:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವನು ದಾವೀದನನ್ನು ಹಿಡಿದು ತರುವುದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿ ಸಮೂಹವು ಪ್ರವಾದಿಸುತ್ತಿರುವುದನ್ನೂ, ಸಮುವೇಲನು ಅವರ ನಾಯಕನಾಗಿ ನಿಂತಿರುವುದನ್ನು ಕಂಡಾಗ, ದೇವರ ಆತ್ಮವು ಅವರ ಮೇಲೆಯೂ ಬಂದಿತು. ಅವರೂ ಪ್ರವಾದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಕೂಡಲೆ ಅವನನ್ನು ಹಿಡಿದುತರುವುದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿಸಮೂಹವು ಪರವಶವಾಗಿ ಮಾತಾಡುವುದನ್ನೂ ಸಮುವೇಲನು ಅವರ ನಾಯಕನಾಗಿ ನಿಂತಿರುವುದನ್ನೂ ಕಂಡರು. ಆಗ ದೇವರ ಆತ್ಮ ಅವರ ಮೇಲೆಯೂ ಬಂದಿತು; ಅವರೂ ಪರವಶರಾಗಿ ಮಾತಾಡತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವನು ಅವನನ್ನು ಹಿಡಿದು ತರುವದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿ ಸಮೂಹವು ಪರವಶವಾಗಿ ಮಾತಾಡುವದನ್ನೂ ಸಮುವೇಲನು ಅವರ ನಾಯಕನಾಗಿ ನಿಂತಿರುವದನ್ನೂ ಕಂಡಾಗ ದೇವರ ಆತ್ಮವು ಅವರ ಮೇಲೆಯೂ ಬಂದಿತು; ಅವರೂ ಪರವಶರಾಗಿ ಮಾತಾಡತೊಡಗಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ದಾವೀದನನ್ನು ಬಂಧಿಸಿ ತರಲು ಸೌಲನು ಜನರನ್ನು ಕಳುಹಿಸಿದನು. ಆದರೆ ಆ ಜನರು ಪಾಳೆಯಕ್ಕೆ ಬರುವಷ್ಟರಲ್ಲಿ ಪ್ರವಾದಿಗಳು ಅಲ್ಲಿ ಪ್ರವಾದಿಸುತ್ತಿದ್ದರು. ಸಮುವೇಲನು ಅವರ ನಾಯಕನಾಗಿ ನಿಂತಿದ್ದನು. ದೇವರಾತ್ಮವು ಸಂದೇಶಕರ ಮೇಲೆ ಬಂದದ್ದರಿಂದ ಅವರೂ ಪ್ರವಾದಿಸಲಾರಂಭಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದ್ದರಿಂದ ಸೌಲನು ದಾವೀದನನ್ನು ಹಿಡಿದುಕೊಂಡು ಬರಲು ದೂತರನ್ನು ಕಳುಹಿಸಿದನು. ಪ್ರವಾದಿಗಳ ಗುಂಪು ಪ್ರವಾದಿಸುವುದನ್ನೂ ಅವರ ಮೇಲೆ ಯಜಮಾನನಾಗಿರುವ ಸಮುಯೇಲನು ನಿಂತಿರುವುದನ್ನೂ ಕಂಡಾಗ, ದೇವರ ಆತ್ಮ ಸೌಲನ ದೂತರ ಮೇಲೆ ಬಂದಿತು, ಅವರೂ ಸಹ ಪ್ರವಾದಿಸಿದರು. ಅಧ್ಯಾಯವನ್ನು ನೋಡಿ |