Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 19:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ತರುವಾಯ ಅವನು ತನ್ನ ತಂದೆಯ ಮುಂದೆ ದಾವೀದನನ್ನು ಹೊಗಳಿ, “ಒಡೆಯನು ತನ್ನ ಸೇವಕನಾದ ದಾವೀದನಿಗೆ ಅನ್ಯಾಯ ಮಾಡದಿರಲಿ. ಅವನು ನಿನಗೆ ದ್ರೋಹ ಮಾಡಲಿಲ್ಲ. ಅವನು ಮಾಡಿದ್ದೆಲ್ಲವೂ ನಿನ್ನ ಹಿತಕ್ಕಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ತರುವಾಯ ಅವನು ತನ್ನ ತಂದೆಯ ಮುಂದೆ ದಾವೀದನನ್ನು ಹೊಗಳಿದನು. “ಒಡೆಯರಾದ ತಾವು ತಮ್ಮ ಸೇವಕ ದಾವೀದನಿಗೆ ಅನ್ಯಾಯ ಮಾಡಬಾರದು; ಅವನು ನಿಮಗೆ ದ್ರೋಹ ಮಾಡಲಿಲ್ಲ; ಅವನು ಮಾಡಿದ್ದೆಲ್ಲವು ನಿಮ್ಮ ಹಿತಕ್ಕಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ತರುವಾಯ ಅವನು ತನ್ನ ತಂದೆಯ ಮುಂದೆ ದಾವೀದನನ್ನು ಹೊಗಳಿ - ಒಡೆಯನು ತನ್ನ ಸೇವಕನಾದ ದಾವೀದನಿಗೆ ಅನ್ಯಾಯಮಾಡದಿರಲಿ; ಅವನು ನಿನಗೆ ದ್ರೋಹಮಾಡಲಿಲ್ಲ; ಅವನು ಮಾಡಿದ್ದೆಲ್ಲವೂ ನಿನ್ನ ಹಿತಕ್ಕಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೋನಾತಾನನು ತನ್ನ ತಂದೆಯಾದ ಸೌಲನೊಂದಿಗೆ ಮಾತನಾಡಿದನು. ಯೋನಾತಾನನು ದಾವೀದನ ಬಗ್ಗೆ ಒಳ್ಳೆಯ ಸಂಗತಿಗಳನ್ನು ತಿಳಿಸಿದನು. ಯೋನಾತಾನನು, “ನೀನು ರಾಜ. ದಾವೀದನು ನಿನ್ನ ಸೇವಕ. ದಾವೀದನು ನಿನಗೆ ಯಾವ ಕೇಡನ್ನೂ ಮಾಡಿಲ್ಲ. ಆದ್ದರಿಂದ ಅವನಿಗೆ ಯಾವ ಕೇಡನ್ನೂ ಮಾಡಬೇಡ. ದಾವೀದನು ನಿನಗೆ ಯಾವಾಗಲೂ ಒಳ್ಳೆಯವನಾಗಿಯೇ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹಾಗೆಯೇ ಯೋನಾತಾನನು ತನ್ನ ತಂದೆ ಸೌಲನ ಸಂಗಡ ದಾವೀದನನ್ನು ಕುರಿತು ಒಳ್ಳೆಯದನ್ನು ಮಾತನಾಡಿ ಅವನಿಗೆ, “ಅರಸನು ತನ್ನ ಸೇವಕನಾದ ದಾವೀದನಿಗೆ ದ್ರೋಹಮಾಡದೆ ಇರಲಿ. ಏಕೆಂದರೆ ಅವನು ನಿನಗೆ ದ್ರೋಹಮಾಡಲಿಲ್ಲ. ಅವನು ಮಾಡಿದ್ದೆಲ್ಲವೂ ನಿನ್ನ ಹಿತಕ್ಕಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 19:4
15 ತಿಳಿವುಗಳ ಹೋಲಿಕೆ  

ಒಳ್ಳೆಯದನ್ನು ಮಾಡಿದ್ದಕ್ಕೆ ಕೇಡಿನ ಪ್ರತಿಫಲ ಅಗತ್ಯವೇ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ. ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ನೆನಪಿಗೆ ತಂದುಕೋ.


ಅದಕ್ಕೆ ರೂಬೇನನು, “ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೆ. ನೀವು ಕೇಳಲಿಲ್ಲ. ಆದುದರಿಂದ ಅವನಿಗಾದ ಪ್ರಾಣ ಹಾನಿಯ ವಿಷಯದಲ್ಲಿ ನಾವು ಈಗ ಉತ್ತರ ಹೇಳಬೇಕಾಗಿ ಬಂದಿದೆ” ಎಂದನು.


ಉಪಕಾರಕ್ಕೆ ಅಪಕಾರಮಾಡುವವನ ಮನೆಗೆ ಕೇಡು ತಪ್ಪದು.


ಅದಕ್ಕೆ ಯೋನಾತಾನನು, “ಅವನು ಯಾಕೆ ಸಾಯಬೇಕು? ಅವನು ಏನು ಮಾಡಿದನು?” ಎಂದು ತನ್ನ ತಂದೆಯನ್ನು ಕೇಳಿದನು.


ಅವರು ಉಪಕಾರಕ್ಕೆ ಅಪಕಾರವನ್ನೇ ಮಾಡುತ್ತಾರೆ; ನಾನು ದಿಕ್ಕಿಲ್ಲದವನಾದೆನು.


ಅವನು, “ನಿನ್ನ ಎಲ್ಲಾ ಸೇವಕರಲ್ಲಿ ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾವನಿದ್ದಾನೆ? ಅವನು ನಿನ್ನ ಆಲೋಚಕರಲ್ಲೊಬ್ಬನು, ನಿನ್ನ ಮನೆಯಲ್ಲಿ ಗೌರವಸ್ಥನೂ ಆಗಿದ್ದನಲ್ಲವೇ?


ಹೀಗಿರಲಾಗಿ ನೀವು ಸಹೋದರರ ವಿರುದ್ಧ ಪಾಪ ಮಾಡಿ ಅವರ ದುರ್ಬಲವಾದ ಮನಸ್ಸಾಕ್ಷಿಯನ್ನು ನೋಯಿಸಿದರೆ ನೀವು ಕ್ರಿಸ್ತನ ವಿರುದ್ಧ ಪಾಪಮಾಡುವವರಾಗುತ್ತೀರಿ.


ನೆರೆಯವನಿಗೆ ವಿರೋಧವಾಗಿ ಪಾಪ ಮಾಡಿ, ಶಾಪಕ್ಕೆ ಗುರಿಯಾದ ಮನುಷ್ಯನು ತಾನು ನಿರ್ದೋಷಿಯೆಂದು ಪ್ರಮಾಣ ಮಾಡುವಾಗ, ಅವನು ಈ ಆಲಯಕ್ಕೆ ಬಂದು ನಿನ್ನ ಯಜ್ಞವೇದಿಯ ಮುಂದೆ ನಿಂತು ಪ್ರಮಾಣ ಮಾಡಿದರೆ,


“ಮನುಷ್ಯನು ಮನುಷ್ಯರಿಗೆ ಅಪರಾಧಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುವನು; ಆದರೆ ಮನುಷ್ಯನು ಯೆಹೋವನಿಗೆ ಅಪರಾಧಮಾಡಿದರೆ ಮಧ್ಯಸ್ಥಿಕೆ ವಹಿಸುವವರಾರು?” ಎಂದು ಎಚ್ಚರಿಸಿದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ, ಯಾಕೆಂದರೆ ಯೆಹೋವನು ಅವರನ್ನು ನಾಶಮಾಡಲು ನಿರ್ಧರಿಸಿದ್ದನು.


ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.


ತನ್ನ ಸಹೋದರನನ್ನು ದ್ವೇಷಿಸುವವನು ಕೊಲೆಗಾರನಾಗಿದ್ದಾನೆ. ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ.


ನಿಷ್ಕಾರಣವಾಗಿ ನನ್ನ ಮೇಲೆ ಬೀಳಲು ಮುತ್ತಿಗೆ ಹಾಕಿ ನಿಂತಿದ್ದಾರೆ; ಎದ್ದು ಬಂದು ಪರಾಂಬರಿಸಿ ನನಗೆ ಸಹಾಯಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು