Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹನ್ನಳು ದೇವರ ಬಳಿ ಹೀಗೆ ವಿಜ್ಞಾಪಿಸಿದಳು, “ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ; ನನ್ನ ಕೊಂಬು ಯೆಹೋವನಿಂದ ಎತ್ತಲ್ಪಟ್ಟಿದೆ. ಶತ್ರುಗಳ ಮುಂದೆ ನನ್ನ ಬಾಯಿ ಧೈರ್ಯವಾಗಿ ಮಾತನಾಡುತ್ತದೆ, ಯಾಕೆಂದರೆ ನಾನು ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹನ್ನಳು ಹೀಗೆಂದು ಭಜಿಸಿದಳು: “ಆನಂದಿಸುತ್ತಿದೆ ನನ್ನ ಮನ ಸರ್ವೇಶ್ವರನಲಿ ಉನ್ನತೋನ್ನತವಾಗಿದೆ ನನ್ನ ಶಕ್ತಿ ಆ ದೇವನಲಿ ನನಗಿದೆ ಶತ್ರುಗಳನ್ನೂ ಧಿಕ್ಕರಿಸುವ ಶಕ್ತಿ ನನಗಿತ್ತಿರುವನಾ ಸಂತಸದಾಯಕ ಮುಕ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹನ್ನಳ ವಿಜ್ಞಾಪನೆ - ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ; ನನ್ನ ಕೊಂಬು ಯೆಹೋವನಿಂದ ಎತ್ತಲ್ಪಟ್ಟಿದೆ. ಶತ್ರುಗಳ ಮುಂದೆ ನನ್ನ ಬಾಯಿ ತೆರೆದಿರುವದು. ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಹನ್ನಳು ಇಂತೆಂದಳು: “ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ. ನಾನು ನನ್ನ ದೇವರಾದ ಯೆಹೋವನಲ್ಲಿ ಬಲಶಾಲಿಯಾಗಿದ್ದೇನೆ. ನಾನು ನನ್ನ ಶತ್ರುಗಳ ಬಗ್ಗೆ ನಗುವೆನು. ನಾನು ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹನ್ನಳು ಪ್ರಾರ್ಥಿಸಿ ಹೇಳಿದ್ದೇನೆಂದರೆ, “ನನ್ನ ಹೃದಯವು ಯೆಹೋವ ದೇವರಲ್ಲಿ ಸಂತೋಷಿಸಿತು. ನನ್ನ ಕೊಂಬು ಯೆಹೋವ ದೇವರಲ್ಲಿ ಉನ್ನತವಾಯಿತು. ನನ್ನ ಶತ್ರುಗಳ ಮುಂದೆ ನನ್ನ ಬಾಯಿ ಹೆಚ್ಚಳಪಟ್ಟಿತು. ಏಕೆಂದರೆ ನಾನು ನಿಮ್ಮ ರಕ್ಷಣೆಯಲ್ಲಿ ಹರ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:1
37 ತಿಳಿವುಗಳ ಹೋಲಿಕೆ  

ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ; ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವುದು.


ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.


ಆದರೆ ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಂತೆ ಎತ್ತಿದ್ದಿ; ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದಿ.


ಅವರು ಹಿಗ್ಗುವ ಬಲವು ನೀನೇ. ನಿನ್ನ ಕರುಣೆಯ ಕಟಾಕ್ಷದಿಂದ ನಮ್ಮ ಕೊಂಬು ಎತ್ತಲ್ಪಟ್ಟಿರುವುದು.


ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ, ಸಂತೋಷಪಡಿರಿ ಎಂದು ಪುನಃ ಹೇಳುತ್ತೇನೆ.


ನಿನ್ನ ಜಯದಲ್ಲಿ ಉತ್ಸಾಹಧ್ವನಿ ಮಾಡುವೆವು; ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು. ಯೆಹೋವನು ನಿನ್ನ ಎಲ್ಲಾ ವಿಜ್ಞಾಪನೆಗಳನ್ನು ನೆರವೇರಿಸಲಿ.


ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು.


ಆಗ ನನ್ನ ಮನಸ್ಸಿಗೆ ಯೆಹೋವನ ದೆಸೆಯಿಂದ ಹರ್ಷವುಂಟಾಗುವುದು; ಆತನಿಂದಾದ ರಕ್ಷಣೆಯ ನಿಮಿತ್ತ ಆನಂದಪಡುವೆನು.


ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.


ಇಷ್ಟು ಮಾತ್ರವಲ್ಲದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಸಂಧಾನವಾದದ್ದರಿಂದ ಆತನ ಮುಖಾಂತರ ದೇವರಲ್ಲಿ ಉಲ್ಲಾಸಪಡುತ್ತೇವೆ.


ನಾನು ಯೆಹೋವನಲ್ಲಿ ಉಲ್ಲಾಸಿಸುವೆನು, ನನ್ನ ರಕ್ಷಕನಾದ ದೇವರಲ್ಲಿ ಆನಂದಿಸುವೆನು.


ನನ್ನ ಬಲವು, ಕೀರ್ತನೆಯು ಯೆಹೋವನೇ; ಆತನಿಂದ ನನಗೆ ರಕ್ಷಣೆಯುಂಟಾಯಿತು.


ಆದರೆ ನನ್ನ ಪ್ರೀತಿ ಮತ್ತು ಸತ್ಯತೆಗಳು ಅವನೊಡನೆ ಇರುವವು; ನನ್ನ ಹೆಸರಿನಿಂದ ಅವನ ಕೊಂಬು ಎತ್ತಲ್ಪಡುವುದು.


ಮಿರ್ಯಾಮಳು ಅವರಿಗೆ ಹೀಗೆ ಹಾಡಿದಳು: “ಯೆಹೋವನಿಗೆ ಕೀರ್ತನೆ ಹಾಡಿರಿ, ಆತನು ಮಹೋನ್ನತನಾದ ದೇವರಾಗಿದ್ದಾನೆ. ಕುದುರೆಗಳನ್ನೂ, ರಾಹುತರನ್ನೂ ಸಮುದ್ರದಲ್ಲಿ ಮುಳುಗಿಸಿ ನಾಶಮಾಡಿದನು.”


ಆಗ ಮೋಶೆಯೂ, ಇಸ್ರಾಯೇಲರೂ ಯೆಹೋವನನ್ನು ಸ್ತುತಿಸುವುದಕ್ಕಾಗಿ ಈ ಕೀರ್ತನೆಯನ್ನು ಹಾಡಿದರು: “ಯೆಹೋವನಿಗೆ ಸ್ತೋತ್ರ ಗಾನಮಾಡೋಣ; ಆತನು ಮಹಾಜಯಶಾಲಿಯಾದವನು. ಕುದುರೆಗಳನ್ನು ಮತ್ತು ರಾಹುತರನ್ನು ಸಮುದ್ರದಲ್ಲಿ ಕೆಡವಿ ನಾಶಮಾಡಿದ್ದಾನೆ.


ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.


ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರಮಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು.


ಯೆಹೋವನು ನನ್ನ ಬಂಡೆಯು, ನನ್ನ ಕೋಟೆಯು, ನನ್ನ ವಿಮೋಚಕನು, ನನ್ನ ದೇವರು, ನನ್ನ ಆಶ್ರಯಗಿರಿಯು, ನನ್ನ ಗುರಾಣಿಯು, ನನ್ನ ರಕ್ಷಣೆಯ ಕೊಂಬು ಮತ್ತು ನನ್ನ ದುರ್ಗವು ಆಗಿದ್ದಾನೆ.


ಶಿಗ್ಯೋನೋತ್ ಸ್ವರದ ಮೇಲೆ ಪ್ರವಾದಿಯಾದ ಹಬಕ್ಕೂಕನ ಪ್ರಾರ್ಥನೆ.


ದುಷ್ಟರ ಕೊಂಬುಗಳನ್ನೆಲ್ಲಾ ಮುರಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳನ್ನು ಉನ್ನತಮಟ್ಟಕ್ಕೆ ಎತ್ತಲ್ಪಡುವವು.


ನನ್ನ ಬಾಯಲ್ಲಿ ನಿನ್ನ ಸ್ತೋತ್ರವಲ್ಲದೆ ಮತ್ತೊಂದಿಲ್ಲ; ದಿನವೆಲ್ಲಾ ನಿನ್ನ ಘನತೆಯನ್ನು ವರ್ಣಿಸುತ್ತಿರುವೆನು.


ಪರಲೋಕವೇ, ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.


ತನ್ನ ಸೇವಕನಾದ ದಾವೀದನ ಮನೆತನದಲ್ಲಿ, ನಮಗೋಸ್ಕರ ಒಬ್ಬ ರಕ್ಷಣಾವೀರನನ್ನು ಎಬ್ಬಿಸಿದ್ದಾನೆ.


ಮೀಕನ ಮಗನೂ, ಜಬ್ದೀಯನ ಮೊಮ್ಮಗನೂ, ಆಸಾಫನ ಮರಿಮಗನೂ, ಪ್ರಾರ್ಥನೆಯ ಸಮಯದಲ್ಲಿ ಕೃತಜ್ಞತಾಸ್ತುತಿಯನ್ನು ಆರಂಭಿಸುತ್ತಾ ಆರಾಧನೆಯಲ್ಲಿ ಜನರನ್ನು ನಡೆಸುತ್ತಿದ್ದ ಮತ್ತನ್ಯ, ತನ್ನ ಬಂಧುಗಳಲ್ಲಿ ದ್ವಿತೀಯ ಸ್ಥಾನದವನಾದ ಬಕ್ಬುಕ್ಯ, ಶಮ್ಮೂವನ ಮಗನೂ, ಗಾಲಾಲನ ಮೊಮ್ಮಗನೂ, ಯೆದೂತೂನನ ಮರಿಮಗನೂ ಆದ ಅಬ್ದ ಎಂಬುವವರು,


ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು. ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು (ಬಲವುಳ್ಳವು); ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೊಟ್ಯಾಂತರ ಜನರೂ ಮನಸ್ಸೆ ಕುಲದ ಲಕ್ಷಾಂತರ ಮಂದಿಯೂ ಇಂಥವರೇ” ಎಂದು ಹೇಳಿದನು.


ಗೋಣಿಯನ್ನು ಹೊಲೆದು ಮೈಮೇಲೆ ಹಾಕಿಕೊಂಡಿದ್ದೇನೆ; ನನ್ನ ಕೊಂಬನ್ನು ಧೂಳಿನಲ್ಲಿ ತಗ್ಗಿಸಿಕೊಂಡಿದ್ದೇನೆ.


ಆತನು ತನ್ನ ಪ್ರಜೆಗೋಸ್ಕರ ಘನದ ಕೊಂಬನ್ನು ಎಬ್ಬಿಸಿದ್ದಾನೆ. ಆದುದರಿಂದ ಆತನ ಎಲ್ಲಾ ಭಕ್ತರು, ಆತನ ಸಮೀಪ ಪ್ರಜೆಗಳಾದ ಇಸ್ರಾಯೇಲರು ಹಿಗ್ಗುತ್ತಾರೆ. ಯೆಹೋವನಿಗೆ ಸ್ತೋತ್ರ!


ಇದಲ್ಲದೆ ಆಕೆಯ ಸವತಿಯಾದ ಪೆನಿನ್ನಳು, “ಯೆಹೋವನು ನಿನ್ನನ್ನು ಬಂಜೆಯನ್ನಾಗಿ ಮಾಡಿದ್ದಾನೆ” ಎಂದು ಹೇಳಿ ಆಕೆಯನ್ನು ಕೆಣಕಿ ನೋಯಿಸುತ್ತಿದ್ದಳು.


ಅವರು ಪ್ರತಿವರ್ಷವೂ ಕುಟುಂಬವಾಗಿ ಯೆಹೋವನ ಮಂದಿರಕ್ಕೆ ಹೋದಾಗೆಲ್ಲಾ ಪೆನಿನ್ನಳು ಆಕೆಯನ್ನು ಕೆಣಕುತ್ತಿದ್ದುದರಿಂದ ಹನ್ನಳು ಊಟ ಮಾಡದೆ ಅಳುತ್ತಾ ಇದ್ದಳು.


ಆ ನಂತರ ಯೆಹೂದ್ಯರೂ ಯೆರೂಸಲೇಮಿನವರೂ ಅವರ ಮುಂದೆ ಯೆಹೋಷಾಫಾಟನೂ ಯೆಹೋವನು ತಮಗೆ ಶತ್ರುಗಳ ಮೇಲೆ ಜಯವನ್ನು ಅನುಗ್ರಹಿಸಿದ್ದಾನೆಂದು ಜಯಘೋಷ ಮಾಡುತ್ತಾ ಯೆರೂಸಲೇಮಿಗೆ ಹಿಂತಿರುಗಿದರು.


ನೀನು ಅವನ ಪ್ರಾರ್ಥನೆಯನ್ನು ನಿರಾಕರಿಸದೆ, ಅವನ ಇಷ್ಟಾರ್ಥವನ್ನು ನೆರವೇರಿಸಿದಿಯಲ್ಲಾ. ಸೆಲಾ


ನಮಗೆ ಗುರಾಣಿಯಂತಿರುವ ನಮ್ಮ ಅರಸನು ಯೆಹೋವನೇ; ಅವನು ಇಸ್ರಾಯೇಲರ ಸದಮಲಸ್ವಾಮಿಯ, ಸ್ವಕೀಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು