1 ಸಮುಯೇಲ 2:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ಯೆಹೋವನನ್ನು ವಿರೋಧಿಸುವವರು ಮುರಿಯಲ್ಪಡುತ್ತಾರೆ; ಆತನು ಆಕಾಶದಿಂದ ಅವರ ಮೇಲೆ ಗರ್ಜಿಸುತ್ತಾನೆ. ಯೆಹೋವನು ಭೂಮಿಯ ಕಟ್ಟಕಡೆಯಲ್ಲಿರುವವರಿಗೂ ನ್ಯಾಯತೀರಿಸುವನು. ತಾನು ನೇಮಿಸಿದ ಅರಸನಿಗೆ ಬಲವನ್ನು ಅನುಗ್ರಹಿಸುವನು; ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಚದರಿಹೋಗುವರು ಸರ್ವೇಶ್ವರನ ವಿರೋಧಿಗಳು ಆಗಸದಿಂದಾತ ಅವರ ವಿರುದ್ಧ ಗರ್ಜಿಸಲು! ನ್ಯಾಯ ತೀರಿಸುವನಾತ ಜಗದ ಕಟ್ಟಕಡೆಯವರೆಗೆ ಶಕ್ತಿಸಾಮರ್ಥ್ಯವನೀವನು ತಾ ನೇಮಿಸಿದರಸನಿಗೆ ಏರಿಸುವನು ತನ್ನಭಿಷಿಕ್ತನ ಒಲುಮೆಯನು ಉನ್ನತಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯೆಹೋವನ ವಿರೋಧಿಗಳು ಮುರಿಯಲ್ಪಡುತ್ತಾರೆ; ಆತನು ಆಕಾಶದಿಂದ ಅವರ ಮೇಲೆ ಗರ್ಜಿಸುತ್ತಾನೆ. ಯೆಹೋವನು ಭೂವಿುಯ ಕಟ್ಟಕಡೆಯಲ್ಲಿರುವವರಿಗೂ ನ್ಯಾಯತೀರಿಸುವನು. ತಾನು ನೇವಿುಸಿದ ಅರಸನಿಗೆ ಬಲವನ್ನು ಅನುಗ್ರಹಿಸುವನು; ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೆಹೋವನು ತನ್ನ ಶತ್ರುಗಳನ್ನು ನಾಶಗೊಳಿಸುವನು. ಮಹೋನ್ನತನಾದ ದೇವರು ಪರಲೋಕದಲ್ಲಿ ಜನರಿಗೆ ವಿರುದ್ಧವಾಗಿ ಗುಡುಗುವನು. ಯೆಹೋವನು ಬಹುದೂರದ ದೇಶಗಳಿಗೂ ತೀರ್ಪನ್ನು ಕೊಡುವನು. ಆತನು ತನ್ನ ರಾಜನಿಗೆ ಶಕ್ತಿಯನ್ನು ಕೊಡುವನು. ತಾನು ಅಭಿಷೇಕಿಸಿದ ರಾಜನನ್ನು ಬಲಗೊಳಿಸುವನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೆಹೋವ ದೇವರ ಸಂಗಡ ವಿವಾದಿಸುವವರು ಚದರಿಹೋಗುವರು. ಅವರು ಆಕಾಶದಲ್ಲಿಂದ ಅವರ ಮೇಲೆ ಗುಡುಗುವರು, ಯೆಹೋವ ದೇವರು ಲೋಕಾಂತ್ಯದವರೆಗೂ ನ್ಯಾಯತೀರಿಸುವರು. “ತಮ್ಮ ಅರಸನಿಗೆ ಬಲ ಕೊಡುವರು. ತಮ್ಮ ಅಭಿಷಿಕ್ತನ ಕೊಂಬನ್ನು ಉನ್ನತ ಮಾಡುವರು.” ಅಧ್ಯಾಯವನ್ನು ನೋಡಿ |
ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.