Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅರ್ಪಿಸುವವನು, ಮೊದಲು ಕೊಬ್ಬನ್ನು ಹೋಮಮಾಡಲಿ, ಅನಂತರ ನಿನಗೆ ಬೇಕಾದದ್ದನ್ನು ತೆಗೆದುಕೋ ಎಂದು ಹೇಳಿದರೆ ಅವನು, “ಈಗಲೇ ಕೊಡಬೇಕು; ಇಲ್ಲವಾದರೆ ಬಲಾತ್ಕಾರದಿಂದ ತೆಗೆದುಕೊಳ್ಳುವೆನು” ಎನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಬಲಿಯರ್ಪಿಸುತ್ತಿದ್ದವನು ಅವನಿಗೆ, “ಮೊದಲು ಕೊಬ್ಬನ್ನು ಹೋಮಮಾಡೋಣ; ಅನಂತರ ನಿನಗೆ ಬೇಕಾದುದನ್ನು ತೆಗೆದುಕೊಳ್ಳುವಿಯಂತೆ,” ಎಂದು ಹೇಳಿದಾಗ, “ಕೂಡದು, ಈಗಲೇ ಬೇಕು; ಇಲ್ಲವಾದರೆ ಬಲಾತ್ಕಾರದಿಂದ ತೆಗೆದುಕೊಳ್ಳುತ್ತೇನೆ,” ಎಂದು ಪೀಡಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅರ್ಪಿಸುವವನು - ಮೊದಲು ಕೊಬ್ಬನ್ನು ಹೋಮಮಾಡಲಿ, ಅನಂತರ ನಿನಗೆ ಬೇಕಾದದ್ದನ್ನು ತೆಗೆದುಕೋ ಎಂದು ಹೇಳಿದಾಗ ಅವನು - ಈಗಲೇ ಕೊಡಬೇಕು: ಇಲ್ಲವಾದರೆ ಬಲಾತ್ಕಾರದಿಂದ ತೆಗೆದುಕೊಳ್ಳುವೆನು ಎನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯಜ್ಞವನ್ನರ್ಪಿಸುವವನು, “ಕೊಬ್ಬನ್ನು ಮೊದಲು ಹೋಮ ಮಾಡೋಣ. ಅನಂತರ ನಿಮಗೆ ಬೇಕಾದುದನ್ನು ತೆಗೆದುಕೊಳ್ಳಿ” ಎಂದು ಹೇಳಿದರೆ, ಯಾಜಕರ ಸೇವಕನು, “ಇಲ್ಲ, ಯಾಜಕನಿಗಾಗಿ ಕರಿಯಲು ಮಾಂಸವನ್ನು ಈಗಲೇ ಕೊಡು. ನೀನು ಕೊಡುವುದಿಲ್ಲವಾದರೆ, ನಾನೇ ತೆಗೆದುಕೊಳ್ಳುತ್ತೇನೆ” ಎಂದು ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಮೊದಲು ಕೊಬ್ಬನ್ನು ಸುಡಲಿ, ಅನಂತರ ನಿನಗೆ ಬೇಕಾದದ್ದನ್ನು ತೆಗೆದುಕೋ,” ಎಂದು ಯಾರಾದರೂ ಹೇಳಿದರೆ; ಸೇವಕನು, “ಇಲ್ಲ ಈಗಲೇ ಕೊಡು. ನೀನು ಕೊಡದಿದ್ದರೆ, ನಾನು ಒತ್ತಾಯದಿಂದ ತೆಗೆದುಕೊಳ್ಳುವೆನು,” ಎನ್ನುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:16
9 ತಿಳಿವುಗಳ ಹೋಲಿಕೆ  

ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮದ ರೂಪವಾಗಿ ಅರ್ಪಿಸಿದ ಆಹಾರವಾಗಿರುವುದು. ಯಜ್ಞಪಶುಗಳ ಕೊಬ್ಬೆಲ್ಲವೂ ಯೆಹೋವನದು.


ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ, ತಿನ್ನುವುದಕ್ಕೆ ಕೊಡುವಂಥವರಿಗೆ, “ಸಮಾಧಾನವಿರುವುದು” ಎಂದು ಪ್ರಕಟಿಸುವರು ಮತ್ತು ತಮ್ಮ ಬಾಯಿಗೆ ರುಚಿಯಾದ ತಿಂಡಿಯನ್ನು ಕೊಡದವನ ಮೇಲೆ ಯುದ್ಧವನ್ನು ನಿರ್ಧರಿಸುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ,


ನನಗಿಂತ ಮೊದಲಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ ದಿನಕ್ಕೆ ನಲ್ವತ್ತು ರೂಪಾಯಿಯ ಆಹಾರವನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವುದರಿಂದ ಹಾಗೆ ಮಾಡದೆ ಆ ಪೌಳಿಗೋಡೆ ಕಟ್ಟುವುದರಲ್ಲಿ ನಿರತನಾಗಿದ್ದೆನು.


ದಾನ್ಯರು ಅವನಿಗೆ, “ನಮ್ಮಲ್ಲಿ ಕೆಲವರು ತುಂಬಾ ಕೋಪಿಸಿಕೊಳ್ಳುವವರಿದ್ದಾರೆ; ಅವರು ನಿಮ್ಮ ಮೇಲೆ ಬಿದ್ದರೆ ನೀನೂ, ನಿನ್ನ ಮನೆಯವರೂ ಪ್ರಾಣವನ್ನು ಕಳೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ಬಾಯಿಮುಚ್ಚಿಕೊಂಡು ಹೋಗು” ಎಂದು ಹೇಳಿ ಮುಂದೆ ನಡೆದರು.


ಇದಲ್ಲದೆ ಯಾಜಕನ ಆಳು ಕೊಬ್ಬನ್ನು ಹೋಮಮಾಡುವುದಕ್ಕಿಂತ ಮುಂಚೆಯೇ ಬಂದು ಯಜ್ಞವನ್ನರ್ಪಿಸುವವನಿಗೆ, “ಯಾಜಕನಿಗೋಸ್ಕರ ಸುಡತಕ್ಕ ಮಾಂಸವನ್ನು ಕೊಡು; ನೀನು ಬೇಯಿಸಿದ ಮಾಂಸವನ್ನು ಅವನು ತೆಗೆದುಕೊಳ್ಳುವುದಿಲ್ಲ; ಅವನಿಗೆ ಹಸಿಮಾಂಸವೇ ಬೇಕು” ಅನ್ನುವನು.


ಹೀಗೆ ಆ ಯೌವನಸ್ಥರು ಯೆಹೋವನ ನೈವೇದ್ಯವನ್ನು ತುಚ್ಛೀಕರಿಸಿದ್ದರಿಂದ ಅವರ ಪಾಪವು ಯೆಹೋವನ ದೃಷ್ಟಿಯಲ್ಲಿ ಆಧಿಕವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು