Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನ ತಾಯಿಯು ಪ್ರತಿವರ್ಷವೂ ತನ್ನ ಗಂಡನ ಜೊತೆಯಲ್ಲಿ ಯಜ್ಞವನ್ನರ್ಪಿಸುವುದಕ್ಕೆ ಬರುವಾಗ ಒಂದು ಚಿಕ್ಕ ಅಂಗಿಯನ್ನು ಹೊಲಿದು ಅವನಿಗೆ ತಂದುಕೊಡುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವನ ತಾಯಿ ಪ್ರತಿವರ್ಷ ಗಂಡನ ಜೊತೆಯಲ್ಲಿ ಬಲಿಯನ್ನು ಅರ್ಪಿಸುವುದಕ್ಕೆ ಬಂದಾಗ ಒಂದು ಚಿಕ್ಕ ನಿಲುವಂಗಿಯನ್ನು ಹೊಲಿದು ಅವನಿಗೆ ತಂದುಕೊಡುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವನ ತಾಯಿಯು ಪ್ರತಿವರುಷವೂ ಗಂಡನ ಜೊತೆಯಲ್ಲಿ ಯಜ್ಞವನ್ನರ್ಪಿಸುವದಕ್ಕೆ ಬಂದಾಗ ಒಂದು ಚಿಕ್ಕ ಅಂಗಿಯನ್ನು ಹೊಲಿದು ಅವನಿಗೆ ತಂದು ಕೊಡುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಸಮುವೇಲನ ತಾಯಿಯು ಪ್ರತಿವರ್ಷವೂ ಒಂದು ಚಿಕ್ಕ ಮೇಲಂಗಿಯನ್ನು ಅವನಿಗಾಗಿ ತಯಾರಿಸಿ, ಗಂಡನೊಡನೆ ವಾರ್ಷಿಕ ಯಜ್ಞವನ್ನು ಅರ್ಪಿಸಲು ಶೀಲೋವಿಗೆ ಹೋದಾಗ ಅವನಿಗೆ ಕೊಡುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವನ ತಾಯಿ ಪ್ರತಿ ವರುಷದಲ್ಲೂ ವರುಷದ ಬಲಿಯನ್ನು ಅರ್ಪಿಸಲು ತನ್ನ ಗಂಡನ ಸಂಗಡ ಬರುವಾಗ, ಅವನಿಗೆ ಒಂದು ಚಿಕ್ಕ ನಿಲುವಂಗಿಯನ್ನು ಮಾಡಿಕೊಂಡು ಬರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:19
4 ತಿಳಿವುಗಳ ಹೋಲಿಕೆ  

ಅವನು ಪ್ರತಿವರ್ಷವೂ ಸೇನಾಧೀಶ್ವರನಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸಿ ಆತನನ್ನು ಆರಾಧಿಸುವುದಕ್ಕೋಸ್ಕರ ತನ್ನ ಊರಿನಿಂದ ಶೀಲೋವಿಗೆ ಹೋಗುತ್ತಿದ್ದನು. ಅಲ್ಲಿ ಏಲಿಯನ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸ್ ಎಂಬವರು ಯೆಹೋವನ ಯಾಜಕರಾಗಿದ್ದರು.


ಎಲ್ಕಾನನು ಎಂದಿನಂತೆ ಕುಟುಂಬ ಸಹಿತವಾಗಿ ಯೆಹೋವನಿಗೆ ವಾರ್ಷಿಕಯಜ್ಞವನ್ನು ಅರ್ಪಿಸಿ ಹರಕೆಸಲ್ಲಿಸಬೇಕೆಂದು ಶೀಲೋವಿಗೆ ಹೋಗುವುದಕ್ಕೆ ಸಿದ್ಧನಾಗಲು ಹನ್ನಳು


ನೀವು ವರ್ಷಕ್ಕೆ ಮೂರಾವರ್ತಿ ನನಗೆ ಹಬ್ಬಮಾಡಬೇಕು.


ಮಹಾಯಾಜಕನು ಏಫೋದ್ ಕವಚದ ಸಂಗಡ ಧರಿಸಿಕೊಳ್ಳಬೇಕಾದ ಮೇಲಂಗಿಯನ್ನು ನೀನು ನೀಲಿಬಣ್ಣದ ಬಟ್ಟೆಯಿಂದಲೇ ಮಾಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು