Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಯೆಹೋವನಂಥ ಪರಿಶುದ್ಧನು ಇಲ್ಲವೇ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ ನಮ್ಮ ದೇವರಂತಹ ಸಮಾನವಾದ ಆಶ್ರಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸರ್ವೇಶ್ವರನಂಥ ಪರಮಪಾವನನಿಲ್ಲ ನಿನ್ನ ಹೊರತು ದೇವಾ, ಬೇರೆ ದೇವನಿಲ್ಲ; ನಮ್ಮ ದೇವನಿಗೆ ಸಮನಾದ ಆಶ್ರಯದುರ್ಗವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನಂಥ ಪರಿಶುದ್ಧನು ಇಲ್ಲವೇ ಇಲ್ಲ; ನಿನ್ನ ಹೊರತು ದೇವರು ಯಾರು? ನಮ್ಮ ದೇವರೇ ಅಸಮಾನವಾದ ಆಶ್ರಯದುರ್ಗವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನಂತಹ ಪವಿತ್ರ ದೇವರು ಬೇರೆ ಯಾರೂ ಇಲ್ಲ. ನಿನ್ನ ಹೊರತು ಅನ್ಯದೇವರಿಲ್ಲ! ನಮ್ಮ ದೇವರಿಗಿಂತ ಬೇರೊಂದು ಬಂಡೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಯೆಹೋವ ದೇವರ ಹಾಗೆ ಪರಿಶುದ್ಧರಾದವರಿಲ್ಲ. ನಿಶ್ಚಯವಾಗಿ ನಿಮ್ಮ ಹೊರತು ಮತ್ತೊಬ್ಬರಿಲ್ಲ. ನಮ್ಮ ದೇವರ ಹಾಗೆಯೇ ಆಶ್ರಯದುರ್ಗ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:2
37 ತಿಳಿವುಗಳ ಹೋಲಿಕೆ  

ಯೆಹೋವನಲ್ಲದೆ ದೇವರು ಯಾರು? ನಮ್ಮ ದೇವರ ಹೊರತು ಶರಣನು ಎಲ್ಲಿ?


ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಆದಿಯೂ, ನಾನೇ ಅಂತ್ಯವೂ. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.


ಕರ್ತನೇ, ದೇವರುಗಳಲ್ಲಿ ನಿನಗೆ ಸಮಾನನೇ ಇಲ್ಲ; ನಿನ್ನ ಕೃತ್ಯಗಳಿಗೆ ಸರಿಯಾದದ್ದು ಇನ್ನೊಂದಿಲ್ಲ.


ಯೆಹೋವನೇ, ಸೇನಾಧೀಶ್ವರನಾದ ದೇವರೇ, ನಿನಗೆ ಸಮಾನರು ಯಾರು? ಯಾಹುವೇ, ನೀನು ಶಕ್ತನು, ಸತ್ಯತೆಯಿಂದ ಆವರಿಸಲ್ಪಟ್ಟವನು.


ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ನಿನ್ನ ಹಾಗೆ ಪರಿಶುದ್ಧತ್ವದಲ್ಲಿ ಸರ್ವೋತ್ತಮನು ಮಹಿಮೆ ಹೊಂದಿದವನು, ಭಯಂಕರನೂ, ಅದ್ಭುತ ಕೃತ್ಯಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನರು ಯಾರಿದ್ದಾರೆ?


ಏಕೆಂದರೆ, “ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು” ಎಂದು ಬರೆದಿದೆಯಲ್ಲಾ.


ಯೆಹೋವನೇ, ನಿನ್ನ ಸಮಾನನು ಯಾರು ಇಲ್ಲ; ನೀನು ಮಹೋನ್ನತನು, ನಿನ್ನ ನಾಮವು ಸಾಮರ್ಥ್ಯದಿಂದ ಕೂಡಿ ಮಹೋನ್ನತವಾಗಿದೆ.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ನೀನು ನಡಿಸುವ ಈ ಮಹತ್ಕಾರ್ಯಗಳಿಗೆ ಸಮಾನವಾದ ಕಾರ್ಯಗಳನ್ನು ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ ಬೇರೆ ಯಾವ ದೇವರು ನಡೆಸಲಾರನು?


“ನೀನು ಇಸ್ರಾಯೇಲರ ಸಮೂಹದವರಿಗೆ ಹೀಗೆ ಆಜ್ಞಾಪಿಸಬೇಕು, ‘ನಿಮ್ಮ ದೇವರಾದ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.


ಈ ಮೊದಲು ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವುದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಶಾಸ್ತ್ರಗಳು ಬರೆಯಲ್ಪಟ್ಟವು.


ಹೆದರಬೇಡಿರಿ, ಭಯಪಡಬೇಡಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.”


ಹೀಗಿರಲು ದೇವರನ್ನು ಯಾರಿಗೆ ಹೋಲಿಸುವಿರಿ? ಅಥವಾ ಯಾವ ರೂಪವನ್ನು ಆತನಿಗೆ ಸಮಾನ ಮಾಡುವಿರಿ?


ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು.


ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನು ಉಂಟುಮಾಡಿದ್ದಾನೆ; ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ; ಆತನ ನಾಮವು ಪರಿಶುದ್ಧವೂ, ಮಹೋನ್ನತವೂ ಆಗಿದೆ.


ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ. ಆತನು ಪರಿಶುದ್ಧನು.


ಮೇಘಮಂಡಲದಲ್ಲಿ ಯೆಹೋವನಿಗೆ ಸಮಾನರು ಯಾರು? ದೇವದೂತರಲ್ಲಿ ಯೆಹೋವನಿಗೆ ಸರಿಯಾದವರು ಯಾರು?


ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ.


ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.


ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪರಿಶುದ್ಧಪರ್ವತದ ಕಡೆಗೆ ಅಡ್ಡಬೀಳಿರಿ. ನಮ್ಮ ಯೆಹೋವ ದೇವರು ಪರಿಶುದ್ಧನು.


ಪರಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರು ಅವಶ್ಯ? ಇಹಲೋಕದಲ್ಲಿ ನಿನ್ನನ್ನಲ್ಲದೆ ಇನ್ನಾರನ್ನೂ ಬಯಸುವುದಿಲ್ಲ.


ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ. ಮಹತ್ತರವಾದ ಕೃತ್ಯಗಳನ್ನು ನಡೆಸಿದ ದೇವರೇ, ನಿನಗೆ ಸಮಾನರು ಯಾರು?


ನಾನು ಯಾವಾಗಲೂ ಮರೆಹೋಗುವ ಆಶ್ರಯಗಿರಿಯಾಗಿರು; ನನ್ನ ರಕ್ಷಣೆಗೋಸ್ಕರ ಆಜ್ಞಾಪಿಸಿದ್ದೀಯಲ್ಲವೇ. ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ.


ಯೆಹೋವನು ನನ್ನ ಬಂಡೆಯು, ನನ್ನ ಕೋಟೆಯು, ನನ್ನ ವಿಮೋಚಕನು, ನನ್ನ ದೇವರು, ನನ್ನ ಆಶ್ರಯಗಿರಿಯು, ನನ್ನ ಗುರಾಣಿಯು, ನನ್ನ ರಕ್ಷಣೆಯ ಕೊಂಬು ಮತ್ತು ನನ್ನ ದುರ್ಗವು ಆಗಿದ್ದಾನೆ.


ಆತನು ಅವರ ವಿಷಯದಲ್ಲಿ ಹೀಗೆ ಅಂದುಕೊಂಡನು, “ನಾನು ಅವರಿಗೆ ವಿಮುಖನಾಗಿ ಅವರಿಗೆ ಪ್ರಾಪ್ತವಾಗುವ ಗತಿಯನ್ನು ನೋಡುವೆನು. ಅವರು ಸತ್ಯವನ್ನು ತಿಳಿದೂ ಅದನ್ನು ಅನುಸರಿಸದೆ, ದ್ರೋಹಿಗಳಾದ ಮಕ್ಕಳಾಗಿದ್ದಾರೆ.


ಯೆಹೋವನೊಬ್ಬನೇ ದೇವರು, ಬೇರೆ ದೇವರೇ ಇಲ್ಲವೆಂದು ನೀವು ತಿಳಿದುಕೊಳ್ಳುವುದಕ್ಕಾಗಿ ಇದೆಲ್ಲಾ ನಿಮಗೆ ಮಾತ್ರ ತೋರಿಸಿದ್ದಾನೆ.


ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವುದಿಲ್ಲವೋ ಆ ಮನುಷ್ಯನೇ ಧನ್ಯನು.”


ದೇವರೇ, ಯೆಹೋವನೇ! ನೀನೇ ಮಹೋನ್ನತನು. ನಿನ್ನ ಸಮಾನರು ಯಾರೂ ಇಲ್ಲ. ನಾವು ಕೇಳಿದವುಗಳನ್ನೆಲ್ಲಾ ನೀನು ನಮಗೆ ನೀಡಿದ್ದೆಲ್ಲವನ್ನು ಆಲೋಚಿಸಿ ನೋಡಿದರೆ ನಿನ್ನ ಹೊರತು ದೇವರೇ ಇಲ್ಲವೆಂಬುದು ನಿಶ್ಚಯ.


ಆತನು ನನ್ನ ಆಶ್ರಯಗಿರಿಯಾಗಿರುವ ದೇವರೂ, ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ, ನನ್ನ ದುರ್ಗವೂ, ನನ್ನ ಶರಣನೂ, ಹಿಂಸೆಯಿಂದ ನನ್ನನ್ನು ರಕ್ಷಿಸುವವನೂ ಆಗಿದ್ದಾನೆ.


“ಇಸ್ರಾಯೇಲ್ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ, ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರಿಲ್ಲ. ಪೂರ್ಣಮನಸ್ಸಿನಿಂದ ನಿನಗೆ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನೂ, ಕೃಪೆಯನ್ನೂ ನೆರವೇರಿಸುವವನು.


ಯೆಹೋವನಲ್ಲದೆ ದೇವರು ಯಾರು? ನಮ್ಮ ದೇವರ ಹೊರತು ಶರಣನು ಎಲ್ಲಿ?


ಅವರು ಯೆಹೋವನ ಭಯಂಕರವಾದ ಮಹಾನಾಮವನ್ನು ಕೊಂಡಾಡಲಿ; ಆತನು ಪರಿಶುದ್ಧನು.


ಏಕೆಂದರೆ ನಾನು ನಿಮ್ಮ ದೇವರಾದ ಯೆಹೋವನು; ನೀವು ದೇವಜನರಿಗೆ ತಕ್ಕಂತೆ ಇರಬೇಕು. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.


ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಯೆಹೋವನು ನಾನೇ; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.


ನೀವು ಇದನ್ನೆಲ್ಲಾ ಆಲೋಚಿಸಿ ಆಕಾಶದಲ್ಲಿಯೂ ಮತ್ತು ಭೂಮಿಯಲ್ಲಿಯೂ ಯೆಹೋವನೊಬ್ಬನೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬುವುದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು