1 ಸಮುಯೇಲ 2:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 “ಮನುಷ್ಯನು ಮನುಷ್ಯರಿಗೆ ಅಪರಾಧಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುವನು; ಆದರೆ ಮನುಷ್ಯನು ಯೆಹೋವನಿಗೆ ಅಪರಾಧಮಾಡಿದರೆ ಮಧ್ಯಸ್ಥಿಕೆ ವಹಿಸುವವರಾರು?” ಎಂದು ಎಚ್ಚರಿಸಿದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ, ಯಾಕೆಂದರೆ ಯೆಹೋವನು ಅವರನ್ನು ನಾಶಮಾಡಲು ನಿರ್ಧರಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಮನುಷ್ಯನು ಮನುಷ್ಯನಿಗೆ ವಿರುದ್ಧ ಅಪರಾಧ ಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುತ್ತಾರೆ. ಆದರೆ ಮನುಷ್ಯನು ಸರ್ವೇಶ್ವರನಿಗೆ ವಿರುದ್ಧ ಅಪರಾಧ ಮಾಡಿದರೆ ಮಧ್ಯಸ್ಥಿಕೆ ವಹಿಸುವವರಾರು?” ಎಂದು ಎಚ್ಚರಿಸಿದನು. ಆದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ. ಎಂದೇ ಅವರನ್ನು ಕೊಲ್ಲಬೇಕೆಂಬುದು ಸರ್ವೇಶ್ವರನ ಚಿತ್ತವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಮನುಷ್ಯನು ಮನುಷ್ಯನಿಗೆ ಅಪರಾಧ ಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುವನು; ಮನುಷ್ಯನು ಯೆಹೋವನಿಗೆ ಅಪರಾಧಮಾಡಿದರೆ ವಹಿಸುವವರಾರು ಎಂದು ಎಚ್ಚರಿಸಿದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ. ಯೆಹೋವನು ಅವರನ್ನು ಸಾಯಿಸಬೇಕೆಂದಿದ್ದನಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಒಬ್ಬ ಮನುಷ್ಯನು ಬೇರೊಬ್ಬನ ವಿರುದ್ಧ ಅಪರಾಧ ಮಾಡಿದರೆ, ಯೆಹೋವನು ಅವನಿಗೆ ಸಹಾಯ ಮಾಡಬಹುದು, ಆದರೆ ಒಬ್ಬ ಮನುಷ್ಯನು ಯೆಹೋವನ ವಿರುದ್ಧವೇ ಅಪರಾಧ ಮಾಡಿದರೆ, ಆಗ ಅವನಿಗೆ ಸಹಾಯ ಮಾಡುವವರು ಯಾರು?” ಎಂದು ಬುದ್ಧಿಮಾತು ಹೇಳಿದನು. ಆದರೆ ಏಲಿಯ ಮಾತನ್ನು ಅವನ ಮಕ್ಕಳು ಕೇಳಲಿಲ್ಲ. ಆದ್ದರಿಂದ ಯೆಹೋವನು ಏಲಿಯ ಮಕ್ಕಳನ್ನು ಕೊಲ್ಲಲು ನಿರ್ಧರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಮನುಷ್ಯನಿಗೆ ವಿರೋಧವಾಗಿ ಮನುಷ್ಯನು ಪಾಪಮಾಡಿದರೆ, ದೇವರು ಅಪರಾಧಿಗಾಗಿ ಮಧ್ಯಸ್ಥಿಕೆಯನ್ನು ವಹಿಸುವರು. ಆದರೆ ಒಬ್ಬನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದರೆ, ಅವನಿಗೋಸ್ಕರ ವಿಜ್ಞಾಪನೆ ಮಾಡತಕ್ಕವರು ಯಾರು?” ಎಂದನು. ಆದರೂ ಅವರು ತಮ್ಮ ತಂದೆಯ ಮಾತನ್ನು ಕೇಳದೆ ಹೋದರು. ಯೆಹೋವ ದೇವರು ಅವರನ್ನು ಮರಣದಂಡನೆಗೆ ಒಪ್ಪಿಸಬೇಕೆಂದಿದ್ದರು. ಅಧ್ಯಾಯವನ್ನು ನೋಡಿ |