1 ಸಮುಯೇಲ 2:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ಯೆಹೋವನೇ ಸಾಯಿಸುವವನೂ ಬದುಕಿಸುವವನೂ; ಪಾತಾಳದಲ್ಲಿ ದೊಬ್ಬುವವನೂ ಮೇಲಕ್ಕೆ ಬರಮಾಡುವವನೂ ಆತನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಜೀವಕೊಡುವವನು, ತೆಗೆದುಕೊಳ್ಳುವವನು ಆ ಸರ್ವೇಶ್ವರನೇ ಪಾತಾಳಕ್ಕಿಳಿಸುವವನು, ಮೇಲಕ್ಕೆಳೆದುಕೊಳ್ಳುವವನು ಆತನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆಹೋವನೇ ಸಾಯಿಸುವವನೂ ಬದುಕಿಸುವವನೂ; ಪಾತಾಳದಲ್ಲಿ ದೊಬ್ಬುವವನೂ ಮೇಲಕ್ಕೆ ಬರಮಾಡುವವನೂ ಆತನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೆಹೋವನು ಜನರಿಗೆ ಸಾವನ್ನೂ ತರುವನು. ಅಂತೆಯೇ ಅವರಿಗೆ ಜೀವವನ್ನೂ ದಯಪಾಲಿಸುವನು. ಆತನು ಅವರಿಗೆ ಮರುಜೀವವನ್ನು ದಯಪಾಲಿಸಬಲ್ಲನು. ಯೆಹೋವನು ಜನರನ್ನು ಮರಣ ಸ್ಥಳವಾದ ಪಾತಾಳಕ್ಕೆ ತಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ಯೆಹೋವ ದೇವರು ಮರಣ ತರುವವರೂ, ಬದುಕಿಸುವವರೂ ಆಗಿದ್ದಾರೆ. ಪಾತಾಳಕ್ಕೆ ಇಳಿಯುವಂತೆ ಮಾಡುತ್ತಾರೆ, ಮೇಲಕ್ಕೆ ತರುತ್ತಾರೆ. ಅಧ್ಯಾಯವನ್ನು ನೋಡಿ |
ಇಸ್ರಾಯೇಲರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ಅವನು ಕಳುಹಿಸಿದ ಮನುಷ್ಯನನ್ನು ಕುಷ್ಠರೋಗದಿಂದ ವಾಸಿಮಾಡಬೇಕಂತೆ. ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನಮಾಡುವುದಕ್ಕಾಗಲಿ, ಸಾಯಿಸುವುದಕ್ಕಾಗಲಿ ನನಗೆ ಸಾಮರ್ಥ್ಯ ಉಂಟೋ? ಇವನು ನನ್ನೊಡನೆ ಜಗಳವಾಡುವುದಕ್ಕೆ ಕಾರಣ ಹುಡುಕುತ್ತಿದ್ದಾನಲ್ಲವೇ ನೀವೇ ಆಲೋಚಿಸಿ ನೋಡಿರಿ” ಎಂದು ಹೇಳಿದನು.