Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಆತನು ತನ್ನ ನಂಬಿಗಸ್ತ ಭಕ್ತರ ಹೆಜ್ಜೆಗಳನ್ನು ಕಾಯುವನು; ಆದರೆ ದುಷ್ಟರನ್ನು ಅಂಧಕಾರದ ಮೌನದಲ್ಲಿ ಮುಳುಗಿಸುವನು, ಭುಜಬಲದಿಂದಲೇ ಯಾವನೂ ಜಯಹೊಂದಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕಾಯುವನಾತ ತನ್ನ ಭಕ್ತರನು ಹೆಜ್ಜೆ ಹೆಜ್ಜೆಗು ದುರುಳರಾದರೋ ಮುಳುಗಿ ಮೌನ ತಾಳುವರು ಅಂಧಕಾರದೊಳು. ಕೇವಲ ಭುಜಬಲದಿಂದ ಜಯಹೊಂದಲಾರನು ನರಮಾನವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆತನು ತನ್ನ ಭಕ್ತರ ಹೆಜ್ಜೆಗಳನ್ನು ಕಾಯುವನು; ದುಷ್ಟರು ಅಂಧಕಾರದಲ್ಲಿ ಮುಳುಗಿ ಮೌನಹೊಂದುವರು. ಬಾಹುಬಲದಿಂದಲೇ ಯಾವನೂ ಜಯಹೊಂದಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ತನ್ನ ಪವಿತ್ರ ಜನರನ್ನು ರಕ್ಷಿಸುವನು. ಆತನು ಅವರನ್ನು ಎಡವದಂತೆ ಕಾಪಾಡುವನು. ಆದರೆ ಕೆಟ್ಟವರು ನಾಶವಾಗಿ ಕತ್ತಲೆಯಲ್ಲಿ ಬೀಳುವರು. ಅವರ ಶಕ್ತಿ ಅವರಿಗೆ ಜಯನೀಡಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರು ತಮ್ಮ ಪರಿಶುದ್ಧರ ಪಾದಗಳನ್ನು ಕಾಯುವರು. ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು. “ತನ್ನ ಶಕ್ತಿಯಿಂದ ಒಬ್ಬನೂ ಜಯಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:9
41 ತಿಳಿವುಗಳ ಹೋಲಿಕೆ  

ಆತನು ನಿನ್ನ ಪಾದಗಳನ್ನು ಕದಲಗೊಡಿಸುವುದಿಲ್ಲ; ನಿನ್ನನ್ನು ಕಾಯುವವನು ತೂಕಡಿಸದಿರಲಿ.


ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.


ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, “ಪರಾಕ್ರಮದಿಂದಲ್ಲ, ಬಲದಿಂದಲ್ಲ. ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ” ಎಂಬ ಈ ಮಾತುಗಳನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ.


ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ. ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.


ಯೆಹೋವನೇ, ನನ್ನ ಕಾಲು ಜಾರಿತೆಂದು ಅಂದುಕೊಂಡಾಗಲೇ, ನಿನ್ನ ಕೃಪೆಯು ನನಗೆ ಆಧಾರವಾಯಿತು.


ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು.


ನಿನ್ನ ಗುಡಾರಕ್ಕೆ ಅಪಾಯವಿಲ್ಲವೆಂದು ನಿನಗೆ ಗೊತ್ತೇ ಇರುವುದು; ನಿನ್ನ ಹಟ್ಟಿಯನ್ನು ನೀನು ಪರೀಕ್ಷಿಸುವಾಗ ಏನೂ ಕಡಿಮೆಯಾಗಿರುವುದಿಲ್ಲ.


“ಆತನು ತನ್ನ ಜನರನ್ನು ಪ್ರೀತಿಸುತ್ತಾನೆ. ಯೆಹೋವನೇ, ನಿನ್ನ ಪರಿಶುದ್ಧ ಜನರು ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣಸನ್ನಿಧಾನದಲ್ಲಿ ಕುಳಿತಿರುವರು; ನೀನು ಹೇಳುವ ಆಜ್ಞೆಗಳನ್ನು ತಪ್ಪದೆ ಪಾಲಿಸಿದರು.


ಮನುಷ್ಯನು ತನ್ನ ಮನದಂತೆ ದಾರಿಯನ್ನು ಆರಿಸಿಕೊಂಡರೂ, ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು.


ನೀನು ಹೋಗುವಾಗಲೂ, ಬರುವಾಗಲೂ, ಈಗಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು.


ಇವರು ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ.


ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ಎಸೆಯಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು” ಎಂದು ಹೇಳಿದನು.


ಆ ದಿನದ ಸುದ್ದಿ ಕಹಿಯಾದುದು, ಅದು ರೌದ್ರದ ದಿನ, ಶ್ರಮಸಂಕಟಗಳ ದಿನ, ಹಾಳುಪಾಳುಮಾಡುವ ದಿನ, ಕತ್ತಲಿನ ಮೊಬ್ಬಿನ ದಿನ, ಕಾರ್ಮುಗಿಲ ಕಗ್ಗತ್ತಲ ದಿನ!


ನಾನು ಲೋಕದಲ್ಲಿ ತಿರುಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲುವಿಲ್ಲ. ಬಲಿಷ್ಠರಿಗೆ ಯುದ್ಧದಲ್ಲಿ ಜಯವಿಲ್ಲ. ಜ್ಞಾನಿಗಳಿಗೆ ಅನ್ನ ಸಿಕ್ಕದು. ವಿವೇಕಿಗಳಿಗೆ ಧನ ಲಭಿಸದು. ಪ್ರವೀಣರಿಗೆ ದಯೆ ದೊರಕದು. ಕಾಲವೂ, ಗತಿಯೂ ಅವರೆಲ್ಲರಿಗೆ ಸಂಭವಿಸುತ್ತದೆ.


ಯೆಹೋವನು ನಿನ್ನ ಭರವಸಕ್ಕೆ ಆಧಾರನಾಗಿದ್ದು, ನಿನ್ನ ಕಾಲು ಮೋಸದ ಬಲೆಗೆ ಸಿಕ್ಕದಂತೆ ನಿನ್ನನ್ನು ಕಾಪಾಡುವನು.


ಅವನು ತನ್ನ ಜೀವಮಾನವೆಲ್ಲಾ ಕತ್ತಲೆಯಲ್ಲಿ ಜೀವಿಸುವನು. ಅವನ ರೋಗದೊಂದಿಗೆ ಅವನಿಗೆ ಬಹಳ ರೋಷವೂ ವ್ಯಥೆಯೂ ಇರುವುದು.


ನ್ಯಾಯಮಾರ್ಗವನ್ನು ರಕ್ಷಿಸುತ್ತಾ, ತನ್ನ ಭಕ್ತರ ದಾರಿಯನ್ನು ನೋಡಿಕೊಳ್ಳುವನು.


ನಿನ್ನನ್ನು ಕಾಯುವವನು ಯೆಹೋವನೇ; ನಿನ್ನ ಬಲಗಡೆಯಲ್ಲಿ ನೆರಳಿನಂತೆ ನಿಂತಿರುವಾತನು ಯೆಹೋವನೇ.


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.


ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.


ಯೇಸು ಕ್ರಿಸ್ತನ ಸೇವಕನೂ, ಯಾಕೋಬನ ತಮ್ಮನೂ ಆಗಿರುವ ಯೂದನು ಕರೆಯಲ್ಪಟ್ಟವರಿಗೆ, ತಂದೆಯಾದ ದೇವರಲ್ಲಿ ಪ್ರಿಯರಾದವರಿಗೆ, ಯೇಸು ಕ್ರಿಸ್ತನಿಗಾಗಿ ಕಾಪಾಡಲ್ಪಟ್ಟವರಿಗೆ ಬರೆಯುವುದೇನೆಂದರೆ,


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.


ಯೆಹೋವನು ಹೀಗೆನ್ನುತ್ತಾನೆ, “ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರಮಿಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ.


ಆ ಕಾಲದಲ್ಲಿ ಜನರು, “ಸುಮ್ಮನೆ ಕುಳಿತಿರುವುದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ. ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.


ಹೀಗೆ ಬಡವನಿಗೆ ನಿರೀಕ್ಷೆಯುಂಟಾಗುವುದು, ಅನ್ಯಾಯವು ಬಾಯಿ ಮುಚ್ಚಿಕೊಳ್ಳುವುದು.


ಯೆಹೋವನು ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ;


ಯೆಹೋವನೇ, ಮೊರೆಯಿಟ್ಟಿದ್ದೇನೆ; ನನ್ನನ್ನು ನಿರಾಶೆಪಡಿಸಬೇಡ. ದುಷ್ಟರಿಗೇ ಆಶಾಭಂಗವಾಗಲಿ; ಅವರು ಸ್ತಬ್ಧರಾಗಿ ಪಾತಾಳಕ್ಕೆ ಬೀಳಲಿ.


“ಯೆಹೋವನಾದ ನಾನೇ ಅದನ್ನು ಕಾಯುತ್ತೇನೆ. ಪ್ರತಿ ಕ್ಷಣವೂ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ; ಯಾರೂ ಅದಕ್ಕೆ ಕೇಡು ಮಾಡದ ಹಾಗೆ ಹಗಲಿರುಳೂ ಕಾಯುತ್ತೇನೆ.


ಸ್ವಾಮೀ, ನೀನು ಸ್ವಹಸ್ತದಿಂದ ಮುಯ್ಯಿ ತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನಾಣೆ, ನಿನ್ನ ಜೀವದಾಣೆ ನಿನ್ನ ವಿರೋಧಿಗಳೂ, ನಿನಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ.


ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ, ಲೋಕದಿಂದಲೇ ಅಟ್ಟಿಬಿಡುವರು.


ಅವರನ್ನು ಒಟ್ಟಿಗೆ ಧೂಳಿನಲ್ಲಿ ಅಡಗಿಸಿ, ಅಂಧಕಾರ ಲೋಕದಲ್ಲಿ ಅವರ ಮುಖಕ್ಕೆ ಮುಸುಕು ಹಾಕು.


ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.


ಇಸ್ರಾಯೇಲರನ್ನು ಬೆಳ್ಳಿ, ಬಂಗಾರಗಳ ಸಹಿತವಾಗಿ ಹೊರಗೆ ಬರಮಾಡಿದನು; ಅವರ ಕುಲಗಳಲ್ಲಿ ಎಡವುವವನು ಒಬ್ಬನಾದರೂ ಇರಲಿಲ್ಲ.


ಯೆಹೋವನು ತನ್ನನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾನೆ, ಆದರೆ ಎಲ್ಲಾ ದುಷ್ಟರನ್ನು ಸಂಹರಿಸುತ್ತಾನೆ.


ಕಸ್ದೀಯರ ಯುವತಿಯೇ (ನಗರವೇ), ಮೌನವಾಗಿ ಕುಳಿತುಕೋ, ಕತ್ತಲೊಳಗೆ ಹೋಗು. ಏಕೆಂದರೆ ನೀನು ಇನ್ನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವುದಿಲ್ಲ.


ಆದರೆ ತುಂಬಿತುಳುಕುವ ಜಲಪ್ರವಾಹದಿಂದಲೋ ಎಂಬಂತೆ ನಿನವೆಯ ಸ್ಥಾನವನ್ನು ತೀರಾ ಹಾಳುಮಾಡಿ ತನ್ನ ವಿರೋಧಿಗಳನ್ನು ಹಿಂದಟ್ಟಿ ಅಂಧಕಾರಕ್ಕೆ ತಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು