Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅಗಲಿದರೆ ಯೆಹೋವನೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿ ಅವರ ಮನೆಯವರೊಡನೆ ಒಡಂಬಡಿಕೆ ಮಾಡಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅಗಲಿದರೆ, ಸರ್ವೇಶ್ವರನೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿ ತೀರಿಸಲಿ!” ಎಂದು ಹೇಳಿ ಅವನ ಮನೆಯವರೊಡನೆ ಒಪ್ಪಂದ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅಗಲಿದರೆ ಯೆಹೋವನೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿತೀರಿಸಲಿ ಎಂದು ಹೇಳಿ ಅವನ ಮನೆಯವರೊಡನೆ ಒಡಂಬಡಿಕೆ ಮಾಡಿಕೊಂಡು ತಾನು ದಾವೀದನನ್ನು ಸ್ವಂತ ಪ್ರಾಣದಂತೆ ಪ್ರೀತಿಸುತ್ತಿದ್ದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಒಂದುವೇಳೆ ಆ ಸಮಯದಲ್ಲಿ ಯೋನಾತಾನನ ಕುಟುಂಬವು ದಾವೀದನಿಂದ ಅಗಲಿ ಹೋಗಬೇಕಿದ್ದರೆ ಅಗಲಿ ಹೋಗಲಿ. ದಾವೀದನ ಶತ್ರುಗಳನ್ನು ಯೆಹೋವನು ದಂಡಿಸಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹೀಗೆಯೇ ಯೋನಾತಾನನು ದಾವೀದನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು, “ಅಗಲಿದರೆ ಯೆಹೋವ ದೇವರೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿ ತೀರಿಸಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:16
13 ತಿಳಿವುಗಳ ಹೋಲಿಕೆ  

ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ” ಎಂದು ಪ್ರತಿಜ್ಞೆ ಮಾಡಿದನು.


ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸಿದ್ದರಿಂದ ಅವನೊಡನೆ ಸ್ನೇಹದ ಒಪ್ಪಂದ ಮಾಡಿಕೊಂಡನು.


ಆದರೆ ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳಲ್ಲಿ ಹುಟ್ಟಿದ ಅರ್ಮೋನೀ ಮತ್ತು ಮೆಫೀಬೋಶೆತ್ ಎಂಬ ಇಬ್ಬರು ಮಕ್ಕಳನ್ನೂ, ಮೆಹೋಲದ ಬರ್ಜಿಲ್ಲೈಯ ಮಗನಾದ ಅದ್ರಿಯೇಲನಿಗೆ ಸೌಲನ ಮಗಳಾದ ಮೀಕಲಳಲ್ಲಿ ಹುಟ್ಟಿದ ಐದು ಮಂದಿ ಮಕ್ಕಳನ್ನೂ ಕರೆದುಕೊಂಡು ಅವರನ್ನು ಗಿಬ್ಯೋನ್ಯರಿಗೆ ಒಪ್ಪಿಸಿದರು.


ಫಿಲಿಷ್ಟಿಯರು ಸೌಲನನ್ನೂ ಅವನ ಮಕ್ಕಳನ್ನೂ ಬಿಡದೆ ಹಿಂದಟ್ಟಿ, ಅವನ ಮಕ್ಕಳಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದರು.


ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.


ನಿಮ್ಮ ದೇವರಾದ ಯೆಹೋವನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಆತನು ತಪ್ಪದೆ ಅದನ್ನು ವಿಚಾರಿಸುವನು; ತೀರಿಸದೆ ಹೋಗುವುದು ಪಾಪ.


ಅನಂತರ ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು. ನಾವು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇವಲ್ಲಾ. ಆತನೇ ನನಗೂ ನಿನಗೂ, ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಾಕ್ಷಿಯಾಗಿರಲಿ” ಎಂದು ಹೇಳಿದನು. ತರುವಾಯ ದಾವೀದನು ಹೊರಟುಹೋದನು. ಯೋನಾತಾನನು ಊರೊಳಕ್ಕೆ ಹೋದನು.


ನನ್ನ ಮಗನು ಇಷಯನ ಮಗನೊಡನೆ ಒಡಂಬಡಿಕೆ ಮಾಡಿಕೊಂಡದ್ದನ್ನು ನಿಮ್ಮಲ್ಲಿ ಒಬ್ಬನಾದರೂ ನನಗೆ ತಿಳಿಸಲಿಲ್ಲವಲ್ಲಾ. ನನ್ನ ಸೇವಕನು ನನಗೆ ವಿರೋಧವಾಗಿ ಒಳಸಂಚುಮಾಡುವ ಹಾಗೆ ನನ್ನ ಮಗನೇ, ಅವನನ್ನು ಎಬ್ಬಿಸಿದ್ದಾನೆಂಬುದನ್ನು ಒಬ್ಬನಾದರೂ ನನಗೆ ಯಾಕೆ ತಿಳಿಸಲಿಲ್ಲ? ನೀವು ನನ್ನ ಚಿಂತೆಯನ್ನೇ ಬಿಟ್ಟಿದ್ದೀರಿ” ಅಂದನು


ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು ಇವರಿಗೂ ಇವರ ಸೈನಿಕರಿಗೂ, “ಕಸ್ದೀಯರಿಗೆ ಅಧೀನರಾಗಿರಲಿಕ್ಕೆ ಹೆದರಬೇಡಿರಿ; ಬಾಬೆಲಿನ ಅರಸನಿಗೆ ಅಧೀನರಾಗಿ ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಸುಖವಾಗುವುದು.


ನಾವು ಯೆಹೋವನಿಂದ ವಿಮುಖರಾಗಿ ಸರ್ವಾಂಗಹೋಮ, ಸಮಾಧಾನಯಜ್ಞ, ಧಾನ್ಯ ನೈವೇದ್ಯ ಇವುಗಳನ್ನು ಸಮರ್ಪಿಸುವುದಕ್ಕೋಸ್ಕರ ಈ ಯಜ್ಞವೇದಿಯನ್ನು ಕಟ್ಟಿದ್ದರೆ ಯೆಹೋವನು ತಾನೇ ನಮ್ಮನ್ನು ಶಿಕ್ಷಿಸಲಿ.


ಅವರಿಬ್ಬರೂ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡರು. ತರುವಾಯ ಯೋನಾತಾನನು ತನ್ನ ಮನೆಗೆ ಹೋದನು. ದಾವೀದನು ಹೋರೆಷದಲ್ಲಿಯೇ ಇದ್ದನು.


ಸ್ವಾಮೀ, ನೀನು ಸ್ವಹಸ್ತದಿಂದ ಮುಯ್ಯಿ ತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನಾಣೆ, ನಿನ್ನ ಜೀವದಾಣೆ ನಿನ್ನ ವಿರೋಧಿಗಳೂ, ನಿನಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು