Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೋನಾತಾನನು ದಾವೀದನಿಗೆ, “ನಾಳೆ ಅಮಾವಾಸ್ಯೆ, ನಿನ್ನ ಸ್ಥಳವು ಬರಿದಾಗಿರುವುದನ್ನು ಅರಸನು ಕಂಡು ನಿನ್ನ ವಿಷಯವಾಗಿ ವಿಚಾರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯೋನಾತಾನನು ದಾವೀದನಿಗೆ, “ನಾಳೆಶುದ್ಧಪಾಡ್ಯಮಿ; ನಿನ್ನ ಸ್ಥಳ ಬರಿದಾಗಿರುವುದನ್ನು ಅರಸನು ಕಂಡು ನಿನ್ನ ವಿಷಯವಾಗಿ ವಿಚಾರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೋನಾತಾನನು ದಾವೀದನಿಗೆ - ನಾಳೆ ಶುದ್ಧಪಾಡ್ಯವು; ನಿನ್ನ ಸ್ಥಳವು ಬರಿದಾಗಿರುವದನ್ನು ಅರಸನು ಕಂಡು ನಿನ್ನ ವಿಷಯವಾಗಿ ವಿಚಾರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೋನಾತಾನನು ದಾವೀದನಿಗೆ, “ನಾಳೆ ಅಮಾವಾಸ್ಯೆಯ ಔತಣ. ನಿನ್ನ ಸ್ಥಳವು ಖಾಲಿಯಾಗಿರುವುದನ್ನು ನನ್ನ ತಂದೆಯು ಕಂಡು, ನೀನು ಹೊರಟುಹೋಗಿರುವೆ ಎಂದು ತಿಳಿದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೋನಾತಾನನು ದಾವೀದನಿಗೆ, “ನಾಳೆ ಅಮಾವಾಸ್ಯೆ; ನೀನು ಅಲ್ಲಿ ಇಲ್ಲದಿರುವುದರಿಂದ ನಿನ್ನ ಸ್ಥಳವು ಬರಿದಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:18
3 ತಿಳಿವುಗಳ ಹೋಲಿಕೆ  

ಅರಸನು ಅಮಾವಾಸ್ಯೆ ದಿನ, ಪದ್ದತಿಯ ಪ್ರಕಾರ ಗೋಡೆಯ ಬಳಿಯಲ್ಲಿರುವ ತನ್ನ ಆಸನದ ಮೇಲೆ ಭೋಜನಕ್ಕೆ ಕುಳಿತುಕೊಂಡನು. ಅರಸನ ಎದುರಾಗಿ ಯೋನಾತಾನನೂ, ಅರಸನ ಪಕ್ಕದಲ್ಲಿ ಅಬ್ನೇರನೂ ಕುಳಿತುಕೊಂಡನು. ಸೌಲನು ದಾವೀದನ ಸ್ಥಳವು ಬರಿದಾಗಿರುವುದನ್ನು ಕಂಡರೂ,


ಅದಕ್ಕೆ ದಾವೀದನು, “ನಾಳೆ ಅಮಾವಾಸ್ಯೆ. ನಾನು ಅರಸನ ಪಂಕ್ತಿಯಲ್ಲಿ ಊಟಮಾಡಬೇಕಾಗಿರುವುದು. ನೀನು ಅಪ್ಪಣೆಕೊಟ್ಟರೆ ನಾನು ಈಗಲೇ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು.


ನೀನು ಮೂರನೆಯ ದಿನದಲ್ಲಿ ಮೊದಲು ಅಡಗಿಕೊಂಡಿದ್ದ ಸ್ಥಳಕ್ಕೆ ಬೇಗ ಬಂದು ಅಲ್ಲಿನ ಕಲ್ಲುಕುಪ್ಪೆಯ ಬಳಿಯಲ್ಲಿ ಕುಳಿತುಕೊಂಡಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು