1 ಸಮುಯೇಲ 20:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೋನಾತಾನನು ಅವನಿಗೆ, “ಇದು ಆಗಲೇಬಾರದು, ನಿನಗೆ ಮರಣವಾಗಕೂಡದು. ನನ್ನ ತಂದೆಯು ಅಲ್ಪಕಾರ್ಯವನ್ನಾಗಲಿ, ಮಹಾಕಾರ್ಯವನ್ನಾಗಲಿ ನನಗೆ ತಿಳಿಸದೇ ಮಾಡುವುದಿಲ್ಲ. ಈ ಕಾರ್ಯವನ್ನು ನನಗೆ ಹೇಗೆ ಮರೆಮಾಡಲು ಸಾಧ್ಯ?” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಯೋನಾತಾನನು ಅವನಿಗೆ, “ಇದು ಎಂದಿಗೂ ಆಗಲೇಬಾರದು; ನಿನಗೆ ಮರಣವಾಗಕೂಡದು. ನನ್ನ ತಂದೆ ಚಿಕ್ಕಕಾರ್ಯವನ್ನಾಗಲಿ ದೊಡ್ಡಕಾರ್ಯವನ್ನಾಗಲಿ ನನಗೆ ತಿಳಿಸದೆ ಮಾಡುವುದಿಲ್ಲ; ಇಂಥ ಕಾರ್ಯವನ್ನು ನನಗೆ ಹೇಗೆ ಮರೆಮಾಡಿಯಾರು? ಇಲ್ಲ, ಇದು ನಿಜವಲ್ಲ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇದು ಆಗಲೇಬಾರದು; ನಿನಗೆ ಮರಣವಾಗಕೂಡದು, ನನ್ನ ತಂದೆಯು ಅಲ್ಪಕಾರ್ಯವನ್ನಾಗಲಿ ಅಧಿಕಕಾರ್ಯವನ್ನಾಗಲಿ ನನಗೆ ತಿಳಿಸದೆ ಮಾಡುವದಿಲ್ಲ; ಈ ಕಾರ್ಯವನ್ನು ನನಗೆ ಹೇಗೆ ಮರೆಮಾಡಾನು? ಆಗುವದಿಲ್ಲ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೋನಾತಾನನು, “ಎಂದಿಗೂ ಇಲ್ಲ. ನನ್ನ ತಂದೆಯು ನಿನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿಲ್ಲ! ನನ್ನ ತಂದೆಯು ನನಗೆ ತಿಳಿಸದೆ ಏನನ್ನೂ ಮಾಡುವುದಿಲ್ಲ. ಅದು ಬಹು ಮುಖ್ಯವಾದದ್ದೇ ಆಗಿರಲಿ ಇಲ್ಲವೆ ಮುಖ್ಯವಾಗಿಲ್ಲದ್ದೇ ಆಗಿರಲಿ, ನನ್ನ ತಂದೆಯು ನನಗೆ ತಿಳಿಸೇ ತಿಳಿಸುತ್ತಾನೆ. ನನ್ನ ತಂದೆಯು ನಿನ್ನನ್ನು ಕೊಲ್ಲಬೇಕೆಂದಿದ್ದರೆ ನಾನು ನಿನಗೆ ತಿಳಿಸುತ್ತಿರಲಿಲ್ಲವೇ?” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೋನಾತಾನನು ಅವನಿಗೆ, “ಅದು ಆಗಬಾರದು. ನೀನು ಸಾಯುವುದಿಲ್ಲ; ನನ್ನ ತಂದೆಯು ನನಗೆ ತಿಳಿಸದೆ ಯಾವ ಚಿಕ್ಕ ಕಾರ್ಯವನ್ನಾದರೂ, ದೊಡ್ಡ ಕಾರ್ಯವನ್ನಾದರೂ ಮಾಡುವುದಿಲ್ಲ. ಈ ಕಾರ್ಯವನ್ನು ಯಾತಕ್ಕೆ ನನ್ನ ತಂದೆಯು ನನಗೆ ಬಚ್ಚಿಟ್ಟನು? ಹಾಗೆ ಆಗದು,” ಎಂದನು. ಅಧ್ಯಾಯವನ್ನು ನೋಡಿ |