1 ಸಮುಯೇಲ 20:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ತರುವುದಕ್ಕಾಗಿ ನನ್ನ ಆಳುಗಳನ್ನು ಕಳುಹಿಸುವೆನು. ನಾನು ಅವನಿಗೆ, ‘ಬಾಣಗಳು ಈಚೆ ಬಿದ್ದಿರುತ್ತವೆ ಅವುಗಳನ್ನು ತೆಗೆದುಕೊಂಡು ಬಾ’ ಎಂದು ಹೇಳಿದರೆ ನೀನು ಬಾ ಯೆಹೋವನ ಆಣೆ ಯಾವ ಕೇಡು ಸಂಭವಿಸದೆ ಸುರಕ್ಷಿತನಾಗಿರುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಾನು ಅವನಿಗೆ, ‘ಬಾಣಗಳು ಈಚೆ ಬಿದ್ದಿರುತ್ತವೆ; ಅವುಗಳನ್ನು ತೆಗೆದುಕೊಂಡು ಬಾ’ ಎಂದು ಹೇಳಿದರೆ ನೀನು ಬಾ; ಸರ್ವೇಶ್ವರನಾಣೆ, ಯಾವ ಕೇಡೂ ಸಂಭವಿಸದೆ ಸುರಕ್ಷಿತನಾಗಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವುಗಳನ್ನು ತರುವದಕ್ಕಾಗಿ ನನ್ನ ಆಳನ್ನು ಕಳುಹಿಸುವೆನು. ನಾನು ಅವನಿಗೆ - ಬಾಣಗಳು ಈಚೆ ಬಿದ್ದಿರುತ್ತವೆ; ಅವುಗಳನ್ನು ತೆಗೆದುಕೊಂಡು ಬಾ ಎಂದು ಹೇಳಿದರೆ ನೀನು ಬಾ; ಯೆಹೋವನಾಣೆ, ಯಾವ ಕೇಡೂ ಸಂಭವಿಸದೆ ಸುರಕ್ಷಿತನಾಗಿರುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನಂತರ ಆ ಬಾಣಗಳನ್ನು ಹುಡುಕಿಕೊಂಡು ಬರಲು ಹುಡುಗನನ್ನು ಕಳುಹಿಸುತ್ತೇನೆ. ಎಲ್ಲವೂ ಒಳಿತಾಗಿದ್ದರೆ ನಾನು ಆ ಹುಡುಗನಿಗೆ, ‘ನೀನು ಬಹು ದೂರ ಹೋಗಿರುವೆ! ಬಾಣಗಳು ನನ್ನ ಹತ್ತಿರದಲ್ಲೇ ಇವೆ. ಹಿಂತಿರುಗಿಬಂದು ಅವುಗಳನ್ನು ತೆಗೆದುಕೋ’ ಎಂದು ಹೇಳುತ್ತೇನೆ. ನಾನು ಆ ರೀತಿ ಹೇಳಿದರೆ, ನೀನು ಅಡಗಿದ್ದ ಸ್ಥಳದಿಂದ ಹೊರಗೆ ಬಾ. ಯೆಹೋವನಾಣೆ, ನೀನು ಸುರಕ್ಷಿತನಾಗಿರುವೆ. ನಿನಗೆ ಯಾವ ಅಪಾಯವೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅನಂತರ ಹುಡುಗನನ್ನು ಕಳುಹಿಸಿ, ‘ಆ ಬಾಣಗಳನ್ನು ಹುಡುಕಿಕೊಂಡು ಬಾ,’ ಎಂದು ಹೇಳುವೆನು. ‘ಆ ಬಾಣಗಳು ನಿನಗೆ ಈಚೆ ಬಿದ್ದಿವೆ, ಅವುಗಳನ್ನು ತೆಗೆದುಕೊಂಡು ಬಾ,’ ಎಂದು ನಾನು ಹುಡುಗನಿಗೆ ಹೇಳಿದರೆ, ನೀನು ಬರಬಹುದು. ಏಕೆಂದರೆ ಯೆಹೋವ ದೇವರಾಣೆ, ನಿನಗೆ ಕೇಡಿಲ್ಲದೆ ಸಮಾಧಾನವಿರುವುದು. ಅಧ್ಯಾಯವನ್ನು ನೋಡಿ |