1 ಸಮುಯೇಲ 20:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅದಕ್ಕೆ ದಾವೀದನು, “ನಿನ್ನ ಕಣ್ಣುಮುಂದೆ ನನಗೆ ದಯೆ ದೊರಕುತ್ತದೆಂಬುದನ್ನು ನಿನ್ನ ತಂದೆಯು ಬಲ್ಲನು. ಆದ್ದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಅಂತರವಿದೆ” ಎಂದು ಖಂಡಿತವಾಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅದಕ್ಕೆ ದಾವೀದನು, “ನಿನಗೆ ನಾನು ಪ್ರೀತಿಪಾತ್ರನೆಂದು ನಿನ್ನ ತಂದೆಗೆ ಗೊತ್ತಿದೆ. ಆದುದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾರೆ. ನಿನ್ನ ಜೀವದಾಣೆ, ಸರ್ವೇಶ್ವರನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಮಾತ್ರ ಅಂತರ,” ಎಂದು ಖಂಡಿತವಾಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅದಕ್ಕೆ ದಾವೀದನು - ನಿನ್ನ ಕಣ್ಣು ಮುಂದೆ ನನಗೆ ದಯೆ ದೊರಕುತ್ತದೆಂಬದನ್ನು ನಿನ್ನ ತಂದೆಯು ಬಲ್ಲನು. ಆದದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನಾಣೆ, ನನಗೂ ಮರಣಕ್ಕೂ ಒಂದು ಗೇಣು ಮಾತ್ರ ಅಂತರವಿದೆ ಎಂದು ಖಂಡಿತವಾಗಿ ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದರೆ ದಾವೀದನು, “ನಾನು ನಿನ್ನ ಗೆಳೆಯನೆಂಬುದು ನಿನ್ನ ತಂದೆಗೆ ಚೆನ್ನಾಗಿ ತಿಳಿದಿದೆ. ನಿನ್ನ ತಂದೆಯು, ‘ಯೋನಾತಾನನಿಗೆ ಇದು ತಿಳಿಯಲೇಬಾರದು. ಅವನಿಗೆ ತಿಳಿದುಬಿಟ್ಟರೆ ಅವನು ತನ್ನ ಹೃದಯದಲ್ಲಿ ದುಃಖಪಟ್ಟು ದಾವೀದನಿಗೆ ಹೇಳಿಬಿಡುತ್ತಾನೆ’ ಎಂದುಕೊಂಡಿದ್ದಾನೆ. ಯೆಹೋವನಾಣೆ, ನಿನ್ನ ಜೀವದಾಣೆ, ನಾನು ಸಾವಿಗೆ ಬಹು ಹತ್ತಿರವಾಗಿದ್ದೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ದಾವೀದನು ಪ್ರಮಾಣಮಾಡಿ, “ನಿನ್ನ ಕಣ್ಣು ಮುಂದೆ ನನಗೆ ದಯೆ ದೊರಕಿತೆಂದು ನಿನ್ನ ತಂದೆಯು ನಿಶ್ಚಲವಾಗಿ ಬಲ್ಲನು. ಆದಕಾರಣ ಅವನು ಯೋನಾತಾನನು ವ್ಯಥೆಪಡದ ಹಾಗೆ, ‘ಅವನು ಇದನ್ನು ತಿಳಿಯಬಾರದು,’ ಎಂದು ಹೇಳುತ್ತಾನೆ. ನಿಶ್ಚಯವಾಗಿ ಯೆಹೋವ ದೇವರಾಣೆ, ನನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ಮಾತ್ರ ದೂರ ಇದೆ,” ಎಂದನು. ಅಧ್ಯಾಯವನ್ನು ನೋಡಿ |