Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಗ ಸೌಲನು ಬಹಳವಾಗಿ ಕೋಪಗೊಂಡು ಯೋನಾತಾನನಿಗೆ, “ಎಲೈ ದುಷ್ಟ ದಾಸಿಯ ಮಗನೇ, ನೀನು ಇಷಯನ ಮಗನೊಡನೆ ಸ್ನೇಹದಿಂದಿರುವುದು ನನಗೆ ಗೊತ್ತಿಲ್ಲವೋ? ಇದರಿಂದ ನಿನಗೂ, ನಿನ್ನನ್ನು ಹೆತ್ತವಳಿಗೂ ಮಾನಭಂಗವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆಗ ಸೌಲನು ಸಿಡಿದೆದ್ದು ಯೋನಾತಾನನಿಗೆ, “ಎಲೋ, ದುಷ್ಟದಾಸಿಯ ಮಗನೇ, ನೀನು ಜೆಸ್ಸೆಯನ ಮಗನೊಡನೆ ಸ್ನೇಹದಿಂದ ಇರುವುದು ನನಗೆ ಗೊತ್ತಿಲ್ಲವೇ? ಈ ಸ್ನೇಹದಿಂದ ನಿನಗೂ ಹೆತ್ತವಳಿಗೂ ಮಾನಭಂಗ ತರುತ್ತಾ ಇರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆಗ ಸೌಲನು ಬಹಳವಾಗಿ ಉರಿಗೊಂಡು ಯೋನಾತಾನನಿಗೆ - ಎಲೋ, ದುಷ್ಟ ದಾಸಿಯ ಮಗನೇ, ನೀನು ಇಷಯನ ಮಗನೊಡನೆ ಸ್ನೇಹದಿಂದಿರುವದು ನನಗೆ ಗೊತ್ತಿಲ್ಲವೋ? ಇದರಿಂದ ನಿನಗೂ ನಿನ್ನನ್ನು ಹೆತ್ತವಳಿಗೂ ಮಾನಭಂಗವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಸೌಲನು ಯೋನಾತಾನನ ಮೇಲೆ ಬಹಳ ಕೋಪಗೊಂಡು, “ನೀನು ಅವಿಧೇಯಳಾದ ದಾಸಿಯ ಮಗ. ನೀನೂ ಅವಳಂತೆಯೇ ಅವಿಧೇಯ. ನೀನು ದಾವೀದನ ಪಕ್ಷವಹಿಸಿರುವುದು ನನಗೆ ಗೊತ್ತಿದೆ. ನೀನು ನಿನಗೂ ಮತ್ತು ನಿನ್ನ ತಾಯಿಗೂ ನಾಚಿಕೆಯನ್ನು ತಂದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಸೌಲನು ಯೋನಾತಾನನ ಮೇಲೆ ಕೋಪಗೊಂಡು ಅವನಿಗೆ, “ವಕ್ರವಾಗಿ ಎದುರು ಬೀಳುವ ಸ್ತ್ರೀಯ ಮಗನೇ, ನಿನಗೆ ನಾಚಿಕೆಯಾಗುವ ಹಾಗೆಯೂ, ಇಷಯನ ಮಗನನ್ನು ನೀನು ಆರಿಸಿಕೊಂಡಿದ್ದೀ ಎಂದು ನಾನರಿಯೆನೋ? ಇದರಿಂದ ನಿನಗೂ ನಿನ್ನನ್ನು ಹೆತ್ತವಳಿಗೂ ಅಸಹ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:30
14 ತಿಳಿವುಗಳ ಹೋಲಿಕೆ  

“ಧರ್ಮನಿಂದಕ” ಎನ್ನಿಸಿಕೊಳ್ಳುವವನು ಸೊಕ್ಕೇರಿದ ಅಹಂಕಾರಿಯಾಗಿ, ಗರ್ವ ಮತ್ತು ಮದದಿಂದ ಪ್ರವರ್ತಿಸುವನು.


ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.


ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ.


ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ಅಗ್ನಿ ನರಕಕ್ಕೆ ಗುರಿಯಾಗುವನು.


ಕಲ್ಲು ಭಾರ, ಮರಳು ಭಾರ, ಎರಡಕ್ಕಿಂತಲೂ ಮೂಢನ ಕೋಪವು ಬಲು ಭಾರ.


ಆತ್ಮವನ್ನು ಸ್ವಾಧೀನಮಾಡಿಕೊಳ್ಳದವನು ಗೋಡೆ ಬಿದ್ದ ಹಾಳೂರಿಗೆ ಸಮಾನ.


ಕೋಪಿಷ್ಠನು ತನಗಾಗುವ ದಂಡನೆಯನ್ನು ಅನುಭವಿಸಲಿ, ಬಿಡಿಸಿದರೆ ಪ್ರತಿಬಾರಿಯೂ ಬಿಡಿಸಬೇಕಾಗುವುದು.


ರಾಜನ ರೋಷವು ಸಿಂಹದ ಗರ್ಜನೆ, ಅವನ ದಯೆಯು ಪೈರಿನ ಇಬ್ಬನಿ.


ಜ್ಞಾನಿಗಳ ನಾಲಿಗೆಯು ತಿಳಿವಳಿಕೆಯನ್ನು ಸಾರ್ಥಕ ಮಾಡುವುದು, ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಾರುವುದು.


ದೀರ್ಘಶಾಂತನು ಕೇವಲ ಬುದ್ಧಿವಂತನು, ಮುಂಗೋಪಿಯು ಮೂರ್ಖತನವನ್ನು ಧ್ವಜವಾಗಿ ಎತ್ತುವನು.


ಕೋಪದಿಂದ ಮೂರ್ಖನಿಗೆ ನಾಶವು, ರೋಷದಿಂದ ಮೂಢನಿಗೆ ಮರಣವು ಸಂಭವಿಸುವುದಲ್ಲವೇ.


ನನ್ನ ಅಣ್ಣನು ಅದಕ್ಕಾಗಿ ನನ್ನನ್ನು ಕರೆದಿದ್ದಾನೆ. ದಯವಿಟ್ಟು ನನಗೆ ಅಪ್ಪಣೆಕೊಡು ನಾನು ಹೋಗಿ ನನ್ನ ಅಣ್ಣಂದಿರನ್ನು ನೋಡಿ ಬರುತ್ತೇನೆ’ ಎಂದು ನನ್ನನ್ನು ಬಹಳವಾಗಿ ಬೇಡಿಕೊಂಡು ಹೋದನು. ಆದ್ದರಿಂದ ಅವನು ಅರಸನ ಪಂಕ್ತಿಗೆ ಬರಲಿಲ್ಲ” ಎಂದು ಉತ್ತರಕೊಟ್ಟನು.


ಆ ಇಷಯನ ಮಗನು ಭೂಲೋಕದಲ್ಲಿರುವವರೆಗೆ ನಿನಗಾದರೂ, ನಿನ್ನ ರಾಜ್ಯಕ್ಕಾದರೂ ನೆಲೆಯಿಲ್ಲ. ಆದುದರಿಂದ ಅವನನ್ನು ಕರಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ. ಅವನು ಸಾಯಬೇಕು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು