Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅವನು ಬಲು ಸಿಟ್ಟುಗೊಂಡು ಪಂಕ್ತಿಯಿಂದೆದ್ದು ಹೋದನು. ತನ್ನ ತಂದೆಯು ದಾವೀದನನ್ನು ಅಪಮಾನಪಡಿಸಿದ್ದರಿಂದ ಯೋನಾತಾನನಿಗೆ ಬಹಳ ದುಃಖವುಂಟಾಗಿ ಅವನು ಆ ದಿನ ಊಟಮಾಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅವನು ಬಲುಸಿಟ್ಟುಗೊಂಡು ಪಂಕ್ತಿಯಿಂದೆದ್ದು ಹೋದನು. ತನ್ನ ತಂದೆ, ದಾವೀದನನ್ನು ಅಪಮಾನಪಡಿಸಿದ್ದರಿಂದ ಯೋನಾತಾನನಿಗೆ ಬಹಳ ದುಃಖವುಂಟಾಗಿ ಅವನು ಆ ದಿವಸ ಊಟಮಾಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅವನು ಬಲು ಸಿಟ್ಟುಗೊಂಡು ಪಂಕ್ತಿಯಿಂದೆದ್ದು ಹೋದನು; ತನ್ನ ತಂದೆಯು ದಾವೀದನನ್ನು ಅಪಮಾನಪಡಿಸಿದದರಿಂದ ಯೋನಾತಾನನಿಗೆ ಬಹಳ ದುಃಖವುಂಟಾಗಿ ಅವನು ಆ ದಿವಸ ಊಟ ಮಾಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಯೋನಾತಾನನು ಬಹಳ ಕೋಪಗೊಂಡು ಊಟದ ಮೇಜನ್ನು ಬಿಟ್ಟುಹೋದನು. ಯೋನಾತಾನನು ತನ್ನ ತಂದೆಯ ಮೇಲೆ ಬಹಳವಾಗಿ ಬೇಸರಗೊಂಡಿದ್ದರಿಂದ ಮತ್ತು ಕೋಪವುಳ್ಳವನಾಗಿದ್ದರಿಂದ ಎರಡನೆ ದಿನ ಔತಣದಲ್ಲಿ ಅವನು ಏನನ್ನೂ ತಿನ್ನಲಿಲ್ಲ. ಸೌಲನು ದಾವೀದನಿಗೆ ಅವಮಾನ ಮಾಡಿದ್ದರಿಂದ ಯೋನಾತಾನನು ಕೋಪಗೊಂಡಿದ್ದನು. ಸೌಲನು ದಾವೀದನನ್ನು ಕೊಲ್ಲಬೇಕೆಂದಿದ್ದುದರಿಂದ ಯೋನಾತಾನನು ದುಃಖಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯೋನಾತಾನನು ಕೋಪದಿಂದ ಉರಿಗೊಂಡು ಮೇಜಿನಿಂದ ಎದ್ದು ಹೋದನು. ಹಬ್ಬದ ಎರಡನೆಯ ದಿನವಾಗಿದ್ದ ಅಂದು ಅವನು ಊಟ ಮಾಡಲಿಲ್ಲ. ಏಕೆಂದರೆ ತನ್ನ ತಂದೆಯು ದಾವೀದನಿಗೆ ಅವಮಾನ ಮಾಡಿದ್ದರಿಂದ, ಅವನಿಗೋಸ್ಕರ ವ್ಯಥೆಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:34
5 ತಿಳಿವುಗಳ ಹೋಲಿಕೆ  

“ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ.


ಆಗ ಯೇಸು ಅವರ ಹೃದಯ ಕಾಠಿಣ್ಯಕ್ಕಾಗಿ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಲು ಅವನು ಕೈ ಚಾಚಿದನು; ಅವನ ಕೈ ವಾಸಿಯಾಯಿತು.


ಪಾಪಮಾಡದೇ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷರು ಲೋಕದಲ್ಲಿ ಇಲ್ಲವೇ ಇಲ್ಲ.


ಕೂಡಲೆ ಸೌಲನು ಅವನನ್ನು ತಿವಿಯಬೇಕೆಂದು ಈಟಿಯನ್ನೆಸೆದನು. ತನ್ನ ತಂದೆಯು ದಾವೀದನನ್ನು ಕೊಲ್ಲುವುದಕ್ಕೆ ನಿಶ್ಚಯಿಸಿದ್ದಾನೆಂಬುದು ಯೋನಾತಾನಾನಿಗೆ ಗೊತ್ತಾಗಲು


ಅವನು ಮರುದಿನ ಬೆಳಿಗ್ಗೆ ಒಬ್ಬ ಹುಡುಗನನ್ನು ಕರೆದುಕೊಂಡು ದಾವೀದನನ್ನು ನೋಡುವುದಕ್ಕಾಗಿ ಹೊಲಕ್ಕೆ ಹೋಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು