Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಅನಂತರ ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು. ನಾವು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇವಲ್ಲಾ. ಆತನೇ ನನಗೂ ನಿನಗೂ, ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಾಕ್ಷಿಯಾಗಿರಲಿ” ಎಂದು ಹೇಳಿದನು. ತರುವಾಯ ದಾವೀದನು ಹೊರಟುಹೋದನು. ಯೋನಾತಾನನು ಊರೊಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಅನಂತರ ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು; ನಾವು ಸರ್ವೇಶ್ವರನ ಹೆಸರಿನಲ್ಲಿ ಆಣೆಯಿಟ್ಟು ಒಪ್ಪಂದಮಾಡಿಕೊಂಡಿದ್ದೇವಲ್ಲವೆ? ಅವರೇ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಂಬಂಧಸಾಕ್ಷಿಯಾಗಿರಲಿ,” ಎಂದು ಹೇಳಿದನು. ಬಳಿಕ ದಾವೀದನು ಹೊರಟುಹೋದನು. ಇತ್ತ ಯೋನಾತಾನನು ಊರಿಗೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಅನಂತರ ಯೋನಾತಾನನು ದಾವೀದನಿಗೆ - ಸಮಾಧಾನದಿಂದ ಹೋಗು; ನಾವು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇವಲ್ಲಾ; ಆತನೇ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಂಬಂಧಸಾಕ್ಷಿಯಾಗಿರಲಿ ಎಂದು ಹೇಳಿದನು. ತರುವಾಯ ದಾವೀದನು ಹೊರಟುಹೋದನು; ಯೋನಾತಾನನು ಊರೊಳಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು. ನಾವಿಬ್ಬರೂ ಗೆಳೆಯರಾಗಿರಲು ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದ್ದೇವೆ. ನಮ್ಮಿಬ್ಬರಿಗೂ ನಮ್ಮ ಸಂತತಿಯವರಿಗೂ ಇರುವ ಸಂಬಂಧಕ್ಕೆ ಯೆಹೋವನೇ ಸಾಕ್ಷಿ ಎಂದು ಹೇಳಿದ್ದೇವೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಆಗ ಯೋನಾತಾನನು ದಾವೀದನಿಗೆ, “ನೀನು ಸಮಾಧಾನವಾಗಿ ಹೋಗು, ಯೆಹೋವ ದೇವರು ಎಂದೆಂದಿಗೂ ನನಗೂ, ನಿನಗೂ, ನನ್ನ ಸಂತಾನಕ್ಕೂ, ನಿನ್ನ ಸಂತಾನಕ್ಕೂ ಸಾಕ್ಷಿಯಾಗಿರಲೆಂದು ಮಧ್ಯದಲ್ಲಿ ಯೆಹೋವ ದೇವರ ಹೆಸರಿನಿಂದ ಆಣೆಯಿಟ್ಟು ನಾವಿಬ್ಬರೂ ಪ್ರಮಾಣ ಮಾಡಿಕೊಂಡೆವಲ್ಲಾ,” ಎಂದನು. ಆಗ ದಾವೀದನು ಎದ್ದು ಹೋದನು. ಯೋನಾತಾನನು ಪಟ್ಟಣಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:42
10 ತಿಳಿವುಗಳ ಹೋಲಿಕೆ  

ಆಗ ಏಲಿಯು ಆಕೆಗೆ, “ಸಮಾಧಾನದಿಂದ ಹೋಗು; ಇಸ್ರಾಯೇಲಿನ ದೇವರು ನಿನ್ನ ಪ್ರಾರ್ಥನೆಯನ್ನು ನೆರವೇರಿಸಲಿ” ಎಂದನು.


ಅವರಿಬ್ಬರೂ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡರು. ತರುವಾಯ ಯೋನಾತಾನನು ತನ್ನ ಮನೆಗೆ ಹೋದನು. ದಾವೀದನು ಹೋರೆಷದಲ್ಲಿಯೇ ಇದ್ದನು.


ಸೆರೆಮನೆಯ ಯಜಮಾನನು ಈ ಮಾತನ್ನು ಪೌಲನಿಗೆ ತಿಳಿಸಿ; “ಅಧಿಕಾರಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಹೇಳಿಕಳುಹಿಸಿದ್ದಾರೆ, ಆದುದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ” ಎಂದು ಹೇಳಿದನು.


ಆದರೆ ಆತನು ಆ ಹೆಂಗಸಿಗೆ, “ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿದೆ, ಸಮಾಧಾನದಿಂದ ಹೋಗು” ಎಂದು ಹೇಳಿದನು.


ನಾನು ಸತ್ತನಂತರ ನನ್ನ ಮನೆಯ ಮೇಲೆಯೂ ಶಾಶ್ವತವಾದ ನಿನ್ನ ದಯೆಯಿರಲಿ. ಯೆಹೋವನು ನಿನ್ನ ಎಲ್ಲಾ ಶತ್ರುಗಳನ್ನು ಭೂಮಿಯಿಂದ ತೆಗೆದು ಹಾಕಿದರೂ ಅದು ನನ್ನ ಮನೆಯಿಂದ ಅಗಲದಿರಲಿ.


ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ’ ಎಂಬುದೇ.


ಅಗಲಿದರೆ ಯೆಹೋವನೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿ ಅವರ ಮನೆಯವರೊಡನೆ ಒಡಂಬಡಿಕೆ ಮಾಡಿಕೊಂಡು,


ಅವನು ಆಕೆ ತಂದ ಪದಾರ್ಥಗಳನ್ನು ತೆಗೆದುಕೊಂಡು ಆಕೆಗೆ “ಸಮಾಧಾನದಿಂದ ಮನೆಗೆ ಹೋಗು, ನಿನ್ನನ್ನು ನೋಡಿ ನಿನ್ನ ವಿಜ್ಞಾಪನೆಯನ್ನು ಲಾಲಿಸಿದ್ದೇನೆ” ಅಂದನು.


ಒಂದು ದಿನ ದಾವೀದನು, “ಸೌಲನ ಮನೆಯವರಲ್ಲಿ ಯಾರಾದರೂ ಉಳಿದಿದ್ದರೆ, ನಾನು ಅವರಿಗೆ ಯೋನಾತಾನನ ಸಲುವಾಗಿ ದಯೆತೋರಿಸಬೇಕೆಂದಿರುತ್ತೇನೆ” ಎನ್ನಲು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು