Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿನ್ನ ತಂದೆಯು ನನ್ನನ್ನು ಕುರಿತು ವಿಚಾರ ಮಾಡಿದರೆ, ನೀನು, ‘ದಾವೀದನು ತನ್ನ ಊರಾದ ಬೇತ್ಲೆಹೇಮಿಗೆ ಹೋಗಿ ಬರುವುದಕ್ಕೆ ಅಪ್ಪಣೆಯಾಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು. ಅವನ ಗೋತ್ರದವರು ಅಲ್ಲಿ ವಾರ್ಷಿಕ ಯಜ್ಞಮಾಡುತ್ತಾರೆ’ ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿನ್ನ ತಂದೆ ನನ್ನನ್ನು ಕುರಿತು ವಿಚಾರಮಾಡಿದರೆ, ನೀನು, ‘ದಾವೀದನು ತನ್ನ ಊರಾದ ಬೆತ್ಲೆಹೇಮಿಗೆ ಹೋಗಿ ಬರುವುದಕ್ಕೆ ಅಪ್ಪಣೆಯಾಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು; ಅವನ ಗೋತ್ರದವರು ಅಲ್ಲಿ ವಾರ್ಷಿಕ ಬಲಿದಾನ ಮಾಡುತ್ತಾರಂತೆ,’ ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿನ್ನ ತಂದೆಯು ನನ್ನನ್ನು ಕುರಿತು ವಿಚಾರಮಾಡಿದರೆ ನೀನು - ದಾವೀದನು ತನ್ನ ಊರಾದ ಬೇತ್ಲೆಹೇವಿುಗೆ ಹೋಗಿ ಬರುವದಕ್ಕೆ ಅಪ್ಪಣೆಯಾಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು; ಅವನ ಗೋತ್ರದವರು ಅಲ್ಲಿ ವಾರ್ಷಿಕಯಜ್ಞ ಮಾಡುತ್ತಾರಂತೆ ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ಇಲ್ಲದಿರುವುದನ್ನು ನಿಮ್ಮ ತಂದೆಯು ಗಮನಿಸಿದರೆ ಅವನಿಗೆ, ‘ದಾವೀದನು ಬೆತ್ಲೆಹೇಮಿನ ತನ್ನ ಮನೆಗೆ ಹೋಗಲು ಬಯಸಿದನು. ಅವನ ಕುಟುಂಬದವರು ಅಲ್ಲಿ ವಾರ್ಷಿಕಯಜ್ಞದ ಔತಣವನ್ನು ಏರ್ಪಡಿಸಿದ್ದಾರೆ. ಬೆತ್ಲೆಹೇಮಿಗೆ ಹೋಗಿ ತನ್ನ ಕುಟುಂಬದವರ ಜೊತೆಯಿರಲು ಅವಕಾಶ ಕೊಡಬೇಕೆಂದು ದಾವೀದನು ನನ್ನನ್ನು ಕೇಳಿಕೊಂಡನು’ ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಿನ್ನ ತಂದೆಯು ನಾನು ಅಲ್ಲಿ ಇಲ್ಲದಿರುವುದನ್ನು ಕಂಡು, ಶ್ರದ್ಧೆಯಿಂದ ವಿಚಾರಿಸಿ ಅವನು ಎಲ್ಲಿ? ಎಂದು ಕೇಳಿದರೆ, ‘ದಾವೀದನು ತನ್ನ ಊರಾದ ಬೇತ್ಲೆಹೇಮಿಗೆ ಹೋಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು. ಏಕೆಂದರೆ ತನ್ನ ಸಮಸ್ತ ಕುಟುಂಬಕ್ಕೋಸ್ಕರ ವರುಷದ ಯಜ್ಞ ಮಾಡುತ್ತಾರೆ,’ ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:6
6 ತಿಳಿವುಗಳ ಹೋಲಿಕೆ  

ಸೌಲನು ಅವನನ್ನು, “ಹುಡುಗನೇ ನೀನು ಯಾರ ಮಗನು?” ಎಂದು ಕೇಳಿದ್ದಕ್ಕೆ ಅವನು, “ನಾನು ಬೇತ್ಲೆಹೇಮಿನವನೂ ನಿನ್ನ ಸೇವಕನೂ ಆದ ಇಷಯನ ಮಗನು” ಎಂದು ಉತ್ತರಕೊಟ್ಟನು.


ಈ ಹೊತ್ತು ನಮ್ಮ ಊರಿನವರು ಗುಡ್ಡದ ಮೇಲೆ ಯಜ್ಞವನ್ನು ಅರ್ಪಿಸುತ್ತಿರುವುದರಿಂದ ಅವನು ಈಗಲೇ ಇಲ್ಲಿಗೆ ಬಂದಿರುವನು; ಬೇಗನೆ ಹೋಗಿರಿ.


ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದಲ್ಲವೇ?” ಅಂದರು.


ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಲ್ಲಾ ಕುಲಗಳೊಳಗಿಂದ ಆರಿಸಿಕೊಳ್ಳುವನು. ನೀವು ಆ ಸ್ಥಳದಿಂದ ಆತನು ಆರಿಸಿಕೊಳ್ಳುವ ಸ್ಥಳಕ್ಕೆ ಸೇರಿ ಬರಬೇಕು. ಅಲ್ಲೇ ಆತನು ವಾಸಿಸುವನು.


ಅದಕ್ಕೆ ಯೋನಾತಾನನು, “ದಾವೀದನು ‘ಬೇತ್ಲೆಹೇಮಿನಲ್ಲಿ ನಮ್ಮ ಗೋತ್ರದವರು ಯಜ್ಞಮಾಡುತ್ತಾರೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು