Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೋನಾತಾನನು ಅವನಿಗೆ, “ಇದು ಆಗಲೇ ಬಾರದು, ನಿನಗೆ ನನ್ನ ತಂದೆಯಿಂದ ಕೇಡು ಸಿದ್ಧವಾಗಿದ್ದರೆ ಅದನ್ನು ನಿನಗೆ ತಿಳಿಸದಿರುತ್ತೇನೆಯೇ?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಯೋನಾತಾನನು ಅವನಿಗೆ, “ಇದು ಆಗಲೇಬಾರದು; ನಿನಗೆ ನನ್ನ ತಂದೆಯಿಂದ ಕೇಡು ಸಿದ್ಧವಾಗಿದ್ದರೆ ಅದನ್ನು ನಿನಗೆ ನಾನು ತಿಳಿಸದಿರುವೆನೇ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೋನಾತಾನನು ಅವನಿಗೆ - ಇದು ಆಗಲೇಬಾರದು; ನಿನಗೆ ನನ್ನ ತಂದೆಯಿಂದ ಕೇಡು ಸಿದ್ಧವಾಗಿದ್ದರೆ ಅದನ್ನು ನಿನಗೆ ತಿಳಿಸದಿರುವೆನೋ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೋನಾತಾನನು, “ಇಲ್ಲ, ಎಂದೆಂದಿಗೂ ಇಲ್ಲ! ನನ್ನ ತಂದೆಯು ನಿನಗೆ ಕೇಡು ಮಾಡುವುದಕ್ಕಾಗಿ ಉಪಾಯ ಮಾಡುತ್ತಿರುವುದು ನನಗೆ ತಿಳಿದುಬಂದರೆ ನಾನು ನಿನ್ನನ್ನು ಎಚ್ಚರಿಸುತ್ತೇನೆ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಯೋನಾತಾನನು, “ಅದು ನಿನಗೆ ದೂರವಾಗಿರಲಿ. ಏಕೆಂದರೆ ನಿನಗೆ ನನ್ನ ತಂದೆಯಿಂದ ಕೇಡು ಸಿದ್ಧವಾಗಿದ್ದರೆ, ನಾನು ಅದನ್ನು ನಿನಗೆ ತಿಳಿಸದೆ ಇರುವೆನೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:9
6 ತಿಳಿವುಗಳ ಹೋಲಿಕೆ  

ಅನಂತರ ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು. ನಾವು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇವಲ್ಲಾ. ಆತನೇ ನನಗೂ ನಿನಗೂ, ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಾಕ್ಷಿಯಾಗಿರಲಿ” ಎಂದು ಹೇಳಿದನು. ತರುವಾಯ ದಾವೀದನು ಹೊರಟುಹೋದನು. ಯೋನಾತಾನನು ಊರೊಳಕ್ಕೆ ಹೋದನು.


ಬೇಗ ಹೋಗು ನಿಲ್ಲಬೇಡ” ಎಂದು ಕೂಗಿ ಹೇಳಿದನು. ಹುಡುಗನು ಬಾಣಗಳನ್ನು ಕೂಡಿಸಿಕೊಂಡು ಯಜಮಾನನ ಬಳಿಗೆ ಬಂದನು.


ಆದ್ದರಿಂದ ಅವನು ದಾವೀದನಿಗೆ, “ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದಿರುತ್ತಾನೆ. ನೀನು ಜಾಗರೂಕತೆಯಿಂದಿರು. ನಾಳೆ ಬೆಳಿಗ್ಗೆ ಒಂದು ಗುಪ್ತವಾದ ಸ್ಥಳದಲ್ಲಿ ಅಡಗಿಕೊಂಡಿರು.


ನೀನು ಅಡಗಿಕೊಂಡಿರುವ ಹೊಲಕ್ಕೆ ನಾನು ಬಂದು, ನನ್ನ ತಂದೆಯ ಬಳಿಯಲ್ಲಿ ನಿಂತು, ನಿನ್ನ ವಿಷಯವನ್ನು ಮಾತನಾಡಿ, ಅವನಿಂದ ತಿಳಿದು ಬರುವ ವಿಚಾರವನ್ನು ನಿನಗೆ ತಿಳಿಸುವೆನು” ಎಂದು ಹೇಳಿದನು.


ನೀನು ಯೆಹೋವನ ಸನ್ನಿಧಿಯಲ್ಲಿ ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿಯಲ್ಲಾ, ನಾನು ಅಪರಾಧಿಯಾಗಿದ್ದರೆ ನನ್ನನ್ನು ನಿನ್ನ ತಂದೆಗೆ ಒಪ್ಪಿಸುವುದೇಕೆ? ನೀನೇ ನನ್ನನ್ನು ಕೊಂದುಹಾಕು” ಎಂದು ಹೇಳಿದನು.


ದಾವೀದನು, “ನಿನ್ನ ತಂದೆಯು ಬಿರುನುಡಿಯಿಂದ ಉತ್ತರಕೊಟ್ಟರೆ ಅದನ್ನು ಯಾರ ಮುಖಾಂತರವಾಗಿ ತಿಳಿಸುವಿ?” ಎಂದು ಅವನನ್ನು ಕೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು