1 ಸಮುಯೇಲ 22:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವನು, “ನಿನ್ನ ಎಲ್ಲಾ ಸೇವಕರಲ್ಲಿ ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾವನಿದ್ದಾನೆ? ಅವನು ನಿನ್ನ ಆಲೋಚಕರಲ್ಲೊಬ್ಬನು, ನಿನ್ನ ಮನೆಯಲ್ಲಿ ಗೌರವಸ್ಥನೂ ಆಗಿದ್ದನಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅಹೀಮೆಲೆಕನು, “ನಿಮ್ಮ ಎಲ್ಲಾ ಸೇವಕರಲ್ಲಿ, ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾರಿದ್ದಾನೆ? ದಾವೀದನು ನಿಮ್ಮ ಆಲೋಚಕರಲ್ಲೊಬ್ಬನೂ ತಮ್ಮ ಮನೆಯವರಲ್ಲಿ ಗೌರವಾನ್ವಿತನೂ ಆಗಿದ್ದಾನಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಿನ್ನ ಎಲ್ಲಾ ಸೇವಕರಲ್ಲಿ ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾವನಿದ್ದಾನೆ? ಅವನು ನಿನ್ನ ಮಂತ್ರಾಲೋಚಕರಲ್ಲೊಬ್ಬನೂ ನಿನ್ನ ಮನೆಯಲ್ಲಿ ಘನವಂತನೂ ಆಗಿದ್ದಾನಲ್ಲವೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅಹೀಮೆಲೆಕನು, “ದಾವೀದನು ನಿನಗೆ ಬಹಳ ನಂಬಿಗಸ್ತನಾಗಿದ್ದಾನೆ. ದಾವೀದನಷ್ಟು ನಂಬಿಗಸ್ತನು ನಿನ್ನ ಇತರ ಅಧಿಕಾರಿಗಳಲ್ಲಿ ಇಲ್ಲವೇ ಇಲ್ಲ. ದಾವೀದನು ನಿನ್ನ ಸ್ವಂತ ಅಳಿಯ. ದಾವೀದನು ನಿನ್ನ ಅಂಗರಕ್ಷಕ ದಳಪತಿ. ದಾವೀದನನ್ನು ನಿನ್ನ ಸ್ವಂತ ಕುಟುಂಬವೆಲ್ಲ ಗೌರವಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅಹೀಮೆಲೆಕನು ಅರಸನಿಗೆ ಉತ್ತರವಾಗಿ, “ನಿನ್ನ ಸಮಸ್ತ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾರಿದ್ದಾರೆ? ಅವನು ಅರಸನಿಗೆ ಅಳಿಯನೂ ನಿಮ್ಮ ಅಂಗರಕ್ಷಕರ ನಾಯಕನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿ |