Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 22:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಅರಸನು ಅವನಿಗೆ, “ಅಹೀಮೆಲೆಕನೇ ನೀನೂ ನಿನ್ನ ಮನೆಯವರೂ ಸಾಯಲೇ ಬೇಕು” ಎಂದು ಹೇಳಿ ತನ್ನ ಬಳಿಯಲ್ಲಿದ್ದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ಅರಸನು ಅವನಿಗೆ, “ಅಹೀಮೆಲೆಕನೇ, ನೀನೂ ನಿನ್ನ ಮನೆಯವರೂ ಸಾಯಲೇಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ಅರಸನು ಅವನಿಗೆ - ಅಹೀಮೆಲೆಕನೇ, ನೀನೂ ನಿನ್ನ ಮನೆಯವರೂ ಸಾಯಲೇಬೇಕು ಎಂದು ಹೇಳಿ ತನ್ನ ಬಳಿಯಲ್ಲಿದ್ದ ಸಿಪಾಯಿಗಳಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ರಾಜನು, “ಅಹೀಮೆಲೆಕನೇ, ನೀನು ಮತ್ತು ನಿನ್ನ ಬಂಧುಗಳೆಲ್ಲರೂ ಸಾಯಲೇಬೇಕು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅದಕ್ಕೆ ಅರಸನು, “ಅಹೀಮೆಲೆಕನೇ, ನೀನೂ ನಿನ್ನ ತಂದೆಯ ಮನೆಯ ಸಮಸ್ತರೂ ನಿಶ್ಚಯವಾಗಿ ಸಾಯಲೇಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 22:16
14 ತಿಳಿವುಗಳ ಹೋಲಿಕೆ  

ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು, ಗರ್ಜಿಸುವ ಸಿಂಹ ಮತ್ತು ಹುಡುಕಾಡುವ ಕರಡಿಯಂತೆ.


ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದ್ದರಿಂದ, ಕಾವಲುಗಾರರನ್ನು ವಿಚಾರಣೆಮಾಡಿ, ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಬಳಿಕ ಹೆರೋದನು ಯೂದಾಯದಿಂದ ಕೈಸರೈಗೆ ಹೋಗಿ ಅಲ್ಲಿ ಕೆಲವು ಕಾಲ ಇದ್ದನು.


ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು.


ಇದನ್ನು ಕೇಳಿ, ರಾಜನು ಉಗ್ರರೋಷವುಳ್ಳವನಾಗಿ ಬಾಬೆಲಿನ ಸಕಲ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು.


ಆಗ ರಾಜನು ಪಂಡಿತರಿಗೆ ಪ್ರತ್ಯುತ್ತರವಾಗಿ, “ನನ್ನ ಮಾತು ಖಂಡಿತ; ನೀವೇ ಆ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸದಿದ್ದರೆ ನಿಮ್ಮನ್ನು ತುಂಡುತುಂಡಾಗಿ ಕತ್ತರಿಸುವೆನು, ನಿಮ್ಮ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಿಬಿಡುವೆನು.


ಅವನು ಮೊರ್ದೆಕೈಯೊಬ್ಬನ ಮೇಲೆಯೇ ಕೈಯೆತ್ತುವುದು ಸಾಲದೆಂದೆಣಿಸಿ, ಇವನು ಯೆಹೂದ ಜನಾಂಗದವನೆಂದು ಕೇಳಿದ ಮೇಲೆ ಅಹಷ್ವೇರೋಷನ ರಾಜ್ಯದಲ್ಲಿದ್ದ ಮೊರ್ದೆಕೈಯ ಬಂಧುಬಳಗದವರನ್ನು ಅಂದರೆ ಎಲ್ಲಾ ಯೆಹೂದ್ಯರನ್ನು ಸಂಹರಿಸಬೇಕೆಂದು ನಿರ್ಣಯಿಸಿಕೊಂಡನು.


ಈಜೆಬೆಲಳು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೇ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದಳು.


ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹು ಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರು ಜನರು ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.


ಆ ಇಷಯನ ಮಗನು ಭೂಲೋಕದಲ್ಲಿರುವವರೆಗೆ ನಿನಗಾದರೂ, ನಿನ್ನ ರಾಜ್ಯಕ್ಕಾದರೂ ನೆಲೆಯಿಲ್ಲ. ಆದುದರಿಂದ ಅವನನ್ನು ಕರಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ. ಅವನು ಸಾಯಬೇಕು” ಅಂದನು.


ಅದಕ್ಕೆ ಸೌಲನು, “ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದನು.


ಮಕ್ಕಳ ಪಾಪಕ್ಕಾಗಿ ತಂದೆಗೂ, ತಂದೆಯ ಪಾಪಕ್ಕಾಗಿ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು.


ನಾನು ಅವನಿಗೋಸ್ಕರ ದೇವರ ಸನ್ನಿಧಿಯಲ್ಲಿ ವಿಚಾರಮಾಡಿದ್ದು ಇದೇ ಮೊದಲನೆಯ ಸಾರಿಯೋ? ಇದು ನನಗೆ ದೂರವಾಗಿರಲಿ. ಅರಸನು ತನ್ನ ಸೇವಕರ ಮೇಲೆ ಅವನ ಮನೆಯವರ ಮೇಲೆ ಇಂಥ ಮಾತನ್ನು ಹೊರಿಸಬಾರದು. ಈ ವಿಷಯದಲ್ಲಿ ನಿನ್ನ ಸೇವಕನಿಗೆ ಸ್ವಲ್ಪವೂ ಗೊತ್ತಿರಲಿಲ್ಲ” ಎಂದು ಉತ್ತರ ಕೊಟ್ಟನು.


ಸಿಪಾಯಿಗಳಿಗೆ, “ನೀವು ಯೆಹೋವನ ಈ ಯಾಜಕರನ್ನು ಕೊಲ್ಲಿರಿ. ದಾವೀದನು ಓಡಿಹೋದದ್ದು ಗೊತ್ತಿದ್ದರೂ ನನಗೆ ತಿಳಿಸದೇ ಅವನಿಗೆ ಸಹಾಯ ಮಾಡಿದ್ದಾರೆ” ಎಂದು ಹೇಳಿ ಅವರನ್ನು ಕೊಲ್ಲಲು ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಯಾಜಕರ ಮೇಲೆ ಕೈಹಾಕುವುದಕ್ಕೆ ಮನಸ್ಸು ಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು