1 ಸಮುಯೇಲ 22:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಸಿಪಾಯಿಗಳಿಗೆ, “ನೀವು ಯೆಹೋವನ ಈ ಯಾಜಕರನ್ನು ಕೊಲ್ಲಿರಿ. ದಾವೀದನು ಓಡಿಹೋದದ್ದು ಗೊತ್ತಿದ್ದರೂ ನನಗೆ ತಿಳಿಸದೇ ಅವನಿಗೆ ಸಹಾಯ ಮಾಡಿದ್ದಾರೆ” ಎಂದು ಹೇಳಿ ಅವರನ್ನು ಕೊಲ್ಲಲು ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಯಾಜಕರ ಮೇಲೆ ಕೈಹಾಕುವುದಕ್ಕೆ ಮನಸ್ಸು ಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ತನ್ನ ಬಳಿಯಲ್ಲಿದ್ದ ಸಿಪಾಯಿಗಳಿಗೆ, “ನೀವು ಹಿಂದಿರುಗಿ ಸರ್ವೇಶ್ವರನ ಈ ಯಾಜಕರನ್ನು ಕೊಲ್ಲಿರಿ; ದಾವೀದನು ಪಲಾಯನ ಆದದ್ದು ಗೊತ್ತಿದ್ದರೂ ನನಗೆ ತಿಳಿಸದೆ ಅವನಿಗೆ ಸಹಾಯಮಾಡಿದ್ದಾರೆ,” ಎಂದು ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಸರ್ವೇಶ್ವರನ ಯಾಜಕರ ಮೇಲೆ ಕೈಹಾಕುವುದಕ್ಕೆ ಮನಸ್ಸುಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನೀವು ತಿರುಗಿಕೊಂಡು ಯೆಹೋವನ ಈ ಯಾಜಕರನ್ನು ಕೊಲ್ಲಿರಿ; ದಾವೀದನು ಓಡಿಹೋದದ್ದು ಗೊತ್ತಿದ್ದರೂ ನನಗೆ ತಿಳಿಸದೆ ಅವನಿಗೆ ಸಹಾಯಮಾಡಿದ್ದಾರೆ ಎಂದು ಹೇಳಿ ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಯೆಹೋವನ ಯಾಜಕರ ಮೇಲೆ ಕೈಹಾಕುವದಕ್ಕೆ ಮನಸ್ಸುಮಾಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಂತರ ರಾಜನು ತನ್ನ ಸಿಪಾಯಿಗಳಿಗೆ, “ನೀವು ಹೋಗಿ ಯೆಹೋವನ ಯಾಜಕರನ್ನು ಕೊಂದುಹಾಕಿ. ಅವರು ದಾವೀದನ ಪಕ್ಷ ವಹಿಸಿದ್ದಾರೆ. ದಾವೀದನು ಓಡಿಹೋಗುತ್ತಿರುವುದು ತಿಳಿದಿದ್ದರೂ ಅವರು ನನಗೆ ತಿಳಿಸಲಿಲ್ಲ!” ಎಂದನು. ಆದರೆ ಯೆಹೋವನ ಯಾಜಕರನ್ನು ಕೊಲ್ಲಲು ಸೈನಿಕರು ನಿರಾಕರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆ, “ನೀವು ತಿರುಗಿಕೊಂಡು ಯೆಹೋವ ದೇವರ ಯಾಜಕರನ್ನು ಕೊಂದುಹಾಕಿರಿ. ಏಕೆಂದರೆ ಅವರ ಕೈ ದಾವೀದನಿಗೆ ಸಹಾಯಕವಾಗಿದೆ. ಅವನು ಓಡಿ ಹೋಗುವುದನ್ನು ಅವರು ತಿಳಿದಿದ್ದು, ಅದನ್ನು ನನಗೆ ತಿಳಿಸದೆ ಹೋದರು,” ಎಂದನು. ಆದರೆ ಅರಸನ ಸೇವಕರು ಯೆಹೋವ ದೇವರ ಯಾಜಕರ ಮೇಲೆ ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು. ಅಧ್ಯಾಯವನ್ನು ನೋಡಿ |