Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 22:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಒಂದು ದಿನ ಸೌಲನು ತನ್ನ ಎಲ್ಲಾ ಪರಿವಾರದವರ ನಡುವೆ ಕೈಯಲ್ಲಿ ಬರ್ಜಿಯನ್ನು ಹಿಡಿದುಕೊಂಡು, ಗಿಬೆಯ ಗುಡ್ಡದ ಪಿಚುಲ ವೃಕ್ಷದ ಕೆಳಗೆ ಕುಳಿತುಕೊಂಡಿರಲು ದಾವೀದನೂ ಅವನ ಜನರೂ ಅಡಗಿಕೊಂಡಿರುವ ಸ್ಥಳವು ತಿಳಿದುಬಂದಿದೆ ಎಂಬ ಸುದ್ದಿಯು ಅವನಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಒಂದು ದಿನ ಸೌಲನು ತನ್ನ ಎಲ್ಲಾ ಪರಿವಾರದವರ ನಡುವೆ ಕೈಯಲ್ಲಿ ಭರ್ಜಿಯನ್ನು ಹಿಡಿದುಕೊಂಡು ಗಿಬೆಯ ಗುಡ್ಡದ ಪಿಚುಲವೃಕ್ಷದ ಕೆಳಗೆ ಕುಳಿತುಕೊಂಡನು. “ದಾವೀದನೂ ಅವನ ಜನರೂ ಅಡಗಿಕೊಂಡಿರುವ ಸ್ಥಳ ಗೊತ್ತಾಗಿದೆ,” ಎಂಬ ಸುದ್ದಿ ಅವನಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಒಂದು ದಿವಸ ಸೌಲನು ತನ್ನ ಎಲ್ಲಾ ಪರಿವಾರದವರ ನಡುವೆ ಕೈಯಲ್ಲಿ ಬರ್ಜಿಯನ್ನು ಹಿಡಿದುಕೊಂಡು ಗಿಬೆಯ ಗುಡ್ಡದ ಪಿಚುಲವೃಕ್ಷದ ಕೆಳಗೆ ಕೂತುಕೊಂಡಿರಲು ದಾವೀದನೂ ಅವನ ಜನರೂ ಅಡಗಿಕೊಂಡಿರುವ ಸ್ಥಳವು ಗೊತ್ತಾಗಿದೆ ಎಂಬ ಸುದ್ದಿಯು ಅವನಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದಾವೀದನ ಮತ್ತು ಅವನ ಜನರ ಬಗ್ಗೆ ಜನರು ತಿಳಿದಿದ್ದಾರೆಂಬುದು ಸೌಲನಿಗೆ ಗೊತ್ತಾಯಿತು. ಗಿಬೆಯ ಬೆಟ್ಟದ ಮೇಲಿನ ಮರದ ಕೆಳಗೆ ಸೌಲನು ಕುಳಿತಿದ್ದನು. ಸೌಲನ ಕೈಯಲ್ಲಿ ಭರ್ಜಿಯಿತ್ತು. ಸೌಲನ ಅಧಿಕಾರಿಗಳೆಲ್ಲ ಅವನ ಸುತ್ತಲೂ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಒಂದು ದಿನ ದಾವೀದನೂ ಅವನ ಸಂಗಡ ಇದ್ದವರೂ ಅಡಗಿಕೊಂಡಿದ್ದಾರೆ ಎಂಬ ವರ್ತಮಾನವನ್ನು ಸೌಲನು ಕೇಳಿದನು. ಆಗ ಅವನು ಗಿಬೆಯದ ಗುಡ್ಡದಲ್ಲಿ ಒಂದು ಪಿಚುಲ ವೃಕ್ಷದ ಕೆಳಗೆ ತನ್ನ ಈಟಿಯನ್ನು ಕೈಯಲ್ಲಿ ಹಿಡಿದು ಕುಳಿತುಕೊಂಡನು. ಅವನ ಸೇವಕರೆಲ್ಲರು ಸುತ್ತಲೂ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 22:6
7 ತಿಳಿವುಗಳ ಹೋಲಿಕೆ  

ಕೂಡಲೆ ಸೌಲನು ಅವನನ್ನು ತಿವಿಯಬೇಕೆಂದು ಈಟಿಯನ್ನೆಸೆದನು. ತನ್ನ ತಂದೆಯು ದಾವೀದನನ್ನು ಕೊಲ್ಲುವುದಕ್ಕೆ ನಿಶ್ಚಯಿಸಿದ್ದಾನೆಂಬುದು ಯೋನಾತಾನಾನಿಗೆ ಗೊತ್ತಾಗಲು


ಒಂದು ದಿನ ಸೌಲನು ಕೈಯಲ್ಲಿ ಈಟಿಯನ್ನು ಹಿಡಿದುಕೊಂಡು ತನ್ನ ಮನೆಯಲ್ಲಿ ಕುಳಿತುಕೊಂಡಿದ್ದಾಗ ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂದಿತು.


ಮರುದಿನ ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದದ್ದರಿಂದ ಅವನು ಬುದ್ಧಿಗೆಟ್ಟು ಮನೆಯೊಳಗೆ ಕೂಗುತ್ತಿದ್ದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ದಾವೀದನು ವಾಡಿಕೆಯ ಪ್ರಕಾರ ಕಿನ್ನರಿಯನ್ನು ನುಡಿಸುತ್ತಾ ಇದ್ದನು.


ಆಕೆ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ದೆಬೋರಳ ಖರ್ಜೂರ ವೃಕ್ಷವೆಂದು ಹೆಸರುಗೊಂಡ ಮರದ ಕೆಳಗೆ ಕುಳಿತುಕೊಂಡಿರುತ್ತಿದ್ದಳು. ಇಸ್ರಾಯೇಲರು ನ್ಯಾಯತೀರ್ಪಿಗಾಗಿ ಆಕೆಯ ಬಳಿಗೆ ಬರುತ್ತಿದ್ದರು.


ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲ ವೃಕ್ಷವನ್ನು ನೆಟ್ಟು ಅಲ್ಲಿ ನಿತ್ಯದೇವರಾದ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.


ಸೌಲನಾದರೋ ಗಿಬೆಯ ಪ್ರಾಂತ್ಯದ ಅಂತ್ಯಭಾಗವಾಗಿರುವ ಮಿಗ್ರೋನಿನಲ್ಲಿನ ಒಂದು ದಾಳಿಂಬೆ ವೃಕ್ಷದ ಅಡಿಯಲ್ಲಿ ತಂಗಿದ್ದನು. ಅವನ ಜೊತೆಯಲ್ಲಿ ಸುಮಾರು ಆರು ನೂರು ಮಂದಿ ಸೈನಿಕರೂ,


ಅವರ ಎಲುಬುಗಳನ್ನು ಯಾಬೇಷಿನಲ್ಲಿದ್ದ ಪಿಚುಲ ವೃಕ್ಷದ ಕೆಳಗೆ ಸಮಾಧಿಮಾಡಿ, ಏಳು ದಿನ ಉಪವಾಸ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು