1 ಸಮುಯೇಲ 23:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ದಾವೀದನಿಗೆ, “ಭಯಪಡಬೇಡ; ನೀನು ನನ್ನ ತಂದೆಯಾದ ಸೌಲನ ಕೈಗೆ ಸಿಕ್ಕಿಬೀಳುವುದಿಲ್ಲ. ನೀನು ಇಸ್ರಾಯೇಲ್ಯರ ಅರಸನಾಗುವಿ; ನಾನು ನಿನಗೆ ಎರಡನೆಯವನಾಗಿರುವೆನು. ಹೀಗಾಗುವುದೆಂದು ನನ್ನ ತಂದೆಯಾದ ಸೌಲನೂ ತಿಳಿದುಕೊಂಡಿದ್ದಾನೆ” ಎಂದು ಹೇಳಿ, ದೇವರಲ್ಲಿ ಅವನನ್ನು ಬಲಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ದಾವೀದನಿಗೆ, “ಭಯಪಡಬೇಡ; ನೀನು ನನ್ನ ತಂದೆಯಾದ ಸೌಲನ ಕೈಗೆ ಸಿಕ್ಕಿಬೀಳುವುದಿಲ್ಲ; ನೀನು ಇಸ್ರಯೇಲರ ಅರಸನಾಗುವೆ; ನಾನು ನಿನಗೆ ಎರಡನೆಯವನಾಗಿರುವೆನು. ಹೀಗಾಗುವುದೆಂದು ನನ್ನ ತಂದೆ ಸೌಲ ತಿಳಿದುಕೊಂಡಿದ್ದಾರೆ.” ಎಂದು ಹೇಳಿ ದೇವರ ಹೆಸರಿನಲ್ಲಿ ಧೈರ್ಯತುಂಬಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಭಯಪಡಬೇಡ; ನೀನು ನನ್ನ ತಂದೆಯಾದ ಸೌಲನ ಕೈಗೆ ಸಿಕ್ಕಿಬೀಳುವದಿಲ್ಲ; ನೀನು ಇಸ್ರಾಯೇಲ್ಯರ ಅರಸನಾಗುವಿ; ನಾನು ನಿನಗೆ ಎರಡನೆಯವನಾಗಿರುವೆನು. ಹೀಗಾಗುವದೆಂದು ನನ್ನ ತಂದೆಯಾದ ಸೌಲನೂ ತಿಳಿದುಕೊಂಡಿದ್ದಾನೆ ಎಂದು ಹೇಳಿ ದೇವರಲ್ಲಿ ಅವನನ್ನು ಬಲಪಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಹೆದರಬೇಡ, ನನ್ನ ತಂದೆಯಾದ ಸೌಲನು ನಿನಗೆ ತೊಂದರೆ ಮಾಡುವುದಿಲ್ಲ. ನೀನು ಇಸ್ರೇಲಿನ ರಾಜನಾಗುವೆ! ನಾನು ನಿನಗೆ ಎರಡನೆಯವನಾಗುತ್ತೇನೆ. ಇದು ನನ್ನ ತಂದೆಗೂ ಸಹ ತಿಳಿದಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಯೋನಾತಾನನು ಅವನಿಗೆ, “ಭಯಪಡಬೇಡ, ಏಕೆಂದರೆ ನನ್ನ ತಂದೆಯಾದ ಸೌಲನ ಕೈ ನಿನ್ನನ್ನು ಹಿಡಿಯುವುದಿಲ್ಲ. ನೀನು ಇಸ್ರಾಯೇಲಿನ ಮೇಲೆ ಅರಸನಾಗಿರುವಿ. ನಾನು ನಿನಗೆ ಎರಡನೆಯವನಾಗಿರುವೆನು ಮತ್ತು ಹೀಗೆ ಆಗುವುದೆಂದು ನನ್ನ ತಂದೆಯಾದ ಸೌಲನು ಸಹ ತಿಳಿದಿದ್ದಾನೆ,” ಎಂದನು. ಅಧ್ಯಾಯವನ್ನು ನೋಡಿ |