Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 23:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು, “ನಾನು ಹೋಗಿ ಆ ಫಿಲಿಷ್ಟಿಯರನ್ನು ಹೊಡೆಯಬಹುದೋ” ಎಂದು ಯೆಹೋವನನ್ನು ಕೇಳಿದನು. ಆತನು ಅವನಿಗೆ, “ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ಊರನ್ನು ರಕ್ಷಿಸು” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನು, “ನಾನು ಹೋಗಿ ಆ ಫಿಲಿಷ್ಟಿಯರ ಮೇಲೆ ದಾಳಿಮಾಡಲೆ?” ಎಂದು ಸರ್ವೇಶ್ವರನನ್ನು ಕೇಳಿದನು. ಸರ್ವೇಶ್ವರ ಅವನಿಗೆ, “ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಕೆಯೀಲಾ ಊರನ್ನು ರಕ್ಷಿಸು,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ಹೋಗಿ ಆ ಫಿಲಿಷ್ಟಿಯರನ್ನು ಹೊಡಿಯಬಹುದೋ ಎಂದು ಯೆಹೋವನನ್ನು ಕೇಳಿದನು. ಆತನು ಅವನಿಗೆ - ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ಊರನ್ನು ರಕ್ಷಿಸು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದಾವೀದನು, “ನಾನು ಹೋಗಿ ಈ ಫಿಲಿಷ್ಟಿಯರೊಡನೆ ಹೋರಾಡಲೇ?” ಎಂದು ಯೆಹೋವನನ್ನು ಕೇಳಿದನು. ಯೆಹೋವನು ದಾವೀದನಿಗೆ, “ಹೋಗು ಫಿಲಿಷ್ಟಿಯರ ಮೇಲೆ ಆಕ್ರಮಣ ಮಾಡು. ಕೆಯೀಲಾವನ್ನು ರಕ್ಷಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದ್ದರಿಂದ ದಾವೀದನು, “ನಾನು ಈ ಫಿಲಿಷ್ಟಿಯರನ್ನು ಹೊಡೆಯಲು ಹೋಗಲೋ?” ಎಂದು ಯೆಹೋವ ದೇವರನ್ನು ಕೇಳಿದನು. ಅದಕ್ಕೆ ಯೆಹೋವ ದೇವರು, “ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ನಗರವನ್ನು ರಕ್ಷಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 23:2
17 ತಿಳಿವುಗಳ ಹೋಲಿಕೆ  

ಆದುದರಿಂದ ಅವನು ಪುನಃ ಯೆಹೋವನನ್ನು ಕೇಳಿದನು. ಆತನು, “ನೀನೆದ್ದು ಕೆಯೀಲಕ್ಕೆ ಹೋಗು. ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು” ಎಂದು ಉತ್ತರಕೊಟ್ಟನು.


ದಾವೀದನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದಾಗ ಆತನು ಅವನಿಗೆ, “ನೀನು ನೇರವಾಗಿ ಹೋಗಿ ಅವರನ್ನು ಮುತ್ತಿಗೆ ಹಾಕಬೇಡ. ಅವರಿಗೆ ತಿಳಿಯದಂತೆ ಸುತ್ತಿಕೊಂಡು ಹೋಗಿ ಹಿಂಬಾಲಿಸಿ, ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.


ಅದನ್ನು ತಿಳಿದು ದಾವೀದನು ಯೆಹೋವನನ್ನು, “ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ?” ಎಂದು ಕೇಳಿದನು. ಅದಕ್ಕೆ ಯೆಹೋವನು, “ಹೋಗು ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು” ಎಂದು ಉತ್ತರಕೊಟ್ಟನು.


ಯೆಹೋವನೇ, ಮಾನವನ ಮಾರ್ಗವು ಅವನ ಸ್ವಾಧೀನದಲ್ಲಿ ಇಲ್ಲವೆಂದು ನನಗೆ ಗೊತ್ತು. ಮನುಷ್ಯನು ನಡೆದಾಡುತ್ತಾ ಸರಿಯಾದ ಕಡೆಗೆ ತನ್ನ ಹೆಜ್ಜೆಯನ್ನು ಇಡಲಾರನು.


ಆಗ ದಾವೀದನು ಯೆಹೋವನನ್ನು, “ನಾನು ಆ ಗುಂಪನ್ನು ಹಿಂದಟ್ಟಬಹುದೋ, ಅದು ನನಗೆ ಸಿಕ್ಕುವುದೋ?” ಎಂದು ಕೇಳಲು ಆತನು, “ಹಿಂದಟ್ಟು, ಅದು ನಿನಗೆ ಸಿಕ್ಕುವುದು, ನೀನು ಎಲ್ಲರನ್ನೂ ಬಿಡಿಸಿಕೊಂಡು ಬರುವಿ” ಎಂದು ಉತ್ತರಕೊಟ್ಟನು.


ದಾವೀದನ ಬಳಿಗೆ ಓಡಿಬಂದಿದ್ದ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯೀಲಕ್ಕೆ ಬರುವಾಗ ಏಫೋದನ್ನು ತಂದಿದ್ದನು,


ಆಗ ಇಸ್ರಾಯೇಲ್ಯರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಯೆಹೋವನನ್ನು ವಿಚಾರಿಸಲಿಲ್ಲ.


ಯೆಹೋವನು, “ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು” ಎಂದು ಅನ್ನುತ್ತಾನಲ್ಲಾ.


ದಾವೀದನು ದೇವರಾದ ಯೆಹೋವನನ್ನು, “ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ” ಎಂದು ಕೇಳಿದನು. ಅದಕ್ಕೆ ಯೆಹೋವನು, “ಹೋಗು ನಾನು ಅವರನ್ನು ನಿನ್ನ ಕೈಗೆ ಒಪ್ಪಿಸುವೆನು” ಎಂದು ಉತ್ತರ ಕೊಟ್ಟನು.


ಯೆಹೋಶುವನು ಮರಣಹೊಂದಿದ ನಂತರ ಇಸ್ರಾಯೇಲ್ಯರು “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವನನ್ನು ಕೇಳಲು


ಯೆಹೋವನ ಚಿತ್ತವನ್ನು ತಿಳಿದುಕೊಳ್ಳುವುದಕ್ಕೆ ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನೂ ಮತ್ತು ಇಸ್ರಾಯೇಲರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಬೇಕು, ಹಿಂತಿರುಗಬೇಕು, ಅವನ ಮಾತಿನಂತೆ ನಡೆಯಬೇಕು.” ಎಂದು ಆಜ್ಞಾಪಿಸಿದನು.


ಅವರು, “ಆ ಮನುಷ್ಯನು ಇಲ್ಲಿಗೆ ಬರುವನೋ” ಎಂದು ಯೆಹೋವನನ್ನು ವಿಚಾರಿಸಿದಾಗ ಆತನು, “ಬಂದಿದ್ದಾನೆ; ಇಗೋ, ಸಾಮಾನುಗಳ ಮಧ್ಯದಲ್ಲಿ ಅಡಗಿಕೊಂಡಿದ್ದಾನೆ” ಎಂದು ಉತ್ತರಕೊಟ್ಟನು.


ಆದರೆ ದಾವೀದನ ಸೈನಿಕರು ಅವನಿಗೆ, “ನಮಗೆ ಯೆಹೂದ ಸೀಮೆಯಲ್ಲಿಯೇ ಇಷ್ಟು ಭಯವಿರುವಾಗ ಫಿಲಿಷ್ಟಿಯ ಸೈನ್ಯದೊಡನೆ ಯುದ್ಧಮಾಡುವುದಕ್ಕೆ ಕೆಯೀಲಕ್ಕೆ ಹೋದರೆ ಅಲ್ಲಿ ಇನ್ನೂ ಹೆಚ್ಚು ಭಯ ಉಂಟಾಗುತ್ತದೆ” ಅಂದರು.


ಅನಂತರ ದಾವೀದನು ಯೆಹೋವನನ್ನು, “ನಾನು ಯೆಹೂದ ದೇಶದ ಯಾವುದಾದರು ಒಂದು ಪಟ್ಟಣಕ್ಕೆ ಹೋಗಬಹುದೋ?” ಎಂದು ಕೇಳಲು ಆತನು ಹೋಗಬಹುದು ಅಂದನು. ಅವನು ತಿರುಗಿ, “ಯಾವ ಊರಿಗೆ ಹೋಗಲಿ?” ಎಂದು ಕೇಳಿದ್ದಕ್ಕೆ ಹೆಬ್ರೋನಿಗೆ ಹೋಗು ಎಂದು ಉತ್ತರ ಸಿಕ್ಕಿತು.


ಆಗ ಸೌಲನು, “ದೇವಾ, ನಾವು ಫಿಲಿಷ್ಟಿಯರನ್ನು ಬೆನ್ನಟ್ಟಬಹುದೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ?” ಎಂದು ಕೇಳಿಕೊಂಡರೂ ದೇವರು ಅವನಿಗೆ ಆ ದಿನ ಉತ್ತರಕೊಡಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು