Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 23:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಸೌಲನು ಅವರಿಗೆ, “ನೀವು ನನ್ನ ಮೇಲೆ ಕನಿಕರ ತೋರಿಸಿ ಸಹಾಯ ಮಾಡುತ್ತಿರುವುದರಿಂದ ಯೆಹೋವನ ಆಶೀರ್ವಾದವು ನಿಮ್ಮ ಮೇಲಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ಸೌಲನು ಅವರಿಗೆ, “ನೀವು ನನ್ನ ಮೇಲೆ ಕನಿಕರಪಟ್ಟದ್ದರಿಂದ ಸರ್ವೇಶ್ವರನ ಆಶೀರ್ವಾದ ನಿಮ್ಮ ಮೇಲಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ಸೌಲನು ಅವರಿಗೆ - ನೀವು ನನ್ನ ಮೇಲೆ ಕನಿಕರಪಟ್ಟದರಿಂದ ಯೆಹೋವನ ಆಶೀರ್ವಾದವು ನಿಮ್ಮ ಮೇಲಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಸೌಲನು, “ನೀವು ನನಗೆ ಸಹಾಯ ಮಾಡುತ್ತಿರುವುದಕ್ಕಾಗಿ ಯೆಹೋವನು ನಿಮ್ಮನ್ನು ಆಶೀರ್ವದಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಸೌಲನು, “ನೀವು ನನ್ನ ಮೇಲೆ ಕನಿಕರಪಟ್ಟ ಕಾರಣ, ಯೆಹೋವ ದೇವರಿಂದ ನಿಮಗೆ ಆಶೀರ್ವಾದವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 23:21
9 ತಿಳಿವುಗಳ ಹೋಲಿಕೆ  

ನನ್ನ ಮಗನು ಇಷಯನ ಮಗನೊಡನೆ ಒಡಂಬಡಿಕೆ ಮಾಡಿಕೊಂಡದ್ದನ್ನು ನಿಮ್ಮಲ್ಲಿ ಒಬ್ಬನಾದರೂ ನನಗೆ ತಿಳಿಸಲಿಲ್ಲವಲ್ಲಾ. ನನ್ನ ಸೇವಕನು ನನಗೆ ವಿರೋಧವಾಗಿ ಒಳಸಂಚುಮಾಡುವ ಹಾಗೆ ನನ್ನ ಮಗನೇ, ಅವನನ್ನು ಎಬ್ಬಿಸಿದ್ದಾನೆಂಬುದನ್ನು ಒಬ್ಬನಾದರೂ ನನಗೆ ಯಾಕೆ ತಿಳಿಸಲಿಲ್ಲ? ನೀವು ನನ್ನ ಚಿಂತೆಯನ್ನೇ ಬಿಟ್ಟಿದ್ದೀರಿ” ಅಂದನು


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.


ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, “ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ” ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವುದು.


ದುಷ್ಟನು ತನ್ನ ಹೃದಯದ ಸಂಕಲ್ಪಗಳು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಲಾಭಬಡುಕನು ಯೆಹೋವನನ್ನು ದೂಷಿಸಿ ತಿರಸ್ಕರಿಸುತ್ತಾನೆ.


ಇಗೋ, ಆ ಸಾವಿರದ ನೂರು ರೂಪಾಯಿಗಳು ನನ್ನ ಹತ್ತಿರ ಇವೆ; ನಾನು ತೆಗೆದುಕೊಂಡಿದ್ದೆನು” ಎಂದು ಹೇಳಿದನು. ಆಕೆಯು, “ನನ್ನ ಮಗನೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಅಂದಳು.


ನೀವು ದಯವಿಟ್ಟು ಹೋಗಿ ಅವನು ಅಡಗಿಕೊಂಡಿರುವ ಸ್ಥಳವನ್ನು, ಅಲ್ಲಿ ಅವನನ್ನು ಕಂಡವರನ್ನೂ ಸೂಕ್ಷ್ಮವಾಗಿ ವಿಚಾರಿಸಿ, ತಿಳಿದುಕೊಳ್ಳಿರಿ. ಅವನು ಬಹು ಯುಕ್ತಿವಂತನೆಂದು ಕೇಳಿದ್ದೇನೆ.


ಆಗ ದಾವೀದನು ಅವರ ಬಳಿಗೆ ದೂತರನ್ನು ಕಳುಹಿಸಿ, “ನೀವು ನಿಷ್ಠೆಯಿಂದ ನಿಮ್ಮ ಒಡೆಯನಾದ ಸೌಲನ ಶವವನ್ನು ಸಮಾಧಿ ಮಾಡಿದ್ದಕ್ಕಾಗಿ ನಿಮಗೆ ಯೆಹೋವನ ಆಶೀರ್ವಾದವುಂಟಾಗಲಿ.


ನಾನು ದೇವರ ಸಂಕಲ್ಪದಿಂದ ತಂದೆಯ ಮನೆಯನ್ನು ಬಿಟ್ಟು ದೇಶಾಂತರ ಹೋಗುವುದಕ್ಕೆ ಹೊರಟಾಗ ನಾನು ಆಕೆಗೆ, ‘ನಾವು ಹೋಗುವ ಎಲ್ಲಾ ಸ್ಥಳಗಳಲ್ಲಿಯೂ ನನಗೆ ನಿನ್ನಿಂದ ಒಂದು ದಯೆ ಆಗಬೇಕು. ಅದು, ಏನೆಂದರೆ ನೀನು ನನ್ನನ್ನು ಅಣ್ಣನೆಂಬುದಾಗಿ ಹೇಳಬೇಕು’ ಎಂದು ತಿಳಿಸಿದೆನು” ಎಂದನು.


ಸಮುವೇಲನು ಅಲ್ಲಿಗೆ ಹೋದನು. ಸೌಲನು ಅವನನ್ನು ಕಂಡು, “ಯೆಹೋವನು ನಿನ್ನನ್ನು ಆಶೀರ್ವದಿಸಲಿ; ನಾನು ಆತನ ಅಪ್ಪಣೆಯನ್ನು ನೆರವೇರಿಸಿದೆನು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು