1 ಸಮುಯೇಲ 23:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆದುದರಿಂದ ಅವನು ಅಡಗಿಕೊಳ್ಳತಕ್ಕ ಎಲ್ಲಾ ಗುಪ್ತಸ್ಥಳಗಳನ್ನು ಗೊತ್ತುಮಾಡಿಕೊಂಡು ಸರಿಯಾದ ವರ್ತಮಾನವನ್ನು ನನಗೆ ತಲುಪಿಸಿರಿ. ನಾನು ನಿಮ್ಮ ಸಂಗಡ ಬರುವೆನು. ಅವನು ದೇಶದಲ್ಲಿರುವುದಾದರೆ ಎಲ್ಲಾ ಯೆಹೂದ ಪ್ರಜೆಗಳ ಮಧ್ಯದಲ್ಲಾಗಲಿ ಹುಡುಕಿ ಅವನನ್ನು ಕಂಡುಹಿಡಿಯುವೆನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆದ್ದರಿಂದ ಅವನು ಅಡಗಿಕೊಳ್ಳತಕ್ಕ ಎಲ್ಲಾ ಗುಟ್ಟಾದ ಸ್ಥಳಗಳನ್ನು ಗೊತ್ತುಮಾಡಿಕೊಂಡು ಖಚಿತವಾದ ವರ್ತಮಾನವನ್ನು ನನಗೆ ಮುಟ್ಟಿಸಿರಿ. ನಾನು ನಿಮ್ಮ ಸಂಗಡ ಬರುವೆನು. ಅವನು ನಾಡಿನಲ್ಲಿ ಇರುವುದಾದರೆ ಯೆಹೂದ ಪ್ರಜೆಗಳ ಮಧ್ಯದಲ್ಲೆಲ್ಲಾ ಹುಡುಕಿ ಅವನನ್ನು ಹಿಡಿಯುವೆನು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆದದರಿಂದ ಅವನು ಅಡಗಿಕೊಳ್ಳತಕ್ಕ ಎಲ್ಲಾ ಗುಪ್ತಸ್ಥಳಗಳನ್ನು ಗೊತ್ತುಮಾಡಿಕೊಂಡು ನಿಜವಾದ ವರ್ತಮಾನವನ್ನು ನನಗೆ ಮುಟ್ಟಿಸಿರಿ. ನಾನು ನಿಮ್ಮ ಸಂಗಡ ಬರುವೆನು; ಅವನು ದೇಶದಲ್ಲಿರುವದಾದರೆ ಎಲ್ಲಾ ಯೆಹೂದ ಪ್ರಜೆಗಳ ಮಧ್ಯದಲ್ಲಾದರೂ ಹುಡುಕಿ ಅವನನ್ನು ಹಿಡಿಯುವೆನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ದಾವೀದನು ಅಡಗಿಕೊಳ್ಳತಕ್ಕ ಎಲ್ಲಾ ಸ್ಥಳಗಳನ್ನು ಕಂಡುಹಿಡಿಯಿರಿ. ನೀವು ಹಿಂದಿರುಗಿ ನನ್ನ ಬಳಿಗೆ ಬಂದು ಎಲ್ಲವನ್ನೂ ನನಗೆ ತಿಳಿಸಿ. ಅನಂತರ ನಾನು ನಿಮ್ಮೊಂದಿಗೆ ಬರುತ್ತೇನೆ. ದಾವೀದನು ಆ ಪ್ರಾಂತ್ಯದಲ್ಲಿದ್ದರೆ, ನಾನು ಅವನನ್ನು ಕಂಡು ಹಿಡಿಯುತ್ತೇನೆ. ಅವನು ಯೆಹೂದ ಕುಲಗಳಲ್ಲಿ ಎಲ್ಲೇ ಇದ್ದರೂ ಸಹ ನಾನು ಅವನನ್ನು ಕಂಡುಹಿಡಿಯುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅವನು ಅಡಗಿಕೊಂಡಿರುವ ಸಮಸ್ತ ರಹಸ್ಯ ಸ್ಥಳಗಳನ್ನೂ ನೋಡಿ ತಿಳಿದುಕೊಂಡು, ನಿಶ್ಚಯವಾದ ವರ್ತಮಾನವನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ. ಆಗ ನಾನು ನಿಮ್ಮ ಸಂಗಡ ಬಂದು ಅವನು ದೇಶದಲ್ಲಿದ್ದರೆ, ಯೆಹೂದದ ಸಹಸ್ರ ಕುಲದಲ್ಲಿಯೂ ಅವನನ್ನು ಹುಡುಕಿ ಅವನನ್ನು ಹಿಡಿಯುವೆನು,” ಎಂದನು. ಅಧ್ಯಾಯವನ್ನು ನೋಡಿ |