1 ಸಮುಯೇಲ 23:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವನು ದಾವೀದನನ್ನು ಹಿಡಿಯುವ ಕೆಲಸವನ್ನು ಬಿಟ್ಟು ಫಿಲಿಷ್ಟಿಯರ ವಿರುದ್ಧ ಯುದ್ಧಮಾಡಲು ಹೊರಟನು. ಆದುದರಿಂದ ಆ ಬೆಟ್ಟಕ್ಕೆ “ಮಕ್ಹೆಲೋಕೆತ್” ಎಂದರೆ “ಪಾರಾದ ಬಂಡೆ” ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಆದ್ದರಿಂದ ಅವನು ದಾವೀದನನ್ನು ಹಿಡಿಯುವ ಕೆಲಸವನ್ನು ಬಿಟ್ಟು ಫಿಲಿಷ್ಟಿಯರಿಗೆ ವಿರುದ್ಧ ಯುದ್ಧಕ್ಕೆ ಹೊರಟನು. ಈ ಕಾರಣ ಆ ಬೆಟ್ಟಕ್ಕೆ’ಅಡ್ಡಬೆಟ್ಟ’ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅವನು ದಾವೀದನನ್ನು ಹಿಡಿಯುವ ಕೆಲಸದಿಂದ ಹಿಂದಿರುಗಿ ಫಿಲಿಷ್ಟಿಯರಿಗೆ ವಿರೋಧವಾಗಿ ಹೊರಟನು. ಆದದರಿಂದ ಆ ಬೆಟ್ಟಕ್ಕೆ ತಡೆಬೆಟ್ಟ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆದ್ದರಿಂದ ದಾವೀದನನ್ನು ಅಟ್ಟಿಸಿಕೊಂಡು ಹೋಗುವುದನ್ನು ಸೌಲನು ನಿಲ್ಲಿಸಿ ಫಿಲಿಷ್ಟಿಯರೊಡನೆ ಹೋರಾಡಲು ಹೋದನು. ಆದ್ದರಿಂದಲೇ ಜನರು ಆ ಜಾಗವನ್ನು “ಜಾರುಬಂಡೆ” ಎಂದು ಕರೆಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆದ್ದರಿಂದ ಸೌಲನು ದಾವೀದನನ್ನು ಹಿಂದಟ್ಟುವುದನ್ನು ಬಿಟ್ಟು, ಫಿಲಿಷ್ಟಿಯರಿಗೆ ಎದುರಾಗಿ ಹೋದನು. ಆದಕಾರಣ ಆ ಸ್ಥಳಕ್ಕೆ ಸೇಲಾ ಅಮ್ಮಾಲೆಕೋತ್ ಎಂದರೆ, ಅಡ್ಡ ಬೆಟ್ಟ ಎಂದು ಹೆಸರಿಟ್ಟರು. ಅಧ್ಯಾಯವನ್ನು ನೋಡಿ |