Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 23:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದರೆ ದಾವೀದನ ಸೈನಿಕರು ಅವನಿಗೆ, “ನಮಗೆ ಯೆಹೂದ ಸೀಮೆಯಲ್ಲಿಯೇ ಇಷ್ಟು ಭಯವಿರುವಾಗ ಫಿಲಿಷ್ಟಿಯ ಸೈನ್ಯದೊಡನೆ ಯುದ್ಧಮಾಡುವುದಕ್ಕೆ ಕೆಯೀಲಕ್ಕೆ ಹೋದರೆ ಅಲ್ಲಿ ಇನ್ನೂ ಹೆಚ್ಚು ಭಯ ಉಂಟಾಗುತ್ತದೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದರೆ ದಾವೀದನ ಸೈನಿಕರು ಅವನಿಗೆ, “ನಮಗೆ ಯೆಹೂದ ನಾಡಿನಲ್ಲಿಯೇ ಇಷ್ಟು ಆಪತ್ತುಗಳು ಇರುವಲ್ಲಿ ಫಿಲಿಷ್ಟಿಯ ಸೈನ್ಯದೊಡನೆ ಯುದ್ಧಮಾಡುವುದಕ್ಕಾಗಿ ಕೆಯೀಲಾಕ್ಕೆ ಹೋದರೆ ಅಲ್ಲಿ ಎಷ್ಟೋ ಅಧಿಕವಾದ ಗಂಡಾಂತರಗಳು ಕಾದಿರಬಹುದಲ್ಲವೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದರೆ ದಾವೀದನ ಸೈನಿಕರು ಅವನಿಗೆ - ನಮಗೆ ಯೆಹೂದ ಸೀಮೆಯಲ್ಲಿಯೇ ಇಷ್ಟು ಭಯವಿರುವಲ್ಲಿ ಫಿಲಿಷ್ಟಿಯ ಸೈನ್ಯದೊಡನೆ ಯುದ್ಧಮಾಡುವದಕ್ಕಾಗಿ ಕೆಯೀಲಕ್ಕೆ ಹೋದರೆ ಅಲ್ಲಿ ಎಷ್ಟೋ ಅಧಿಕವಾದ ಭಯವುಂಟಾಗುವದಲ್ಲವೇ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ದಾವೀದನ ಜನರು ಅವನಿಗೆ, “ನೋಡು, ನಾವು ಯೆಹೂದದಲ್ಲಿದ್ದರೂ ಹೆದರಿರುವೆವು. ಫಿಲಿಷ್ಟಿಯರ ಸೈನ್ಯವೆಲ್ಲಿದೆಯೋ ಅಲ್ಲಿಗೆ ನಾವು ಹೋದರೆ, ಇನ್ನೆಷ್ಟು ಹೆದರುತ್ತೇವೆ ಎಂಬುದನ್ನು ಯೋಚಿಸು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ದಾವೀದನ ಜನರು ಅವನಿಗೆ, “ಇಗೋ, ನಾವು ಇಲ್ಲಿ ಯೆಹೂದದಲ್ಲಿರುವಾಗಲೇ ಭಯಪಡುತ್ತೇವೆ. ಆದರೆ ನಾವು ಫಿಲಿಷ್ಟಿಯರ ಸೈನ್ಯಗಳಿಗೆ ವಿರೋಧವಾಗಿ ಕೆಯೀಲಾ ನಗರಕ್ಕೆ ಹೋದರೆ ಎಷ್ಟು ಅಧಿಕವಾದ ಭಯವಾಗುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 23:3
7 ತಿಳಿವುಗಳ ಹೋಲಿಕೆ  

ಇಂತೆನ್ನುವ ಯೆಹೋವನು ನನಗೆ, “ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿದ್ದರೆ ಕುದುರೆಗಳೊಂದಿಗೆ ಓಡಿ ಹೇಗೆ ಮುಂದಾಗುವಿ? ಅಪಾಯವಿಲ್ಲದ ದೇಶದಲ್ಲಿ ನೀನು ನಿರ್ಭಯವಾಗಿದ್ದರೂ ಯೊರ್ದನಿನ ದಟ್ಟಡವಿಯಲ್ಲಿ ಏನು ಮಾಡುವಿ?


ನಾನು ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ. ನೀವು, “ಪಕ್ಷಿಗಳಂತೆ ನಿಮ್ಮ ಬೆಟ್ಟಗಳಿಗೆ ಓಡಿಹೋಗಿರಿ” ಎಂದು ಹೇಳುವುದೇಕೆ?


ಅದರ ಇನ್ನೊಂದು ಕಡೆಯಲ್ಲಿ ದಾವೀದನೂ ಅವನ ಜನರೂ ಇದ್ದರು. ದಾವೀದನೂ ಅವನ ಜನರೂ ತಪ್ಪಿಸಿಕೊಳ್ಳುವುದಕ್ಕೆ ತ್ವರೆಪಡುವಷ್ಟರಲ್ಲಿ ಸೌಲನೂ, ಅವನ ಜನರೂ ಬಂದು ಅವರನ್ನು ಮುತ್ತಿಗೆ ಹಾಕುವುದಕ್ಕಿದ್ದರು.


ಆದುದರಿಂದ ಅವನು ಅಡಗಿಕೊಳ್ಳತಕ್ಕ ಎಲ್ಲಾ ಗುಪ್ತಸ್ಥಳಗಳನ್ನು ಗೊತ್ತುಮಾಡಿಕೊಂಡು ಸರಿಯಾದ ವರ್ತಮಾನವನ್ನು ನನಗೆ ತಲುಪಿಸಿರಿ. ನಾನು ನಿಮ್ಮ ಸಂಗಡ ಬರುವೆನು. ಅವನು ದೇಶದಲ್ಲಿರುವುದಾದರೆ ಎಲ್ಲಾ ಯೆಹೂದ ಪ್ರಜೆಗಳ ಮಧ್ಯದಲ್ಲಾಗಲಿ ಹುಡುಕಿ ಅವನನ್ನು ಕಂಡುಹಿಡಿಯುವೆನು” ಅಂದನು.


ಸೌಲನು ತನ್ನನ್ನು ಕೊಲ್ಲಲು ಹೊರಟಿದ್ದಾನೆಂದು ದಾವೀದನು ತಿಳಿದು ಜೀಫ್ ಅರಣ್ಯದ ಹೋರೆಷದಲ್ಲಿ ಅಡಗಿಕೊಂಡಿದ್ದನು.


ಅವನು, “ನಾನು ಹೋಗಿ ಆ ಫಿಲಿಷ್ಟಿಯರನ್ನು ಹೊಡೆಯಬಹುದೋ” ಎಂದು ಯೆಹೋವನನ್ನು ಕೇಳಿದನು. ಆತನು ಅವನಿಗೆ, “ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ಊರನ್ನು ರಕ್ಷಿಸು” ಎಂದು ಉತ್ತರ ಕೊಟ್ಟನು.


ಆದುದರಿಂದ ಅವನು ಪುನಃ ಯೆಹೋವನನ್ನು ಕೇಳಿದನು. ಆತನು, “ನೀನೆದ್ದು ಕೆಯೀಲಕ್ಕೆ ಹೋಗು. ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು