Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 23:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದಾವೀದನ ಬಳಿಗೆ ಓಡಿಬಂದಿದ್ದ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯೀಲಕ್ಕೆ ಬರುವಾಗ ಏಫೋದನ್ನು ತಂದಿದ್ದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದಾವೀದನ ಬಳಿಗೆ ಓಡಿಬಂದಿದ್ದ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯೀಲಕ್ಕೆ ಬರುವಾಗ ‘ಏಫೋದ’ನ್ನು ತಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದಾವೀದನ ಬಳಿಗೆ ಓಡಿಬಂದಿದ್ದ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯೀಲಕ್ಕೆ ಬರುವಾಗ ಏಫೋದನ್ನು ತಂದಿದ್ದನು. ದಾವೀದನು ಕೆಯೀಲದಲ್ಲಿದ್ದಾನೆಂಬ ವರ್ತಮಾನವು ಸೌಲನಿಗೆ ಮುಟ್ಟಿದಾಗ ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 (ಎಬ್ಯಾತಾರನು ದಾವೀದನ ಹತ್ತಿರಕ್ಕೆ ಓಡಿಹೋದಾಗ ತನ್ನೊಂದಿಗೆ ಒಂದು ಏಫೋದನ್ನು ತೆಗೆದುಕೊಂಡಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅಹೀಮೆಲೆಕನ ಮಗ ಅಬಿಯಾತರನು ಕೆಯೀಲಾ ನಗರದಲ್ಲಿ ಇರುವ ದಾವೀದನ ಬಳಿಗೆ ಓಡಿ ಬಂದಾಗ, ಅವನ ಕೈಯಲ್ಲಿ ಏಫೋದು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 23:6
12 ತಿಳಿವುಗಳ ಹೋಲಿಕೆ  

ಅಹೀಟೂಬನ ಮಗನಾದ ಅಹೀಮೆಲೆಕನ ಮಕ್ಕಳಲ್ಲೊಬ್ಬನಾದ ಎಬ್ಯಾತಾರನೆಂಬುವನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಬಂದು,


ಅನಂತರ ಸೌಲನು ಅಹೀಯನಿಗೆ, “ಏಫೋದನ್ನು ತೆಗೆದುಕೊಂಡು ಬಾ” ಎಂದು ಆಜ್ಞಾಪಿಸಿದನು. ಆ ಕಾಲದಲ್ಲಿ ಇವನು ಇಸ್ರಾಯೇಲರೊಳಗೆ ಏಫೋದನ್ನು ಧರಿಸುತ್ತಿದ್ದನಷ್ಟೆ.


ಏಫೋದನ್ನು ಧರಿಸಿಕೊಂಡಿದ್ದ ಅಹೀಯನೂ ಇದ್ದರು. ಆ ಅಹೀಯನು ಶೀಲೋವಿನಲ್ಲಿ ಯೆಹೋವನ ಯಾಜಕನಾಗಿದ್ದ ಏಲಿಯ ಮರಿಮಗನೂ, ಫೀನೆಹಾಸನ ಮೊಮ್ಮಗನೂ, ಈಕಾಬೋದನ ಅಣ್ಣನಾದ ಅಹೀಟೂಬನ ಮಗನೂ ಆಗಿದ್ದನು. ಯೋನಾತಾನನು ಹೋದದ್ದು ಜನರಿಗೂ ಗೊತ್ತಿರಲಿಲ್ಲ.


ಅವನು, “ನಾನು ಹೋಗಿ ಆ ಫಿಲಿಷ್ಟಿಯರನ್ನು ಹೊಡೆಯಬಹುದೋ” ಎಂದು ಯೆಹೋವನನ್ನು ಕೇಳಿದನು. ಆತನು ಅವನಿಗೆ, “ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ಊರನ್ನು ರಕ್ಷಿಸು” ಎಂದು ಉತ್ತರ ಕೊಟ್ಟನು.


ಆಗ ದಾವೀದನು ತನ್ನ ಜನರೊಡನೆ ಕೆಯೀಲಕ್ಕೆ ಹೋಗಿ, ಫಿಲಿಷ್ಟಿಯರೊಡನೆ ಯುದ್ಧಮಾಡಿ, ಅವರನ್ನು ಸಂಪೂರ್ಣವಾಗಿ ಸೋಲಿಸಿ, ಅವರ ಪಶುಗಳನ್ನು ತೆಗೆದುಕೊಂಡು ಕೆಯೀಲದವರನ್ನು ರಕ್ಷಿಸಿದನು.


ದಾವೀದನು ಕೆಯೀಲದಲ್ಲಿದ್ದಾನೆಂಬ ವರ್ತಮಾನವು ಸೌಲನಿಗೆ ಮುಟ್ಟಿತು. ಆಗ ಅವನು, ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದನು. ಅವನು ಅಗುಳಿ ಬಾಗಿಲುಗಳಿಂದ ಭದ್ರವಾಗಿರುವ ಪಟ್ಟಣವನ್ನು ಪ್ರವೇಶಿಸಿದ್ದಾನಲ್ಲಾ ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು ಅಂದುಕೊಂಡು,


ಸೌಲನು ತನಗೆ ಕೇಡುಮಾಡಬೇಕೆಂದಿದ್ದಾನೆ ಎಂಬುದನ್ನು ದಾವೀದನು ತಿಳಿದು ಯಾಜಕನಾದ ಎಬ್ಯಾತಾರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ” ಎಂದನು.


ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ, “ದಯವಿಟ್ಟು ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ” ಎಂದು ಹೇಳಲು ಅವನು ತಂದನು.


ತರುವಾಯ ಅರಸನು ಯಾಜಕನಾದ ಎಬ್ಯಾತಾರನಿಗೆ, “ನೀನು ಅಣತೋತಿನಲ್ಲಿರುವ ನಿನ್ನ ಮನೆಗೆ ಹೋಗು, ನೀನು ಮರಣಕ್ಕೆ ಪಾತ್ರನು. ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆಯಾದ ದಾವೀದನೊಡನೆ ಸಂಚರಿಸುತ್ತಾ ಅವನ ಎಲ್ಲಾ ಕಷ್ಟಗಳಲ್ಲಿ ಪಾಲುಗಾರನಾಗಿದ್ದುದ್ದರಿಂದ ಈ ಹೊತ್ತು ನಿನ್ನನ್ನು ಕೊಲ್ಲಿಸುವುದಿಲ್ಲ” ಎಂದು ಹೇಳಿದನು.


ಏಫೋದೆಂಬ ಕವಚವನ್ನು ನಯವಾಗಿ ಹೊಸೆದ ಹತ್ತಿಯ ದಾರದಿಂದ ಮಾಡಿಸಿ ಅದನ್ನು ಚಿನ್ನ, ನೀಲಿ, ನೇರಳೆ ಹಾಗೂ ಕಡುಗೆಂಪು ದಾರಗಳಿಂದಲೂ ಕಸೂತಿ ಹಾಕಿಸಿ ಅಲಂಕರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು