1 ಸಮುಯೇಲ 24:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೆಹೋವನೇ ನಮ್ಮಿಬ್ಬರ ಮಧ್ಯೆ ವ್ಯಾಜ್ಯವನ್ನು ತೀರಿಸಲಿ. ಆತನೇ ನನಗೋಸ್ಕರ ನಿನಗೆ ಮುಯ್ಯಿ ತೀರಿಸಲಿ. ನಾನಂತೂ ನಿನಗೆ ವಿರೋಧವಾಗಿ ಕೈಯೆತ್ತುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸರ್ವೇಶ್ವರನೇ ನಮ್ಮ ಉಭಯರ ವ್ಯಾಜ್ಯವನ್ನು ತೀರಿಸಲಿ; ಅವರೇ ನನಗಾಗಿ ನಿಮಗೆ ಮುಯ್ಯಿಸಲ್ಲಿಸಲಿ; ನಾನಂತೂ ನಿಮಗೆ ವಿರೋಧವಾಗಿ ಕೈಯೆತ್ತುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯೆಹೋವನೇ ನಮ್ಮ ಉಭಯರ ವ್ಯಾಜ್ಯವನ್ನು ತೀರಿಸಲಿ; ಆತನೇ ನನಗೋಸ್ಕರ ನಿನಗೆ ಮುಯ್ಯಿಸಲ್ಲಿಸಲಿ; ನಾನಂತೂ ನಿನಗೆ ವಿರೋಧವಾಗಿ ಕೈಯೆತ್ತುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆಹೋವನೇ ನಮಗೆ ನ್ಯಾಯಾಧೀಶನಾಗಿರಲಿ! ನೀನು ಮಾಡಿರುವ ತಪ್ಪಿಗಾಗಿ ಯೆಹೋವನು ನಿನ್ನನ್ನು ದಂಡಿಸಲಿ. ಆದರೆ ನಾನು ನಿನ್ನೊಡನೆ ಹೋರಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೆಹೋವ ದೇವರು ನನ್ನ ನಿನ್ನ ಮಧ್ಯದಲ್ಲಿ ನ್ಯಾಯತೀರಿಸಲಿ. ಹೌದು, ಯೆಹೋವ ದೇವರು ತಾವೇ ನನಗೋಸ್ಕರ ನಿನ್ನ ವಿಷಯವಾಗಿ ಮುಯ್ಯಿಗೆ ಮುಯ್ಯಿ ಮಾಡಲಿ. ಆದರೆ ನಾನು ನಿನ್ನ ಮೇಲೆ ನನ್ನ ಕೈಯೆತ್ತುವುದಿಲ್ಲ. ಅಧ್ಯಾಯವನ್ನು ನೋಡಿ |
ಆಗ ಮೂವತ್ತು ಜನರಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ, “ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯವನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇಮಿಸಿದನು.