1 ಸಮುಯೇಲ 24:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ದಾವೀದನ ಮಾತುಗಳು ಮುಗಿದ ನಂತರ ಸೌಲನು, “ದಾವೀದನೇ, ನನ್ನ ಮಗನೇ, ಇದು ನಿನ್ನ ಸ್ವರವೋ?” ಅಂದು ಗಟ್ಟಿಯಾಗಿ ಅತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ದಾವೀದನ ಮಾತುಗಳು ಮುಗಿದನಂತರ ಸೌಲನು, “ದಾವೀದನೇ, ನನ್ನ ಮಗನೇ, ಇದು ನಿಜವಾಗಿಯೂ ನಿನ್ನ ಸ್ವರವೇ?” ಎಂದು ಗಟ್ಟಿಯಾಗಿ ಅತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ದಾವೀದನ ಮಾತುಗಳು ಮುಗಿದನಂತರ ಸೌಲನು - ದಾವೀದನೇ, ನನ್ನ ಮಗನೇ, ಇದು ನಿನ್ನ ಸ್ವರವೋ ಅಂದು ಗಟ್ಟಿಯಾಗಿ ಅತ್ತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ದಾವೀದನು ಈ ಮಾತುಗಳನ್ನು ಹೇಳಿದಾಗ ಸೌಲನು, “ನನ್ನ ಮಗನಾದ ದಾವೀದನೇ, ಇದು ನಿನ್ನ ಧ್ವನಿಯೇ?” ಎಂದು ಕೇಳಿದನು. ನಂತರ ಸೌಲನು ಅಳಲಾರಂಭಿಸಿದನು. ಸೌಲನು ಬಹಳ ಅತ್ತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ದಾವೀದನ ಮಾತುಗಳು ಮುಗಿದ ನಂತರ, ಸೌಲನು ದಾವೀದನಿಗೆ, “ದಾವೀದನೇ, ನನ್ನ ಮಗನೇ, ಇದು ನಿನ್ನ ಸ್ವರವೋ?” ಎಂದು ಗಟ್ಟಿಯಾಗಿ ಅತ್ತನು. ಅಧ್ಯಾಯವನ್ನು ನೋಡಿ |
ಆಗ ಮೂವತ್ತು ಜನರಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ, “ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯವನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇಮಿಸಿದನು.